ದಾಂಡೇಲಿಗೆ ಶ್ರೀಶೈಲ ಜಗದ್ಗುರುಗಳು 23ರಂದು

ದಾಂಡೇಲಿ: ನಗರಕ್ಕೆ ಶ್ರೀಶೈಲ ಪೀಠದ ಜಗದ್ಗುರು ಶ್ರೀ ಡಾ.ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಭಗವತ್ಪಾದರು ಸೆ. 23ರಂದು ಆಗಮಿಸುವರು ಎಂದು ಶ್ರೀಶೈಲ ಶಾಖಾ ಮಠದ ಈಶ್ವರ ಪಂಡಿತಾರಾಧ್ಯ ಸ್ವಾಮೀಜಿ ತಿಳಿಸಿದರು.

ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ 11 ಗಂಟೆಗೆ ನಗರದ ಜಗಜ್ಯೋತಿ ಬಸವೇಶ್ವರ ಮೂರ್ತಿಗೆ ಮಾಲಾರ್ಪಣೆ ಮಾಡುವರು. ಬಳಿಕ ಅವರನ್ನು ಕುಂಭ ಮೇಳ ವಾದ್ಯಮೇಳದೊಂದಿಗೆ ಶ್ರೀ ವೀರಭದ್ರೇಶ್ವರ ದೇವಸ್ಥಾನಕ್ಕೆ ಕರೆತರಲಾಗುವುದು ಎಂದರು. ಸೆ. 23ರಿಂದ 27ರವರೆಗೆ ಕುಂಬಾರವಾಡಾ ಸಮೀಪದ ಕಳಸಾಯಿ ಗ್ರಾಮದ ಶ್ರೀಶೈಲ ಪೀಠದ ಶಾಖಾ ಮಠದಲ್ಲಿ ವಾಸ್ತವ್ಯ ಮಾಡಲಿದ್ದಾರೆ. ಸೆ. 28ರಂದು ಹಳಿಯಾಳದಲ್ಲಿ ಜಗದ್ಗುರುಗಳ ಇಷ್ಟಲಿಂಗ ಮಹಾಪೂಜೆ ನೆರವೇರಲಿದ್ದು, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಯಶಸ್ವಿಗೊಳಿಸಬೇಕು ಎಂದು ಹೇಳಿದರು.

ವೀರಶೈವ ಸಮಾಜದ ಅಧ್ಯಕ್ಷ ಬಸವರಾಜ ಕಲಶೆಟ್ಟಿ, ಗೌರವಾಧ್ಯಕ್ಷ ನಂಜುಂಡಪ್ಪ, ವೀರಭದ್ರೇಶ್ವರ ದೇವಸ್ಥಾನ ಸಮಿತಿ ಅಧ್ಯಕ್ಷ ಚನ್ನಬಸಪ್ಪ ಮುರಗೋಡ, ಬಸವೇಶ್ವರ ಸಮಿತಿ ಅಧ್ಯಕ್ಷ ಯು.ಎಸ್. ಪಾಟೀಲ, ಡಾ. ಶೇಖರ ವಸದ, ವಿ.ಎಸ್. ಹಿರೇಮಠ, ನಿಂಗನಗೌಡ ಪಾಟೀಲ, ಬಾಪುಗೌಡ, ಈರಣ್ಣ ಗೊಡಚಿಮಠ ಇತರರಿದ್ದರು.

Share This Article

ಒಂದು ಬಾರಿ ಇದನ್ನು ಕುಡಿದರೆ ಸಾಕು ನಿಮ್ಮ ಹೊಟ್ಟೆ ಫುಲ್​ ಕ್ಲೀನ್ ಆಗಿಬಿಡುತ್ತೆ! Stomach problems

ತಿಂದ ಆಹಾರ ಸರಿಯಾಗಿ ಜೀರ್ಣವಾಗದಿದ್ದರೆ ಆ ನೋವು ( Stomach problems ) ಅಥವಾ ಕಿರಿಕಿರಿ…

Health Tips : ಸಕ್ಕರೆ ಕಾಯಿಲೆಯಿಂದ ಬಳಲುತ್ತೀದ್ದೀರಾ? ಬೆಳ್ಳಂಬೆಳಗ್ಗೆ ಕರಿಬೇವಿನ ಎಲೆಯ ನೀರನ್ನು ಕುಡಿಯಿರಿ ಸಾಕು

ಬೆಂಗಳೂರು: ಕರಿಬೇವು ಕೇವಲ ಬೆಳಗಿನ ತಿಂಡಿಗೆ ರುಚಿ ಕೊಡಲು ಒಗ್ಗರಣೆಗೆ ಮಾತ್ರ ಮೀಸಲಾಗಿಲ್ಲ. ಕರಿಬೇವಿನ ಎಲೆಗಳು…

ಮನೆಯಲ್ಲೇ ತಯಾರಿಸಿಕೊಳ್ಳಿ ಕೂದಲು ಸಂರಕ್ಷಣೆಯ ಶುದ್ಧ ತೈಲ

ಸದೃಢವಾದ, ಹೊಳೆಯುವ, ನೀಳ ಕೂದಲು ಬೇಕೆಂಬ ಆಸೆ ತುಂಬಾ ಜನರಿಗೆ ಇದ್ದೇ ಇರುತ್ತದೆ. ಜೊತೆಗೆ ಕೂದಲು…