More

    ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಎಸ್‌ಆರ್‌ಪಿ ಕೊಡುಗೆ ಅಪಾರ

    ಬೀಳಗಿ: ಗ್ರಾಮೀಣ ಭಾಗದ ಜನಸಾಮಾನ್ಯರ ಹಿತದೃಷ್ಟಿಯಿಂದ ಮಾಜಿ ಸಚಿವ ಎಸ್.ಆರ್. ಪಾಟೀಲರು ಸುಸಜ್ಜಿತ ಹೈಟೆಕ್ ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರ ಸ್ಥಾಪಿಸಿ ಸ್ವಾಸ್ಥೃ ಹಾಗೂ ಆರೋಗ್ಯವಂತ ಸಮಾಜ ನಿರ್ಮಿಸಲು ಮುಂದಾಗಿರುವ ಕಾರ್ಯಶ್ಲಾಘನೀಯ ಎಂದು ನಿವೃತ್ತ ಕೃಷಿ ವಿಜ್ಞಾನಿ ಎಲ್.ಬಿ. ನಾಯಕ ಹೇಳಿದರು.

    ತಾಲೂಕಿನ ಅಮಲಝರಿ ಗ್ರಾಮದಲ್ಲಿ ಎಸ್.ಆರ್. ಪಾಟೀಲ ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಆರೋಗ್ಯ ಉಚಿತ ತಪಾಸಣೆ ಶಿಬಿರ ಹಾಗೂ ಔಷಧೋಪಚಾರ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

    ಸಾಮಾಜಿಕ ಕಳಕಳಿ, ಚಿಂತನೆಯಲ್ಲಿ ತೊಡಗಿರುವ ಮಾಜಿ ಸಚಿವ ಎಸ್.ಆರ್. ಪಾಟೀಲರು ಉತ್ತರ ಕರ್ನಾಟಕ ಭಾಗದ ಜನರ ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ನೀಡಲು ಅಂತಾರಾಷ್ಟ್ರೀಯಮಟ್ಟದ ಶಿಕ್ಷಣ ಸಂಸ್ಥೆ ಜತೆಗೆ ಈ ಭಾಗದ ಜನರು ಆರೋಗ್ಯವಂತರಾಗಿ ಇರಬೇಕೆನ್ನುವ ಉದ್ದೇಶದಿಂದ ಎಲ್ಲ ಸೌಲಭ್ಯವುಳ್ಳ ಬೃಹತ್ ಆಸ್ಪತ್ರೆ ತೆರೆದು ಅಂದಾಜು 200ಕ್ಕೂ ಅಧಿಕ ಅನುಭವಿ ಹಾಗೂ ನುರಿತ ತಜ್ಞ ವೈದ್ಯಕೀಯ ಸೇವೆ ದೊರೆಯುವಂತೆ ಮಾಡಿದ್ದಾರೆ. ಬೇರೆ ಬೇರೆ ಆಸ್ಪತ್ರೆಯಲ್ಲಿ ದೊರೆಯುವ ಸೌಲಭ್ಯ ಇಲ್ಲಿ ಕೈಗೆಟುಕುವ ದರದಲ್ಲಿ ಸಿಗುತ್ತಿವೆ. ಹೀಗಾಗಿ ಜನತೆ ಇದರ ಲಾಭ ಪಡೆದುಕೊಳ್ಳಬೇಕು ಎಂದರು.

    ಮಾಜಿ ಸಚಿವ ಎಸ್.ಆರ್. ಪಾಟೀಲರು ತಮ್ಮ ರಾಜಕೀಯ ಕ್ಷೇತ್ರದಲ್ಲಿ ಸಾಕಷ್ಟು ಜನಪರ ಮತ್ತು ಶೋಷಿತ ಸಮುದಾಯವರ ಧ್ವನಿಯಾಗಿ ಕೆಲಸ ಮಾಡಿದ್ದಾರೆ. ಕೃಷ್ಣಾ ಮೇಲ್ದಂಡೆ ಯೋಜನೆಯಲ್ಲಿ ಮನೆ-ಮಠ ಹಾಗೂ ಆಸ್ತಿ-ಪಾಸ್ತಿ ಕಳೆದುಕೊಂಡ ನಿರಾಶ್ರಿತರ ಮಕ್ಕಳಿಗೆ ಮೌಲ್ಯಯುತ ಶಿಕ್ಷಣ, ನಿರುದ್ಯೋಗಿಗಳಿಗೆ ಉದ್ಯೋಗ ನೀಡಲು ಸಕ್ಕರೆ ಕಾರ್ಖಾನೆ, ಸಹಕಾರಿ ಕ್ಷೇತ್ರದ ಬ್ಯಾಂಕ್ ಸ್ಥಾಪಿಸಿದ್ದಾರೆ. ನಾಡಿಗೆ ಇವರ ಕೊಡುಗೆ ಅಪಾರವಾಗಿದೆ. ಸಂಸ್ಥೆಯಲ್ಲಿ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿರುವ ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆ ಸಂಸ್ಥಾಪಕ ಅಧ್ಯಕ್ಷ ಎಂ.ಎನ್. ಪಾಟೀಲ ಅವರೂ ಆಸ್ಪತ್ರೆಯ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ ಎಂದರು.

    ಯಡಹಳ್ಳಿ ಗ್ರಾಪಂ ಅಧ್ಯಕ್ಷ ಸದಾಶಿವ ನಂದಗಾವಿ, ಟಿಎಪಿಸಿಎಂಎಸ್ ಮಾಜಿ ಸದಸ್ಯ ದೊಡ್ಡಣ್ಣ ದೇಸಾಯಿ, ಮೋಹನ್ ದೇಸಾಯಿ, ಗೋವಿಂದಪ್ಪಗೌಡ ಪಾಟೀಲ, ಬಸವರಾಜ ಢವಳೇಶ್ವರ, ರಾಚಪ್ಪ ದೇಸಾಯಿ, ನಾರಾಯಣ ಕತ್ತಿ, ಡಾ. ಪೂರ್ಣಿಮಾ, ಡಾ. ಡಿ.ಆರ್. ನಾಯಕ, ಡಾ. ಭಾಗ್ಯಲಕ್ಷ್ಮೀ, ಬಸವಂತಪ್ಪ ನಾಯಕ, ಅವನಪ್ಪ ನಾಯಕ ಇತರರಿದ್ದರು.
    ಅಮಲಝರಿ, ಕಿಶೋರಿ, ಯಡಹಳ್ಳಿ ಗ್ರಾಮದ 350 ಜನರು ಶಿಬಿರದಲ್ಲಿ ಪಾಲ್ಗೊಂಡು ಆರೋಗ್ಯ ತಪಾಸಣೆ ಮಾಡಿಸಿಕೊಂಡರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts