10 ಭಾಗಗಳಲ್ಲಿ ತೆರೆಗೆ ಬರಲಿದೆ ಮಹಾಭಾರತ! ಕನಸಿನ ಯೋಜನೆ ಬಗ್ಗೆ ಮಾತನಾಡಿದ ರಾಜ್​ಮೌಳಿ..

rajmouli

ಹೈದರಾಬಾದ್​: ಯಮದೊಂಗ, ಮಗಧೀರ, ಬಾಹುಬಲಿ ಮತ್ತು ಆರ್​ಆರ್​ಆರ್​ನಂತಹ ಹಿಟ್ ಸಿನೆಮಾಗಳನ್ನು ನೀಡಿದ ಖ್ಯಾತ ನಿರ್ದೇಶಕ ರಾಜ್​ಮೌಳಿ ತಮ್ಮ ಕನಸಿನ ಯೋಜನೆಯ ಬಗ್ಗೆ ಮಾತನಾಡಿದ್ದಾರೆ. ಇತ್ತೀಚೆಗೆ ಈ ಕುರಿತು ಕಾರ್ಯಕ್ರಮದಲ್ಲಿ ಮಾತನಾಡಿದ ರಾಜ್​ಮೌಳಿ ಮಹಾಭಾರತ ಸಿನಿಮಾ ನಿರ್ಮಾಣದ ಬಗ್ಗೆ ಮಾತನಾಡಿದ್ದಾರೆ.

ಖ್ಯಾತ ನಿರ್ದೇಶಕ ರಾಜ್​ಮೌಳಿಗೆ ಕಾರ್ಯಕ್ರಮವೊಂದರಲ್ಲಿ, ಟಿವಿಯಲ್ಲಿ ಪ್ರಸಾರವಾದ ಮಹಾಭಾರತ ಸಿನಿಮಾ 266 ಎಪಿಸೋಡ್​ಗಳನ್ನು ಒಳಗೊಂಡಿತ್ತು. ನಿಮ್ಮ ಕನಸಿನ ನೀವು ಈ ಹಿಂದೆ ಈ ಚಿತ್ರದ ಕುರಿತಾಗಿ ಮಾತನಾಡಿದ್ದೀರಿ, ಒಂದು ವೇಳೆ ನೀವು ಚಿತ್ರವನ್ನು ಮಾಡುವುದಾದರೆ ಎಷ್ಟು ಭಾಗಗಳಲ್ಲಿ ಚಿತ್ರವನ್ನು ತೆರೆಗೆ ತರುತ್ತಿರಾ? ಎಂಬ ಪ್ರಶ್ನೆಯನ್ನು ಕೇಳಲಾಗಿತ್ತು.

ಇದನ್ನೂ ಓದಿ: ಸಿಟಿ ರವಿ ಆಸ್ಪತ್ರೆಗೆ ದಾಖಲು; ಮಧ್ಯರಾತ್ರಿ ಆರೋಗ್ಯದಲ್ಲಿ ಏರುಪೇರು

ಇದಕ್ಕೆ ಉತ್ತರಿಸಿದ ರಾಜಮೌಳಿ, ಈ ಚಿತ್ರವನ್ನು ಮಾಡುವ ಮೊದಲು ದೇಶದ ಎಲ್ಲ ಆವೃತ್ತಿಗಳಲ್ಲಿ ಸಿಗುವ ಮಹಾಭಾರತವನ್ನು ಓದಿ ಅರ್ಥೈಸಿಕೊಳ್ಳಲು ಕನಿಷ್ಠ ಒಂದು ವರ್ಷ ಸಮಯಾವಕಾಶ ಬೇಕು. ಅದನ್ನು ಫೀಚರ್ ಫಿಲ್ಮ್ ರೀತಿ ಮಾಡಬೇಕಾದರೆ ಕನಿಷ್ಠ 10 ಭಾಗಗಳನ್ನಾಗಿ ಮಾಡಬೇಕು. ಆದರೆ ನಿಖರವಾಗಿ ಎಷ್ಟು ಆಗುತ್ತದೆ ಅಂತ ಗೊತ್ತಿಲ್ಲ ಎಂದಿದ್ದಾರೆ. ಇನ್ನು, ಈ ವಿಷಯವನ್ನು ಕೇಳಿದ್ದೆ ತಡ ಅಭಿಮಾನಿಗಳು, ರಾಜ್​ಮೌಳಿ ನಿರ್ದೇಶನದಲ್ಲಿ ಹೇಗೆ ಮೂಡಿ ಬರಬಹುದೆಂದು ವಿಚಾರ ಮಾಡುತ್ತಿದ್ದಾರೆ.(ಏಜೆನ್ಸೀಸ್​)

Share This Article

ಬೇಸಿಗೆಯಲ್ಲಿ ಕೋಳಿ ಅಥವಾ ಮೀನು?; ತಿನ್ನಲು ಯಾವ ಮಾಂಸ ಉತ್ತಮ? ಇಲ್ಲಿದೆ ಮಾಹಿತಿ.. | Meat

Meat : ಸಾಮಾನ್ಯವಾಗಿ ಬೇಸಿಗೆಯಲ್ಲಿ ಅಧಿಕ ಜನರು ತಂಪುಪಾನಿಯಗಳನ್ನು ಸೇವಿಸುತ್ತಾರೆ. ಈ ಸಮಯದಲ್ಲಿ ಹೆಚ್ಚಿನವರು ಹಗುರವಾದ(ಮೃದುವಾದ)…

ಹಗಲಿನಲ್ಲಿ ನಿದ್ದೆ ಮಾಡ್ತೀರಾ? Daytime Sleeping ಒಳ್ಳೆಯದೋ… ಕೆಟ್ಟದೋ..? sleeping

sleeping: ಸಾಮಾನ್ಯವಾಗಿ, ಅನೇಕ ಜನರು ಹಗಲಿನಲ್ಲಿ ಮಲಗುವ ಅಭ್ಯಾಸವನ್ನು ಹೊಂದಿರುತ್ತಾರೆ. ಕೆಲವರಿಗೆ ಎಷ್ಟೇ ಪ್ರಯತ್ನಿಸಿದರೂ ಹಗಲಿನಲ್ಲಿ…

ಪ್ರತಿದಿನ ಬೆಳಗ್ಗೆ ಎಳನೀರು ಕುಡಿಯುತ್ತೀರಾ? ಹಾಗಿದ್ರೆ ಇದು ನಿಮಗೆ ಗೊತ್ತಿರಲಿ…coconut water

coconut water: ಬೇಸಿಗೆಯಲ್ಲಿ ದೇಹವನ್ನು ಹೈಡ್ರೀಕರಿಸಲು ನೀರಿನ ಜತೆ ನೈಸರ್ಗಿಕ ಆರೋಗ್ಯಕರ ಪಾನೀಯಗಳನ್ನು ಕುಡಿಯುವುದು ಒಳ್ಳೆಯದು.…