More

    ಇನ್ನೆರಡು ದಿನದಲ್ಲಿ ಎಸೆಸ್ಸೆಲ್ಸಿ ಪರೀಕ್ಷಾ ವೇಳಾಪಟ್ಟಿ: ಸಚಿವ ಸುರೇಶ್ ಕುಮಾರ್ ಮಾಹಿತಿ

    ಮಂಗಳೂರು: ಎರಡು ದಿನಗಳಲ್ಲಿ ಎಸ್ಸೆಸ್ಸೆಲ್ಸಿ ಅಂತಿಮ ಪರೀಕ್ಷಾ ವೇಳಾಪಟ್ಟಿ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢಶಾಲೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

    ನಗರದಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ ಅವರು, ಈಗಾಗಲೇ ರಾಜ್ಯದ ವಿವಿಧ ಕಡೆಗಳಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. 5 ವಲಯಗಳನ್ನು ರಚಿಸಿ ವಲಯವಾರು ಮಕ್ಕಳಿಗೆ ತರಬೇತಿ ನೀಡುವ ಕಾರ್ಯ ಮಾಡಲಾಗುತ್ತಿದೆ ಎಂದರು.

    ಬಿಸಿಯೂಟ ವ್ಯವಸ್ಥೆಗೆ ಸಿದ್ಧ:
    ಶಾಲೆಗೆ ಬರುವ ವಿದ್ಯಾರ್ಥಿಗಳಿಗೆ ಬಿಸಿಯೂಟದ ವ್ಯವಸ್ಥೆ ಮಾಡಲು ಶಿಕ್ಷಣ ಇಲಾಖೆ ಸಿದ್ದವಿದೆ. ಮಧ್ಯಾಹ್ನದ ಒಂದು ಹೊತ್ತಿನ ಊಟ ವಿದ್ಯಾರ್ಥಿಗಳಿಗೆ ಹೊಸ ಚೈತನ್ಯವನ್ನು ನೀಡುತ್ತದೆ. ಆದರೆ ಈ ಬಗ್ಗೆ ಇನ್ನೂ ಕೇಂದ್ರ ಸರ್ಕಾರದ ಅನುಮತಿ ದೊರೆತಿಲ್ಲ. ಕೇಂದ್ರದ ಅನುಮತಿ ದೊರೆತ ತಕ್ಷಣವೇ ಬಿಸಿಯೂಟ ಆರಂಭಿಸುತ್ತೇವೆ ಎಂದರು.

    ಒಂದನೇ ತರಗತಿಯಿಂದ ತರಗತಿ ಆರಂಭಿಸಲು ಕೂಡ ಇಲಾಖೆ ಸಿದ್ಧತೆ ನಡೆಸಿದೆ. ಆದರೆ ಆರೋಗ್ಯ ಇಲಾಖೆಯ ತಾಂತ್ರಿಕ ಸಲಹಾ ಸಮಿತಿ ಸಮ್ಮತಿ ದೊರೆತಿಲ್ಲ ಎಂದರು.ಅಜೀಂ ್ರೇಮ್‌ಜೀ ವಿವಿಯವರು ದೇಶದ 5 ರಾಜ್ಯಗಳ ವಿದ್ಯಾರ್ಥಿಗಳ ಸಮೀಕ್ಷೆ ನಡೆಸಿ ಕೋವಿಡ್ ಬಳಿಕ ಶೇ.91ರಷ್ಟು ಮಕ್ಕಳು ಗಣಿತ ಕಲಿಕೆ ಹಾಗೂ ಶೇ.80ರಷ್ಟು ಭಾಷೆಯಲ್ಲಿ ಹಿಂದೆ ಉಳಿದುಬಿಟ್ಟಿದ್ದಾರೆ ಎನ್ನುವ ವರದಿ ನೀಡಿದ್ದಾರೆ. ಈ ಬಗ್ಗೆ ಇಲಾಖೆ ವತಿಯಿಂದ ಯೋಜನೆ ರೂಪಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts