More

    ಎಸ್ಸೆಸ್ಸೆಲ್ಸಿ ಪರೀಕ್ಷೆ ಸುಗಮವಾಗಲಿ ; ವಿದ್ಯಾರ್ಥಿಗಳು ಹಾಜರಾಗುವಂತೆ ನೋಡಿಕೊಳ್ಳಲು ಸಚಿವರ ಸೂಚನೆ

    ತುಮಕೂರು : ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಎಲ್ಲ ವಿದ್ಯಾರ್ಥಿಗಳು ಹಾಜರಾಗುವಂತೆ ಎಲ್ಲ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು, ಕರೊನಾ ಸಂಕಷ್ಟದ ನಡುವೆಯೂ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಸೂಚಿಸಿದರು.

    ಜಿಪಂ ಸಭಾಂಗಣದಲ್ಲಿ ಬುಧವಾರ ಎಸ್ಸೆಸ್ಸೆಲ್ಸಿ ಪರೀಕ್ಷೆ ಪೂರ್ವ ಸಿದ್ಧತೆ ಕುರಿತು ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದ ಅವರು, ಎಲ್ಲ ವಿದ್ಯಾರ್ಥಿಗಳು ಬೆಳಗ್ಗೆ 8ರೊಳಗೆ ಪರೀಕ್ಷಾ ಕೇಂದ್ರಕ್ಕೆ ಹಾಜರಾಗುವಂತೆ ನೋಡಿಕೊಳ್ಳಬೇಕು. ನಿಗದಿತ ಸಮಯಕ್ಕೆ ಸರಿಯಾಗಿ ವಿದ್ಯಾರ್ಥಿಗಳನ್ನು ಪರೀಕ್ಷಾ ಕೇಂದ್ರಕ್ಕೆ ಕರೆದೊಯ್ಯಲು ಸಾರಿಗೆ ವ್ಯವಸ್ಥೆ ಕಲ್ಪಿಸಬೇಕು ಎಂದು ನಿರ್ದೇಶಿಸಿದರು.

    ಕಾರಣಾಂತರಗಳಿಂದ ಪರೀಕ್ಷಾ ಕೇಂದ್ರಕ್ಕೆ ಹಾಜರಾಗಲು ಸಮಸ್ಯೆ ಉಂಟಾದ ಮಕ್ಕಳನ್ನು ಸರ್ಕಾರಿ ವಾಹನದಲ್ಲಿಯೇ ಕೇಂದ್ರಕ್ಕೆ ಕರೆತರಬೇಕು, ಸಕಾರಣವಿಲ್ಲದೆ ಮಕ್ಕಳು ಪರೀಕ್ಷೆಗೆ ಗೈರು ಹಾಜರಾದರೆ ಸಂಬಂಧಿಸಿದ ಶಾಲಾ ಮುಖ್ಯಶಿಕ್ಷಕರನ್ನೇ ಹೊಣೆಗಾರರನ್ನಾಗಿ ವಾಡಲಾಗುವುದು. ಗೈರು ಹಾಜರಾಗಲು ಸಕಾರಣ ಇದ್ದರೆ ಅಂತಹ ಮಕ್ಕಳ ಪಟ್ಟಿಯನ್ನು ಡಿಡಿಪಿಐ ಅಥವಾ ಬಿಇಒಗಳಿಗೆ ಒದಗಿಸಬೇಕು ಎಂದರು.

    ಮಕ್ಕಳು ಪರೀಕ್ಷಾ ಕೇಂದ್ರಕ್ಕೆ ತಡವಾಗಿ ಆಗಮಿಸಿದರೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಬೇಕು, ಯಾರನ್ನೂ ಪರೀಕ್ಷೆಯಿಂದ ವಂಚಿತರನ್ನಾಗಿ ಮಾಡಬಾರದು, ಎಲ್ಲ ಮಕ್ಕಳು ಪರೀಕ್ಷೆ ಬರೆಯಲು ಸುರಕ್ಷತಾ ವಾತಾವರಣವನ್ನು ಕಲ್ಪಿಸಬೇಕು ಎಂದು ಸೂಚಿಸಿದರು.
    ಕರೊನಾ ಸೋಂಕಿತ ಮಕ್ಕಳು ಹಾಗೂ ಲಕ್ಷಣಗಳುಳ್ಳ ಮಕ್ಕಳು ಪ್ರತ್ಯೇಕವಾಗಿ ಪರೀಕ್ಷೆ ಬರೆಯುವ ವ್ಯವಸ್ಥೆ ಮಾಡಬೇಕು. ಕರೊನಾ ಲಕ್ಷಣಗಳಿರುವ ಅನುವಾನ ಕಂಡುಬಂದರೆ ಅಂತಹ ವಿದ್ಯಾರ್ಥಿಗಳನ್ನು ಕರೊನಾ ಟೆಸ್ಟ್‌ಗೆ ಒಳಪಡಿಸಬೇಕು, ಪರೀಕ್ಷೆಗೆ ಹಾಜರಾದ ಮಕ್ಕಳಲ್ಲಿ ಲಕ್ಷಣಗಳು ಕಂಡುಬಂದರೆ ಪ್ರತ್ಯೇಕವಾಗಿ ಪರೀಕ್ಷೆ ಬರೆಸಬೇಕು, ಕರೊನಾ ಹೊರತುಪಡಿಸಿ ಯಾವುದೇ ರೋಗವಿದ್ದರೂ ಪ್ರತ್ಯೇಕ ವ್ಯವಸ್ಥೆಯೊಂದಿಗೆ ಪರೀಕ್ಷೆಯನ್ನು ಬರೆಯಲು ಶ್ರಮಿಸಬೇಕು ಎಂದು ನಿರ್ದೇಶನ ನೀಡಿದರು.

    ಸುರಕ್ಷಿತ ವಾತಾವರಣ ಸೃಷ್ಟಿಸಿ : ಭಯದ ವಾತಾವರಣವಿಲ್ಲದಂತೆ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಸುರಕ್ಷಿತ ವಾತಾವರಣ ಸೃಷ್ಟಿ ವಾಡಬೇಕು, ಪರೀಕ್ಷೆಯ ಬಗ್ಗೆ ಮಕ್ಕಳಿಗೆ ಆತಂಕ ಹುಟ್ಟಿಸಬಾರದು. ಹೊಸ ಪರೀಕ್ಷಾ ವಿಧಾನದ ಬಗ್ಗೆ ವಿದ್ಯಾರ್ಥಿಗಳಿಗೆ ಅರ್ಥ ವಾಡಿಸಿ, ಭಯವಿಲ್ಲದೆ ಪರೀಕ್ಷೆ ಬರೆಯುವಂತೆ ಮಾರ್ಗದರ್ಶನ ನೀಡಬೇಕೆಂದು ಸಚಿವ ಮಾಧುಸ್ವಾಮಿ ಸೂಚನೆ ನೀಡಿದರು.

    ಜಿಲ್ಲೆಯಲ್ಲಿ ಪರೀಕ್ಷೆ ಬರೆಯುತ್ತಿರುವ ಎಲ್ಲ ಮಕ್ಕಳಿಗೂ ವಾಸ್ಕ್ ಮತ್ತು ಸ್ಯಾನಿಟೈಸ್ ವ್ಯವಸ್ಥೆಯನ್ನು ಸರ್ಕಾರವೇ ವಾಡುತ್ತಿದೆ. ಆದ್ದರಿಂದ ದಾನಿಗಳಿಂದ ನೆರವು ಪಡೆಯುವ ಅವಶ್ಯಕತೆಯಿಲ್ಲ ಎಂದು ತಿಳಿಸಿದರು. ಹೊಸ ಪರೀಕ್ಷಾ ವಿಧಾನದ ಬಗ್ಗೆ ಮಕ್ಕಳಲ್ಲಿ ಆತಂಕ ಉಂಟು ಮಾಡದೆ ಧೈರ್ಯವಾಗಿ ಪರೀಕ್ಷೆ ಬರೆಯುವಂತೆ ಆತ್ಮಸ್ಥೈರ್ಯ ತುಂಬಬೇಕು ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಹೇಳಿದರು.

    ಪರೀಕ್ಷೆಯನ್ನು ಸುಗಮವಾಗಿ ನಡೆಸುವ ದೃಷ್ಟಿಯಿಂದ ಪರೀಕ್ಷಾ ಕೇಂದ್ರಗಳ 200 ಮೀಟರ್ ವಾಪ್ತಿಯಲ್ಲಿ ಸೆಕ್ಷನ್ 144 ನಿಷೇಧಾಜ್ಞೆಯನ್ನು ಜಾರಿಗೆ ತರಲಾಗುವುದು. ಅಧಿಕೃತ ವ್ಯಕ್ತಿಗಳನ್ನು ಹೊರತುಪಡಿಸಿ ನಿರ್ಬಂಧಿತ ಪ್ರದೇಶಗಳಿಗೆ ಯಾರಿಗೂ ಪ್ರವೇಶಾವಕಾಶವಿರುವುದಿಲ್ಲ. ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ಅನಾನುಕೂಲತೆಗಳಾಗಬಾರದು. ನಿಯೋಜಿತ ಅಧಿಕಾರಿ/ಸಿಬ್ಬಂದಿ ತಪ್ಪಿನಿಂದ ಗೊಂದಲ ಸೃಷ್ಟಿಯಾಗದಂತೆ ಕ್ರಮ ವಹಿಸಬೇಕು. ಪ್ರತಿ ಪರೀಕ್ಷಾ ಕೇಂದ್ರಕ್ಕೆ ನೋಡಲ್ ಅಧಿಕಾರಿಗಳನ್ನು ನೇಮಕ ವಾಡಲಾಗಿದ್ದು, ಯಾವುದೇ ಸಮಸ್ಯೆ ಇದ್ದರೆ ಅವರನ್ನು ಸಂಪರ್ಕಿಸಬೇಕು ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts