ಬಪ್ಪನಾಡು ಕ್ಷೇತ್ರದಲ್ಲಿ ವಿಜೃಂಭಣೆಯ ಶ್ರೀರಂಗ ಪೂಜೆ

New Project (27)
Published on

ಮೂಲ್ಕಿ: ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಶ್ರೀ ರಂಗಪೂಜೆ ಹಾಗೂ ದೀಪಾವಳಿ ಬಲಿ ಉತ್ಸವ ವಿಜೃಂಭಣೆಯಿಂದ ನಡೆಯಿತು.

ಕ್ಷೇತ್ರದ ತಂತ್ರಿ ಶಿಬರೂರು ಗೋಪಾಲಕೃಷ್ಣ ತಂತ್ರಿ, ಅರ್ಚಕರಾದ ಶ್ರೀಪತಿ ಉಪಾಧ್ಯಾಯ, ನರಸಿಂಹ ಭಟ್ ಪೌರೋಹಿತ್ಯದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಮಧ್ಯಾಹ್ನ ಮಹಾ ಅನ್ನಸಂತರ್ಪಣೆ ನಡೆಯಿತು. ರಾತ್ರಿ ಶ್ರೀ ದೇವರಿಗೆ ರಂಗಪೂಜೆ, ಬಲೀಂದ್ರ ಪೂಜೆ, ದೀಪಾವಳಿ ಬಲಿ ಉತ್ಸವ ವಿಜೃಂಭಣೆಯಿಂದ ನಡೆಯಿತು.

ಕ್ಷೇತ್ರದ ಆನುವಂಶಿಕ ಮೊಕ್ತೇಸರ ದುಗ್ಗಣ್ಣ ಸಾವಂತ ಅರಸರು, ಕಾರ್ಯನಿರ್ವಹಣಾಧಿಕಾರಿ ಶ್ವೇತಾ ಪಳ್ಳಿ, ಗೋಪಾಲಕೃಷ್ಣ ಭಟ್, ಮೂಲ್ಕಿ ಶ್ರೀ ವೆಂಕಟರಮಣ ದೇವಸ್ಥಾನದ ಮೊಕ್ತೇಸರ ಅತುಲ್ ಕುಡ್ವ, ಜೀರ್ಣೋದ್ಧಾರ ಸಮಿತಿಯ ಸುನಿಲ್ ಆಳ್ವ, ಸುಜಿತ್ ಸಾಲ್ಯಾನ್, ಕಿರಣ್ ಶೆಟ್ಟಿ ಕೋಲ್ನಾಡ್‌ಗುತ್ತು, ಸತೀಶ್ ಭಂಡಾರಿ, ಚಂದ್ರಶೇಖರ್ ಸುವರ್ಣ, ಮಾಜಿ ನ.ಪಂ. ಸದಸ್ಯ ಪುರುಷೋತ್ತಮ ಬಡಗುಹಿತ್ಲು, ವಿದ್ವಾನ್ ನಾಗೇಶ್ ಬಪ್ಪನಾಡು, ಶಿವಶಂಕರ್ ವರ್ಮ, ಕಾರ್ತಿಕ್ ಕೋಟ್ಯಾನ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net