More

    ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ

    ಬೆಂಗಳೂರು: ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಇಂದು (ಫೆ.20) ಪ್ರಕಟವಾಗಿದೆ.

    ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಇಂದು ವಿಕಾಸಸೌಧದಲ್ಲಿ ಜಂಟಿ ಸುದಿಗೋಷ್ಠಿ ಕರೆದು ಪರೀಕ್ಷೆಯ ದಿನಾಂಕ ಮತ್ತು ಪರೀಕ್ಷೆಗೆ ಸಂಬಂಧಿಸಿದ ಇನ್ನಿತರ ಮಾಹಿತಿಗಳನ್ನು ಹಂಚಿಕೊಂಡರು. 2023-24ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳು ಮಾರ್ಚ್​ 1 ರಿಂದ 22ರ ವರೆಗೆ ನಡೆಯಲಿವೆ. ಎಸ್‌ಎಸ್‌ಎಲ್​ಸಿ ಪರೀಕ್ಷೆಗಳು ಮಾರ್ಚ್​​ 25 ರಿಂದ ಏಪ್ರಿಲ್​​ 06ರ ವರೆಗೆ ನಡೆಯಲಿವೆ ಎಂದು ಮಧು ಬಂಗಾರಪ್ಪ ತಿಳಿಸಿದರು.

    ಪಿಯುಸಿಗೆ 1124 ಪರೀಕ್ಷಾ ಕೇಂದ್ರಗಳನ್ನು ನಿಗದಿ ಮಾಡಲಾಗಿದೆ. ಎಸ್‌ಎಸ್‌ಎಲ್ಸಿ ಪರೀಕ್ಷೆಯಲ್ಲಿ 8,96,271 ವಿದ್ಯಾರ್ಥಿಗಳು ನೋಂದಣಿ ಮಾಡಿಸಿಕೊಂಡಿದ್ದು, ಒಟ್ಟು 2747 ಪರೀಕ್ಷಾ ಕೇಂದ್ರಗಳು ಇರಲಿದೆ.

    ಎಲ್ಲ ಪರೀಕ್ಷೆಗೆ ನೋಂದಣಿ ಮಾಡಿಕೊಳ್ಳಬೇಕು. ನೋಂದಣಿ ಮಾಡಿಕೊಂಡ ವಿದ್ಯಾರ್ಥಿಗಳು ಮೂರರಲ್ಲಿ ಯಾವುದಾದರು ಪರೀಕ್ಷೆಗೆ ಹಾಜರಾಗಬೇಕು. ಮೂರು ಪರೀಕ್ಷೆಯಲ್ಲಿ ಮೊದಲು ಅಥವಾ ಎರಡು ಯಾವ ಪರೀಕ್ಷೆಯನ್ನು ಬೇಕಿದ್ರೆ ಆಯ್ಕೆ ಮಾಡಬಹುದು. ಮೂರು ಪರೀಕ್ಷೆಯಲ್ಲಿ ವಿದ್ಯಾರ್ಥಿಯ ಟಾಪ್ ಮಾರ್ಕ್ಸ್ ಪರಿಗಣನೆ ಮಾಡಲಾಗುತ್ತದೆ. ಹೆಚ್ಚು ಅಂಕ ಪಡೆದಿರುವ ಮಾರ್ಕ್ಸ್ ಮಾತ್ರ ತೆಗೆದುಕೊಳ್ಳಲಾಗುವುದು ಎಂದಿದ್ದಾರೆ.

    ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ‌ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಅಧ್ಯಕ್ಷರಾದ ಮಂಜುಳಾ, ಪದವಿ ಪೂರ್ವ ಶಿಕ್ಷಣ‌ ಇಲಾಖೆ ನಿರ್ದೇಶಕರಾದ ಸಿಂಧೂ ಬಿ ರೂಪೇಶ್ ಹಾಗೂ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

    ದ್ವೀತಿಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ
    March-2024IIPUCExam-1FinalTimeTable_page-0002

    ಎಸ್ಸೆಸ್ಸೆಲ್ಸಿ ಪರೀಕ್ಷೆಯ ವೇಳಾಪಟ್ಟಿ
    March-April-2024SSLCExam-1FinalTimeTable_page-0002

    March-April-2024SSLCExam-1FinalTimeTable_page-0003

    ಮದ್ವೆಯಾದ 2 ವರ್ಷದಿಂದ ಸರಸಕ್ಕೆ ಒಪ್ಪದ ಗಂಡ! ಪೊಲೀಸ್​ ಠಾಣೆಯ ಮೆಟ್ಟಿಲೇರಿದ ಪತ್ನಿ

    ‘ಬಾ ಬಾರೋ ರಸಿಕ’ ನಟಿ ಆಶಿತಾ ಪ್ರೀತಿಸಿ ಮದ್ವೆ ಆದ್ರೂ ಡಿವೋರ್ಸ್ ಆಯ್ತು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts