ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಸಾವು

 

ಶ್ರೀರಂಗಪಟ್ಟಣ : ಜೀವನದಲ್ಲಿ ಜಿಗುಪ್ಸೆ ಹೊಂದಿ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆಯೊಬ್ಬರು ಚಿಕಿತ್ಸೆ ಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ತಾಲೂಕಿನ ತಡಗವಾಡಿ ಗ್ರಾಮದ ಭಾಗ್ಯಮ್ಮ(43) ಮೃತರು. ಈಕೆ ಜೀವನದಲ್ಲಿ ಜಿಗುಪ್ಸೆ ಹೊಂದಿ ಸೆ.7ರಂದು ಮನೆಯಲ್ಲೇ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ನಂತರ ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಭಾನುವಾರ ತಡರಾತ್ರಿ ಈಕೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಅರಕೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.