

ಆಂಧ್ರಪ್ರದೇಶ: ಈ ಹಿಂದೆ 'ಪ್ರಾಜೆಕ್ಟ್-ಕೆ' ಎಂಬ ತಾತ್ಕಾಲಿಕ ಟೈಟಲ್ನಡಿ ಟಾಲಿವುಡ್ ಅಂಗಳದಲ್ಲಿ ಭಾರೀ ಸದ್ದು ಮಾಡಿದ್ದ 'ಕಲ್ಕಿ 2898 AD' ಚಿತ್ರವು ಟ್ರೇಲರ್ಗೂ ಮುನ್ನವೇ ಸಿನಿಪ್ರೇಕ್ಷಕರಲ್ಲಿ ಸಾಕಷ್ಟು ನಿರೀಕ್ಷೆಯನ್ನು ಮೂಡಿಸುತ್ತಿದೆ. ತೆಲುಗು ಚಿತ್ರರಂಗದ ರೆಬೆಲ್ ಸ್ಟಾರ್, ನಟ ಪ್ರಭಾಸ್ ಅಭಿನಯದ ಈ ಸಿನಿಮಾ ಕುರಿತು ಇದೀಗ ಕುತೂಹಲಕಾರಿ ಮಾಹಿತಿಯೊಂದು ಹೊರಬಿದ್ದಿದೆ.
ನಾಗ್ ಅಶ್ವಿನ್ ನಿರ್ದೇಶನದಲ್ಲಿ ಮೂಡಿಬರಲು ಸಜ್ಜಾಗಿರುವ ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ಪ್ರಭಾಸ್ಗೆ ನಾಯಕಿಯಾಗಿ ಬಾಲಿವುಡ್ ಬೆಡಗಿ ದೀಪಿಕಾ ಪಡುಕೋಣೆ ಅಭಿನಯಿಸಿದ್ದಾರೆ. ಸೈನ್ಸ್-ಫಿಕ್ಷನ್ ಎಂದು ಹೇಳಲಾದ ಈ ಚಿತ್ರದ ಮೇಲೆ ಪ್ರಭಾಸ್ ಅಭಿಮಾನಿಗಳು ಭಾರೀ ನಿರೀಕ್ಷೆಯನ್ನು ವ್ಯಕ್ತಪಡಿಸಿದ್ದಾರೆ.
ವರದಿಗಳ ಪ್ರಕಾರ ಕಾಲಿವುಡ್ನ ಸ್ಟಾರ್ ನಟ ಕಮಲ್ ಹಾಸನ್ ತಮ್ಮ ಪಾತ್ರದ ಚಿತ್ರೀಕರಣವನ್ನು ಸೆಪ್ಟೆಂಬರ್ ಮಧ್ಯಂತರದಲ್ಲಿ ಪ್ರಾರಂಭಿಸಲಿದ್ದು, ನವೆಂಬರ್ ಅಂತ್ಯದ ವೇಳೆಗೆ ಮುಗಿಸಲಿದ್ದಾರೆ ಎಂದು ಹೇಳಲಾಗಿದೆ. ಈ ಮಧ್ಯೆ ಮತ್ತೊಂದು ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಯಾಗುತ್ತಿದ್ದು, ಭಾರತೀಯ ಚಿತ್ರರಂಗ ಕಂಡ ಅದ್ಬುತ ನಿರ್ದೇಶಕ, 'ಆರ್ಆರ್ಆರ್' ಖ್ಯಾತಿಯ ಎಸ್.ಎಸ್.ರಾಜಮೌಳಿ ಅವರು ಪ್ರಭಾಸ್ ನಟನೆಯ ಸಿನಿಮಾದಲ್ಲಿ ವಿಶೇಷ ಪಾತ್ರದಲ್ಲಿ ಎಂಟ್ರಿ ಕೊಡಲಿದ್ದಾರೆ ಎಂಬ ವದಂತಿಗಳು ವ್ಯಾಪಕವಾಗಿ ಹರಿದಾಡುತ್ತಿದೆ.
ಸದ್ಯ ಈ ಬಗ್ಗೆ ಚಿತ್ರತಂಡದಿಂದ ಯಾವುದೇ ಅಧಿಕೃತ ಮಾಹಿತಿಯೂ ಹೊರಬಂದಿಲ್ಲ. 'ಕಲ್ಕಿ 2899 AD' ಚಿತ್ರದಲ್ಲಿ ದೀಪಿಕಾ ಪಡುಕೋಣೆ, ದಿಶಾ ಪಟಾನಿ, ಅಮಿತಾಬ್ ಬಚ್ಚನ್, ಕಮಲ್ ಹಾಸನ್, ಪಶುಪತಿ ಸೇರಿದಂತೆ ದೊಡ್ಡ ತಾರಗಣವಿದೆ,(ಏಜೆನ್ಸೀಸ್).