More

    ಸೋಮವಾರದಿಂದ ಎಸ್​ಎಸ್​ಎಲ್​ಸಿ ಮೌಲ್ಯಮಾಪನ; ವಾರದೊಳಗೆ ಮುಗಿಸಲು ಗಡುವು

    ಬೆಂಗಳೂರು: ಎಸ್​ಎಸ್​ಎಲ್​ಸಿ ಉತ್ತರ ಪತ್ರಿಕೆಯ ಮೌಲ್ಯಮಾಪನ ಸೋಮವಾರ (ಜು.13) ಆರಂಭವಾಗಲಿದೆ. ಬೆಳಗ್ಗೆ 10 ಗಂಟೆಯಿಂದ ಸಂಜೆ 5ರ ವರೆಗೆ ನಡೆಯಲಿದ್ದು, ಗರಿಷ್ಠ ಒಂದು ವಾರದಲ್ಲಿ ಮುಗಿಸಬೇಕೆಂದು ಗಡುವು ನೀಡಲಾಗಿದೆ.

    ಕೋವಿಡ್​ ಹಿನ್ನೆಲೆಯಲ್ಲಿ ಮೌಲ್ಯಮಾಪಕರು ವೈಯಕ್ತಿಕ ಆರೋಗ್ಯದ ದೃಷ್ಟಿಯಿಂದ ಕುಡಿಯುವ ನೀರು ಮತ್ತು ಮಧ್ಯಾಹ್ನದ ಆಹಾರ ಹಾಗೂ ವೈಯಕ್ತಿಕ ಸಾನಿಟೈಜರ್​ಅನ್ನು ಸ್ವತಃ ತರುವಂತೆ ಸೂಚಿಸಲಾಗಿದೆ.

    ಇದನ್ನೂ ಓದಿ;  ಶುಲ್ಕ ಸಂಗ್ರಹಕ್ಕೆ ಶಿಕ್ಷಣ ಸಂಸ್ಥೆಗಳಿಗೆ ಅನುಮತಿ; ಸರ್ಕಾರದ ಕ್ರಮ ಪ್ರಶ್ನಿಸಿ ಹೈಕೋರ್ಟ್​ ಮೊರೆ ಹೋದ ಪಾಲಕರು

    55 ವರ್ಷಕ್ಕೆ ಮೇಲ್ಪಟ್ಟವರು ಹಾಗೂ ಅನಾರೋಗ್ಯಪೀಡಿತ ಮೌಲ್ಯಮಾಪಕರು ಪರೀಕ್ಷಾ ಕರ್ತವ್ಯದಿಂದ ಹೊರಗಿರಲು ಬಯಸಿದರೆ ಅವಕಾಶ ನೀಡಲಾಗುವುದು ಎಂದು ಶಿಕ್ಷಣ ಇಲಾಖೆ ತಿಳಿಸಿದೆ.

    ಮೌಲ್ಯಮಾಪನ ಕೇಂದ್ರದ ಸುತ್ತ 200ಮೀಟರ್ ದೂರದವರೆಗಿನ ಪ್ರದೇಶದಲ್ಲಿ 144 ಸೆಕ್ಷನ್ ಜಾರಿಯಲ್ಲಿರಲಿದೆ. ಕೇಂದ್ರಕ್ಕೆ ಮೌಲ್ಯಮಾಪನ ಕರ್ತವ್ಯ ನಿರ್ವಹಿಸುವವರನ್ನು ಹೊರತುಪಡಿಸಿ ಇನ್ನುಳಿದವರು ಹಾಗೂ ಚುನಾಯಿತ ಪ್ರತಿನಿಧಿಗಳ ಪ್ರವೇಶವೂ ನಿಷಿದ್ಧವಾಗಿದೆ.

    ಇದನ್ನೂ ಓದಿ; ನೀಲಿ ಮಸೀದಿಯಾಗುತ್ತಿದೆ ವಿಶ್ವ ಪ್ರಸಿದ್ಧ ಪ್ರವಾಸಿ ತಾಣ….! 

    ವಲಸೆ ವಿದ್ಯಾರ್ಥಿಗಳ ಉತ್ತರ ಪತ್ರಿಕೆಗಳನ್ನು ಮೌಲ್ಯಮಾಪನ ಮಾಡಿ ಅಂಕಗಳನ್ನು ಪರೀಕ್ಷೆ ಬರೆದ ಕೇಂದ್ರದ ವಿದ್ಯಾರ್ಥಿಗಳ ಉತ್ತರ ಪತ್ರಿಕೆಗಳನ್ನು ಎಲ್ಲಿ ಮೌಲ್ಯಮಾಪನ ಮಾಡಲಾಗುತ್ತದೋ ಅದೇ ಕೇಂದ್ರದಲ್ಲಿ ಎಂಟ್ರೀ ಮಾಡುವ ಸೌಲಭ್ಯ ಕಲ್ಪಿಸಲಾಗಿದೆ ಹಾಗೂ ಡೇಟಾ ಎಂಟ್ರೀ ಆಪರೇಟರ್ಸ್ ಗಳಿಗೆ ಸೂಕ್ತ ತರಬೇತಿ ನೀಡಲಾಗಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

    ಒಂದು ಕಾರು ಕೊಂಡರೆ ಮತ್ತೊಂದು ಫ್ರೀ…, ಲಾರಿ ಖರೀದಿಗೆ 13 ಸಾವಿರ ರೂ. ಡೌನ್​ಪೇಮೆಂಟ್​…!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts