ಭ್ರಷ್ಟಾಚಾರ, ಗಣಿಧಣಿಗಳಿಗೆ ತಹಸೀಲ್ದಾರ್ ರಕ್ಷಣೆ

Latest News

ಸಂಗನಬಸವ ಶಾಲೆಯಲ್ಲಿ ವಿಜ್ಞಾನ ಪ್ರದರ್ಶನ

ವಿಜಯಪುರ: ಇಲ್ಲಿನ ಹೊರವಲಯ ಕವಲಗಿಯಲ್ಲಿರುವ ಸಂಗನಬಸವ ಅಂತಾರಾಷ್ಟ್ರೀಯ ವಸತಿ ಶಾಲೆಯಲ್ಲಿ ಶುಕ್ರವಾರ ಅಂತರ್ ಶಾಲಾ ವಿಜ್ಞಾನ ಪ್ರದರ್ಶನ ಹಮ್ಮಿಕೊಳ್ಳಲಾಗಿತ್ತು. ಎಸ್‌ಆರ್ ಪಿಯು ಕಾಲೇಜಿನ...

ಪುಟ್ನಂಜ ನಾಯಕಿಯ ಹೊಸ ಪ್ರಯತ್ನ: ಕಾಮಾಕ್ಷಿಯಾಗಿ ಬಂದ ಸ್ವಾತಿಮುತ್ತು ಮೀನ

ಬೆಂಗಳೂರು: ಒಂದು ಕಾಲದಲ್ಲಿ ಸಿನಿಪ್ರಿಯರ ಮನ ಗೆದ್ದ ನಟಿ ಮೀನಾ ಕರುನಾಡಿನಲ್ಲಿ ಮಾತ್ರವಲ್ಲದೆ, ಇಡೀ ದಕ್ಷಿಣ ಭಾರತದಲ್ಲಿ ಸಿಕ್ಕಾಪಟ್ಟೆ ಫೇಮಸ್ ಆಗಿದ್ದರು. ‘ಪುಟ್ನಂಜ’,...

17-11-2019ರಿಂದ 23-11-2019ರವರೆಗೆ

ಮೇಷ: ನಿಮ್ಮ ನಿರೀಕ್ಷೆಗಳು ತುಂಬಾ ಇವೆ. ಆದರೆ ಬುಧನ ಜತೆಗಿನ ನಿಮ್ಮ ರಾಶ್ಯಾಧಿಪ ಕುಜನ ಸಂಯೋಜನೆಯಿಂದಾಗಿ ಹಲವು ಮಹತ್ವದ ವಿಷಯಗಳು ನಿಮ್ಮ ನಿರೀಕ್ಷೆಯ...

ನಿತ್ಯ ಭವಿಷ್ಯ: ಈ ರಾಶಿಯವರಿಗೆ ಕೈಯಲ್ಲಿ ಏನೂ ಹಣವಿಲ್ಲ, ಏನು ಮಾಡುವುದು ಎಂಬ ದೊಡ್ಡ ಚಿಂತೆ ಪವಾಡಸದೃಶವಾಗಿ ದೂರವಾಗಲಿದೆ

ಮೇಷ: ಬರೀ ಗಾಳಿಯೊಡನೆ ಗುದ್ದಾಡಿ ಕೈ ನೋವು ಮಾಡಿಕೊಳ್ಳುವಂತಹ ಯುದ್ಧಕ್ಕಾಗಿನ ತಯಾರಿಯನ್ನು ಬಿಡಿ. ಶುಭಸಂಖ್ಯೆ: 2 ವೃಷಭ: ಬಹಳ ಹಿಂದೆ ಪ್ರಾರಂಭಿಸಿದ ಕೆಲಸವೊಂದು ಸದ್ಯದಲ್ಲೇ...

ರಾಷ್ಟ್ರಪತಿ ಆಳ್ವಿಕೆ ರಾಜಕೀಯ ಅಸ್ತ್ರ: ಯಾರ ಕಾಲದಲ್ಲಿ ಹೆಚ್ಚು ಬಳಕೆ ಎಂಬುದರ ಮಾಹಿತಿ ಇಲ್ಲಿದೆ

ಮಹಾರಾಷ್ಟ್ರದಲ್ಲಿ ಯಾವುದೇ ಪಕ್ಷ ಅಥವಾ ಮೈತ್ರಿಕೂಟ ಸರ್ಕಾರ ರಚಿಸಲು ವಿಫಲವಾದ್ದರಿಂದ ಅಲ್ಲಿ ಇತ್ತೀಚೆಗಷ್ಟೇ ರಾಷ್ಟ್ರಪತಿ ಆಳ್ವಿಕೆ ಜಾರಿ ಮಾಡಲಾಗಿದೆ. ರಾಷ್ಟ್ರಪತಿ ಆಳ್ವಿಕೆ ಏಕೆ...

ಶ್ರೀರಂಗಪಟ್ಟಣ: ತಾಲೂಕಿಗೆ ಲೋಕಾಯುಕ್ತ ಅಧಿಕಾರಿಗಳ ಭೇಟಿ ಮತ್ತು ಸಾರ್ವಜನಿಕರಿಂದ ದೂರು ಸ್ವೀಕಾರ ಕುರಿತಂತೆ ಸಂಬಂಧಿಸಿದ ಇಲಾಖೆ ಅಥವಾ ತಾಲೂಕು ಆಡಳಿತದಿಂದ ಯಾವುದೇ ಮಾಹಿತಿ ತಿಳಿಯುತ್ತಿಲ್ಲ. ಭ್ರಷ್ಟಾಚಾರ ಹಾಗೂ ಅಕ್ರಮ ಗಣಿಗಾರಿಕೆ ವಿಚಾರದಲ್ಲಿ ದೂರು ಬರದಂತೆ ತಹಸೀಲ್ದಾರ್ ದಂಧೆಕೋರರಿಗೆ ರಕ್ಷಣೆ ನೀಡುತ್ತಿದ್ದಾರೆ ಎಂದು ಪ್ರಗತಿಪರ ಸಂಘಟನೆ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.

ಪಟ್ಟಣದ ಹೊರವಲಯದ ಪ್ರವಾಸಿ ಮಂದಿರದಲ್ಲಿ ಬುಧವಾರ ಆಯೋಜಿಸಿದ್ದ ಸಾರ್ವಜನಿಕರಿಂದ ದೂರು ಸ್ವೀಕಾರ ಮತ್ತು ತಾಲೂಕು ಅಧಿಕಾರಿಗಳೊಂದಿಗೆ ನಡೆಯುತ್ತಿದ್ದ ಸಭೆಗೆ ಮುತ್ತಿಗೆ ಹಾಕಿದ ರೈತ ಹಾಗೂ ದಲಿತ ಸಂಘಟನೆ ಕಾರ್ಯಕರ್ತರು, ತಹಸೀಲ್ದಾರ್ ಡಿ.ನಾಗೇಶ್ ವಿರುದ್ಧ ದೂರಿನ ಸುರಿಮಳೆಗೈದರು.

ರೈತ ಮುಖಂಡ ಮಂಜೇಶ್‌ಗೌಡ, ಡಿಎಸ್‌ಎಸ್ ಮುಖಂಡರಾದ ಗಂಜಾಂ ರವಿಚಂದ್ರು, ಕುಬೇರ ಮಾತನಾಡಿ, ಕ್ಷೇತ್ರದಲ್ಲಿ ಭ್ರಷ್ಟಾಚಾರ ಹೆಚ್ಚುತ್ತಿದೆ. ಅಧಿಕಾರಿಗಳು ಸಕಾಲದಲ್ಲಿ ಸಾರ್ವಜನಿಕರ ಕೆಲಸಗಳನ್ನು ಮಾಡಿಕೊಡದೆ ಕಚೇರಿಗಳಿಗೆ ಅಲೆದಾಡಿಸುತ್ತಾರೆ. ಕಚೇರಿಯಲ್ಲಿ ಮಧ್ಯವರ್ತಿಗಳ ಹಾವಳಿ ಹೆಚ್ಚಾಗಿದೆ. ಇವೆಲ್ಲವನ್ನು ಕ್ಷೇತ್ರದ ದಂಡಾಧಿಕಾರಿಗಳು ಕಣ್ಣಾರೆ ಕಂಡರೂ, ಭ್ರಷ್ಟ ಸಿಬ್ಬಂದಿ, ಅಕ್ರಮ ಗಣಿಧಣಿಗಳು ಮತ್ತು ಮಧ್ಯವರ್ತಿಗಳ ರಕ್ಷಣೆಗೆ ಕಾವಲಾಗಿ ನಿಂತಿದ್ದಾರೆ ಎಂದು ದೂರಿದರು.

ತಾಲೂಕು ಆಡಳಿತ ಪ್ರಚಾರಕ್ಕಷ್ಟೆ ಗಣಿಗಾರಿಕೆ ನಿಷೇಧಾಜ್ಞೆ ಜಾರಿಗೊಳಿಸಿ ಸುತ್ತೋಲೆ ಹೊರಡಿಸಿದ್ದು, ಪ್ರಭಾವಿ ಧಣಿಗಳಿಗೆ ಗಣಿಗಾರಿಕೆ ಕ್ವಾರೆಗಳಲ್ಲಿ ಸ್ಫೋಟ ನಡೆಸಲು ಮುಕ್ತ ಅವಕಾಶ ನೀಡಿದೆ. ಕ್ಷೇತ್ರದಲ್ಲಿ ಸಾರ್ವಜನಿಕ ಸಭೆ ಆಯೋಜನೆ ಬಗ್ಗೆ ಸರಿಯಾಗಿ ತಿಳಿಸದೆ ಆಯ್ದು ಗುರುತಿಸಿದ ಕೆಲ ಜನರಿಗಷ್ಟೇ ಕರೆದು ಗೌಪ್ಯತೆ ಕಾಪಾಡಲಾಗುತ್ತಿದೆ ಎಂದು ತಹಸೀಲ್ದಾರ್ ವಿರುದ್ಧ ಹರಿಹಯ್ದರು.

ಇದಕ್ಕೆ ಪ್ರತಿಕ್ರಿಯಿಸಿದ ಲೋಕಾಯುಕ್ತ ಇನ್ಸ್‌ಪೆಕ್ಟರ್ ಶಶಿಕುಮಾರ್ ಮತ್ತು ರವಿಕಿರಣ್, ಕ್ಷೇತ್ರದಲ್ಲಿ ಸಭೆೆ ನಡೆಸುವ ಮೊದಲೇ ವಾರ್ತಾ ಇಲಾಖೆಗೆ ಮಾಹಿತಿ ನೀಡಿದ್ದು, ತಾಂತ್ರಿಕ ತಪ್ಪಿನಿಂದ ಪ್ರಕಟಣೆಯಲ್ಲಿ ಏರಿಳಿತವಾಗಿರಬಹುದು. ತಹಸೀಲ್ದಾರ್ ಅಥವಾ ಯಾವುದೇ ಇಲಾಖೆ ಅಧಿಕಾರಿಗಳ ಲೋಪವಿದ್ದಲ್ಲಿ ನಮಗೆ ಅಧಿಕೃತವಾಗಿ ಲಿಖಿತ ದೂರು ನೀಡಿ. ಲೋಕಾಯುಕ್ತ ಕೋರ್ಟ್‌ನಲ್ಲಿ ಇರುವ ವಿಚಾರಣೆಗಳ ಬಗ್ಗೆ ಯಾವುದೇ ಚರ್ಚೆ ಸಲ್ಲದು. ಆದರೆ ಲೋಪಗಳ ಬಗ್ಗೆ ಸೂಕ್ತ ಸಾಕ್ಷಾೃಧಾರ ಒದಗಿಸಿ ಎಂದು ಹೇಳಿದರು.

ರೈತ ಮುಖಂಡ ಕಿರಂಗೂರು ಪಾಪು ಮಾತನಾಡಿ, ಈ ಹಿಂದೆ ಇದ್ದ ಹಾಗೂ ಈಗ ಕಾರ್ಯನಿರ್ವಹಿಸುತ್ತಿರುವ ಪುರಸಭಾ ಮುಖ್ಯಾಧಿಕಾರಿಗಳಿಂದ ಕಚೇರಿಯ ಕೆಲ ಯೋಜನೆ ವಿಚಾರದಲ್ಲಿ ಲೋಪ ಎದುರಾಗಿದೆ ಎಂದು ದೂರು ಸಲ್ಲಿಸಿದರು. ಒಟ್ಟಾರೆ ಸಭೆಯಲ್ಲಿ ಸಾರ್ವಜನಿಕರಿಂದ ಕೇವಲ 4 ದೂರುಗಳು ಮಾತ್ರ ಸಲ್ಲಿಕೆಯಾದವು.

- Advertisement -

Stay connected

278,507FansLike
569FollowersFollow
608,000SubscribersSubscribe

ವಿಡಿಯೋ ನ್ಯೂಸ್

VIDEO| ಲೋಕಸಭಾಧ್ಯಕ್ಷ ಓಂ...

ಜೈಪುರ: ಬಾಲಿವುಡ್​ ನಟಿ ರಾಣಿ ಮುಖರ್ಜಿ ಅವರ ಮುಂದಿನ ಚಿತ್ರ ಮರ್ದಾನಿ-2ಗೆ ಬಿಡುಗಡೆ ಮುನ್ನವೇ ವಿರೋಧದ ಕೂಗು ಕೇಳಿಬಂದಿದೆ. ಚಿತ್ರದ ವಿರುದ್ಧ ರಾಜಸ್ಥಾನದ ಕೋಟಾ ನಗರದ ನಿವಾಸಿಗಳು ಲೋಕಸಭಾ ಸ್ಪೀಕರ್​...

VIDEO| ಭಾರಿ ಭದ್ರತೆಯೊಂದಿಗೆ...

ಶಬರಿಮಲೆ: ವಿವಾದದ ನಡುವೆಯೇ ಭಾರಿ ಭದ್ರತೆಯೊಂದಿಗೆ ಅಯ್ಯಪ್ಪ ದೇವಸ್ಥಾನದ ಮುಖ್ಯ ದ್ವಾರವನ್ನು ಶನಿವಾರ ಸಂಜೆ ತೆರೆಯಲಾಯಿತು. ಸುದೀರ್ಘ ಎರಡು ತಿಂಗಳ ಮಂಡಲ-ಮಕರವಿಳಕ್ಕು ಪೂಜೆಗಾಗಿ ದೇವಸ್ಥಾನ ಬಾಗಿಲನ್ನು ಇಂದು ತೆರೆಯಲಾಗಿದೆ. ದೇವಸ್ಥಾನದ ಪ್ರಧಾನ...

VIDEO| ಹಿರಿಯ ಗಾಯಕಿ...

ಬೆಂಗಳೂರು: ಹಿರಿಯ ಗಾಯಕಿ ಲತಾ ಮಂಗೇಶ್ಕರ್ (90) ಅನಾರೋಗ್ಯದಿಂದ ಬಳಲುತ್ತಿದ್ದು ಕಳೆದ ಆರು ದಿನಗಳಿಂದ ಮುಂಬೈನಲ್ಲಿರುವ ಬ್ರೀಚ್​ ಕ್ಯಾಂಡಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರ ನಡುವೆ ಕಳೆದೆರಡು ದಿನಗಳಿಂದ...

VIDEO: ನೆಟ್ಟಿಗರ ಪ್ರೀತಿಯನ್ನು...

ನವದೆಹಲಿ: ಈ ನಾಲ್ಕು ತಿಂಗಳ ಪುಟಾಣಿ ಕಪ್ಪುಬೆಕ್ಕಿಗೆ ಎರಡು ಮುಖ ! ಅದರ ವಿಲಕ್ಷಣ ರೂಪಕ್ಕೆ ನೆಟ್ಟಿಗರು ಮನಸೋತಿದ್ದಾರೆ. ಎರಡು ಮುಖದ ಬೆಕ್ಕಿನ ಮರಿ ತುಂಬ ಆರೋಗ್ಯಕರವಾಗಿ ಬೆಳೆಯುತ್ತಿದ್ದು ಅದನ್ನು...

VIDEO: ಸುಮ್ಮಸುಮ್ಮನೆ ಟ್ರಾನ್ಸ್​ಫರ್​...

ನವದೆಹಲಿ: ಸರ್ಕಾರಿ ಕೆಲಸದಲ್ಲಿ ಇರುವವರಿಗೆ ವರ್ಗಾವಣೆ ಸಾಮಾನ್ಯ. ಆದರೆ ಕೆಲವು ಸಲ ಮೇಲಧಿಕಾರಿಗಳ ಸರ್ವಾಧಿಕಾರಿ ಧೋರಣೆಯಿಂದ ಅಧೀನ ಅಧಿಕಾರಿಗಳು ಸುಮ್ಮನೆ ವರ್ಗಾವಣೆಯಾಗುತ್ತಾರೆ. ಸಣ್ಣ ತಪ್ಪಿಗೂ ಬೇರೆ ಕಡೆ ವರ್ಗಗೊಳ್ಳಬೇಕಾದ ಪರಿಸ್ಥಿತಿ ಬರುತ್ತದೆ. ಹಾಗೆ ವರ್ಗಾವಣೆಗೊಂಡ...

VIDEO: ಪುನೀತ್ ರಾಜ್​ಕುಮಾರ್​​...

ಬೆಂಗಳೂರು: ಪುನೀತ್​ ರಾಜ್​ಕುಮಾರ್ ಅವರ ಪಿಆರ್​ಕೆ ಸಂಸ್ಥೆಯಲ್ಲಿ ನಿರ್ಮಾಣವಾಗಿರುವ ಮಾಯಾ ಬಜಾರ್​-2016 ಸಿನಿಮಾದ ಟೀಸರ್​ ನಿನ್ನೆ (ನ.15)ರಂದು ಸಂಜೆ 7.30ಕ್ಕೆ ಬಿಡುಗಡೆಯಾಗಿದೆ. 56 ಸೆಕೆಂಡ್​​ಗಳ ಟೀಸರ್​ ಬಿಡುಗಡೆಯಾಗಿದೆ. ನವೆಂಬರ್​ 8, 2016ರಂದು 500 ರೂ.ಹಾಗೂ...

VIDEO| ಆಯುಷ್ಮಾನ್​ ಭವ...

ಬೆಂಗಳೂರು: ಹ್ಯಾಟ್ರಿಕ್​ ಹಿರೋ ಶಿವರಾಜ್​ಕುಮಾರ್​ ಹಾಗೂ ಡಿಂಪಲ್​ ಕ್ವೀನ್​ ರಚಿತಾ ರಾಮ್ ನಟನೆಯ "ಆಯುಷ್ಮಾನ್​ ಭವ" ಚಿತ್ರ ಇಂದು ತೆರೆಕಂಡಿದೆ. ವಿಶೇಷವೆಂದರೆ ಈ ಚಿತ್ರದ ಮೂಲಕ ಸಂಗೀತ ನಿರ್ದೇಶಕ ಗುರುಕಿರಣ್​...

VIDEO| ಐತಿಹಾಸಿಕ ಪಾತ್ರದಲ್ಲಿ...

ಮುಂಬೈ: ಇತ್ತೀಚೆಗೆ ಬಿಡುಗಡೆಯಾದ ಹೌಸ್​ಫುಲ್​-4 ಚಿತ್ರದ ಯಶಸ್ಸಿನಲ್ಲಿ ತೇಲುತ್ತಿರುವ ಬಾಲಿವುಡ್​ ನಟ ಅಕ್ಷಯ್​ ಕುಮಾರ್​ ತಮ್ಮ ಮುಂದಿನ ಐತಿಹಾಸಿಕ ಪ್ರಾಜೆಕ್ಟ್​ಗೆ ತಯಾರಾಗುತ್ತಿದ್ದಾರೆ. ಪೃಥ್ವಿರಾಜ್​ ಹೆಸರಿನ ಇತಿಹಾಸ ಆಧಾರಿತ ಚಿತ್ರದ ಪೂಜಾ...

VIDEO| ಎಸ್ಸೆಸ್ಸೆಲ್ಸಿಯ ಎಲ್ಲ...

ವಡೋದರಾ: ರಿಮೋಟ್​ ಕಂಟ್ರೋಲ್​ನಿಂದ ಆಪರೇಟ್​ ಮಾಡಬಹುದಾದ 35 ದೇಶೀಯ ಹಗುರ ವಿಮಾನ ಮಾದರಿಗಳನ್ನು ತಯಾರಿಸುವ ಮೂಲಕ 17 ವರ್ಷದ ಹುಡುಗನೊಬ್ಬ ಎಲ್ಲರ ಹುಬ್ಬೇರಿಸಿದ್ದಾನೆ. ಪ್ರಿನ್ಸ್​ ಪಂಚಾಲ್ ವಿಮಾನ ಮಾದರಿ ತಯಾರಿಸಿದ ಹುಡುಗ....

ಒಸಮಾ ಬಿನ್​ ಲಾಡೆನ್​,...

ಇಸ್ಲಮಾಬಾದ್​: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ವಿರುದ್ಧ ಹೋರಾಡಲು ಕಾಶ್ಮೀರಿಗಳಿಗೆ ಉಗ್ರ ತರಬೇತಿ ನೀಡಲಾಗುತ್ತಿತ್ತು ಎಂಬುದನ್ನು ಪಾಕಿಸ್ತಾನದ ಮಾಜಿ ಅಧ್ಯಕ್ಷ, ಪಾಕ್​ ಸೇನೆಯ ಮಾಜಿ ಜನರಲ್​ ಫರ್ವೇಜ್​ ಮುಷರಫ್​ ಅವರು ಒಪ್ಪಿಕೊಂಡಿದ್ದಾರೆ....