More

    ಇಂದಿನಿಂದ ಎಸ್‌ಎಸ್‌ಎಲ್‌ಸಿ ಮೌಲ್ಯಮಾಪನ

    ಬೆಳಗಾವಿ: ಕರೊನಾ ವೈರಸ್ ಆತಂಕದ ಮಧ್ಯೆಯೂ ಬೆಳಗಾವಿ ನಗರದ 8 ಕೇಂದ್ರ ಹಾಗೂ ಚಿಕ್ಕೋಡಿಯ 6 ಕೇಂದ್ರ ಸೇರಿ ಒಟ್ಟು 14 ಕೇಂದ್ರಗಳಲ್ಲಿ ಸೋಮವಾರದಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಪ್ರಕ್ರಿಯೆ ಆರಂಭವಾಗಲಿದೆ.

    ಬೆಳಗಾವಿ ಶೈಕ್ಷಣಿಕ ಜಿಲ್ಲೆಯ ಏಳು ವಲಯಗಳ 2 ಸಾವಿರಕ್ಕೂ ಅಧಿಕ ಸಹಾಯಕ ಮೌಲ್ಯಮಾಪಕರು ಕರ್ತವ್ಯಕ್ಕೆ ಹಾಜರಾಗಲಿದ್ದಾರೆ. ಕರೊನಾತಂಕದ ಹಿನ್ನೆಲೆಯಲ್ಲಿ ಬೆಳಗಾವಿ ಹೊರತುಪಡಿಸಿ, ಬೇರೆ ವಲಯಗಳಿಂದ ಕೇಂದ್ರಕ್ಕೆ ಬರುವ ಸಿಬ್ಬಂದಿಗೆ ಅನುಕೂಲವಾಗಲೆಂದು ಖಾಸಗಿ ವಾಹನ ವ್ಯವಸ್ಥೆ ಮಾಡಲಾಗಿದೆ. ಜಿಲ್ಲಾಡಳಿತದ ಮಾರ್ಗದರ್ಶನದಲ್ಲಿ ಅಗತ್ಯ ಸುರಕ್ಷತಾ ಕ್ರಮ ಕೈಗೊಂಡು, ಮೌಲ್ಯಮಾಪನ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಬೆಳಗಾವಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಡಾ.ಎ.ಬಿ. ಪುಂಡಲೀಕ ತಿಳಿಸಿದ್ದಾರೆ.

    ಎಲ್ಲ ಮೌಲ್ಯಮಾಪನ ಕೇಂದ್ರಗಳಿಗೆ ಈಗಾಗಲೇ ಸೋಂಕು ತಡೆ ಔಷಧ ಸಿಂಪಡಿಸಲಾಗಿದೆ. ಅಲ್ಲದೆ, ಆರೋಗ್ಯ ತಪಾಸಣೆ ಕೇಂದ್ರಗಳನ್ನೂ ತೆರೆಯಲಾಗಿದ್ದು ಥರ್ಮಲ್ ಸ್ಕ್ರೀನಿಂಗ್, ಸ್ಯಾನಿಟೈಸರ್ ವ್ಯವಸ್ಥೆ ಮಾಡಲಾಗಿದೆ ಎಂದು ಎಸ್‌ಎಸ್‌ಎಲ್‌ಸಿ ಪರೀಕ್ಷೆ ನೋಡಲ್ ಅಧಿಕಾರಿ ಮಹಾದೇವ ಬೆಳ್ಳೆನವರ ತಿಳಿಸಿದ್ದಾರೆ.

    ಎಲ್ಲೆಲ್ಲಿ ಮೌಲ್ಯಮಾಪನ?: ಬೆಳಗಾವಿಯ ಸೇಂಟ್ ಝೇವಿಯರ್ ಆಂಗ್ಲ ಮಾಧ್ಯಮ ಪ್ರೌಢಶಾಲೆ, ಸೇಂಟ್ ಆಂಥೋನಿ ಆಂಗ್ಲ ಮಾಧ್ಯಮ ಪ್ರೌಢಶಾಲೆ, ಸೇಂಟ್‌ಪಾಲ್ ಆಂಗ್ಲ ಮಾಧ್ಯಮ ಪ್ರೌಢಶಾಲೆ, ಸೇಂಟ್ ಮೇರಿ ಆಂಗ್ಲ ಮಾಧ್ಯಮ ಪ್ರೌಢಶಾಲೆ, ಉಷಾತಾಯಿ ಗೋಗಟೆ ಬಾಲಕಿಯರ ಪ್ರೌಢಶಾಲೆ, ಮಹಾಂತೇಶ ನಗರದ ಕನ್ನಡ ಮಾಧ್ಯಮ ಪ್ರೌಢಶಾಲೆ, ಸಿದ್ಧರಾಮೇಶ್ವರ ಸಂಯುಕ್ತ ಪದವಿಪೂರ್ವ ಕಾಲೇಜು ಹಾಗೂ ಮರಾಠಾ ಮಂಡಳ ಸಂಯುಕ್ತ ಪದವಿಪೂರ್ವ ಕಾಲೇಜ್‌ನ ಕೇಂದ್ರಗಳಲ್ಲಿ ಮೌಲ್ಯಮಾಪನ ಪ್ರಕ್ರಿಯೆ ನಡೆಯಲಿದೆ. ಈ ಕೇಂದ್ರಗಳ 200 ಮೀ. ಸುತ್ತಲಿನ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಮಹಾನಗರ ಪೊಲೀಸ್ ಆಯುಕ್ತ ಡಾ. ಕೆ.ತ್ಯಾಗರಾಜನ್ ಆದೇಶ ಹೊರಡಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts