More

    ಗಂಗೊಳ್ಳಿ ಕಾರ್ಯಕ್ಷೇತ್ರದ ಸೃಷ್ಟಿ ಸ್ವಸಹಾಯ ಸಂಘ ವಾರ್ಷಿಕೋತ್ಸವ

    ಗಂಗೊಳ್ಳಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಬೈಂದೂರು ತಾಲೂಕು ಗಂಗೊಳ್ಳಿ ಕಾರ್ಯಕ್ಷೇತ್ರದ ಸೃಷ್ಟಿ ಸ್ವಸಹಾಯ ಸಂಘದ 19ನೇ ವರ್ಷದ ವಾರ್ಷಿಕೋತ್ಸವ ಸಮಾರಂಭ ಗಂಗೊಳ್ಳಿ ಲೈಟ್‌ಹೌಸ್ ಅಂಗನವಾಡಿ ಕೇಂದ್ರದ ವಠಾರದಲ್ಲಿ ಭಾನುವಾರ ನಡೆಯಿತು.

    ಒಕ್ಕೂಟದ ಅಧ್ಯಕ್ಷೆ ನಾಗರತ್ನಾ ಅಧ್ಯಕ್ಷತೆ ವಹಿಸಿದ್ದರು. ಯೋಜನೆಯ ಬೈಂದೂರು ತಾಲೂಕು ಯೋಜನಾಧಿಕಾರಿ ವಿನಾಯಕ್ ಪೈ, ಗಂಗೊಳ್ಳಿ ಗ್ರಾಪಂ ನಿಕಟಪೂರ್ವ ಅಧ್ಯಕ್ಷ ಶ್ರೀನಿವಾಸ್ ಖಾರ್ವಿ, ಜನಜಾಗೃತಿ ವೇದಿಕೆ ಸದಸ್ಯ ಬಿ.ರಾಘವೇಂದ್ರ ಪೈ, ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರಿ ಸಂಘದ ನಿರ್ದೇಶಕ ಚಂದ್ರ ಖಾರ್ವಿ, ಒಕ್ಕೂಟದ ಮಾಜಿ ಉಪಾಧ್ಯಕ್ಷ ವಿವೇಕ್, ತ್ರಾಸಿ ವಲಯ ಮೇಲ್ವಿಚಾರಕ ಚಂದ್ರು, ಮಡಿ ಗೋಪಾಲ ಖಾರ್ವಿ ಉಪಸ್ಥಿತರಿದ್ದರು. ಮುಳುಗು ತಜ್ಞ ದಿನೇಶ್ ಖಾರ್ವಿ ಅವರನ್ನು ಸನ್ಮಾನಿಸಲಾಯಿತು. ಸೇವಾ ಪ್ರತಿನಿಧಿ ರಾಧಾ ಸ್ವಾಗತಿಸಿ, ವಂದಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts