More

    ಬೆಂಗಳೂರು ನಗರ, ಗ್ರಾಮಾಂತರ ಜಿಲ್ಲೆಗಳಲ್ಲಿ ಎಸ್ಎಸ್ಎಲ್​ಸಿ ಮೌಲ್ಯಮಾಪನ ಮುಂದೂಡಿಕೆ

    ಬೆಂಗಳೂರು: ಲಾಕ್​ಡೌನ್​ ಘೋಷಿಸಿರುವ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ 2020 ನೇ ಸಾಲಿನ ಎಸ್ಎಸ್ಎಲ್​ಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವನ್ನು ಮುಂದೂಡಲಾಗಿದೆ.

    ಸೋಮವಾರ (ಜು.13) ರಾಜ್ಯದ ಎಲ್ಲ ಜಿಲ್ಲಾಕೇಂದ್ರಗಳಲ್ಲಿ ಪ್ರಾರಂಭವಾಗಲಿದೆ. ಆದರೆ, ರಾಜ್ಯ ಸರ್ಕಾರವು ಜುಲೈ 14 ರಿಂದ 22ರವರೆಗೆ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಲಾಖ್​ಡೌನ್​ ವಿಧಿಸಿದೆ. ಈ ಕಾರಣಕ್ಕೆ ಮೌಲ್ಯಮಾಪನ ಕಾರ್ಯವನ್ನು ಮುಂದೂಡಲಾಗಿದೆ.

    ಇದನ್ನೂ ಓದಿ; ಅಂತಿಮ ಸೆಮಿಸ್ಟರ್​ ಪರೀಕ್ಷೆಯನ್ನೂ ರದ್ದುಗೊಳಿಸಿ; ವಿದ್ಯಾರ್ಥಿಗಳ ಭವಿಷ್ಯ ಕಾಪಾಡಿ; ಸಿಎಂ ಮನವಿಗೆ ಮಣಿಯುತ್ತಾರೆ ಮೋದಿ?

    ಈ ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಜಿಲ್ಲೆಗಳ ಮೌಲ್ಯಮಾಪನ ಕಾರ್ಯವು ಸೋಮವಾರ (ಜು.13) ನಿಗದಿಯಂತೆ ನಡೆಯಲಿದೆ ಹಾಗೂ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳ ಮೌಲ್ಯಮಾಪನ ದಿನಾಂಕವನ್ನು ಮುಂದಿನ ದಿನಗಳಲ್ಲಿ ನಿರ್ಧರಿಸಲಾಗುವುದು ಎಂದು ಪ್ರಾಥಮಿಕ ಹಾಗೂ ಶಿಕ್ಷಣ‌ ಸಚಿವ ಎಸ್. ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.

    ಸೋಮವಾರ ಆರಂಭವಾಗಿ ಒಂದು ವಾರದೊಳಗೆ ಮೌಲ್ಯಮಾಪನ ಮುಗಿಸಲು ಸೂಚಿಸಲಾಗಿದೆ. 55 ವರ್ಷಕ್ಕೆ ಮೇಲ್ಪಟ್ಟವರು ಹಾಗೂ ಅನಾರೋಗ್ಯಪೀಡಿತ ಮೌಲ್ಯಮಾಪಕರು ಪರೀಕ್ಷಾ ಕರ್ತವ್ಯದಿಂದ ಹೊರಗಿರಲು ಬಯಸಿದರೆ ಅವಕಾಶ ನೀಡಲಾಗುವುದು ಎಂದು ಶಿಕ್ಷಣ ಇಲಾಖೆ ತಿಳಿಸಿದೆ.

    ಇದನ್ನೂ ಓದಿ; ಶಾಲೆಗಳಿಗೆ ಎರಡನೇ, ನಾಲ್ಕನೇ ಶನಿವಾರವೂ ರಜೆ ಘೋಷಣೆ 

    ವಲಸೆ ವಿದ್ಯಾರ್ಥಿಗಳ ಉತ್ತರ ಪತ್ರಿಕೆಗಳನ್ನು ಮೌಲ್ಯಮಾಪನ ಮಾಡಿ ಅಂಕಗಳನ್ನು ಪರೀಕ್ಷೆ ಬರೆದ ಕೇಂದ್ರದ ವಿದ್ಯಾರ್ಥಿಗಳ ಉತ್ತರ ಪತ್ರಿಕೆಗಳನ್ನು ಎಲ್ಲಿ ಮೌಲ್ಯಮಾಪನ ಮಾಡಲಾಗುತ್ತದೋ ಅದೇ ಕೇಂದ್ರದಲ್ಲಿ ಎಂಟ್ರೀ ಮಾಡುವ ಸೌಲಭ್ಯ ಕಲ್ಪಿಸಲಾಗಿದೆ ಹಾಗೂ ಡೇಟಾ ಎಂಟ್ರೀ ಆಪರೇಟರ್ಸ್ ಗಳಿಗೆ ಸೂಕ್ತ ತರಬೇತಿ ನೀಡಲಾಗಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

    ಆಕ್ಸ್​ಫರ್ಡ್​ ವಿವಿ ತಜ್ಞರ ಕರೊನಾ ಲಸಿಕೆ ಅಭಿವೃದ್ಧಿಗೆ ಜೀವವನ್ನೇ ಪಣಕ್ಕಿಟ್ಟ ಭಾರತೀಯ…!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts