More

    ಅಕ್ರಮ ನಡೆದರೆ ಶಿಸ್ತು ಕ್ರಮ ಖಚಿತ: ಜಿಲ್ಲಾಧಿಕಾರಿ ಡಾ.ಎಚ್.ಎನ್.ಗೋಪಾಲಕೃಷ್ಣ ಎಚ್ಚರಿಕೆ

    ಮಂಡ್ಯ: ಜಿಲ್ಲೆಯಲ್ಲಿ ಮಾ.31 ರಿಂದ ಏ.15 ರವರೆಗೆ ನಡೆಯಲಿರುವ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಯಾವುದೇ ರೀತಿಯ ಅಕ್ರಮ ನಡೆಯದಂತೆ ಎಚ್ಚರವಹಿಸಿ ಎಂದು ಜಿಲ್ಲಾಧಿಕಾರಿ ಡಾ.ಎಚ್.ಎನ್.ಗೋಪಾಲಕೃಷ್ಣ ಸೂಚನೆ ನೀಡಿದರು.
    ನಗರದ ಜಿಲ್ಲಾ ಪಂಚಾಯಿತಿ ಕಚೇರಿಯ ಕಾವೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅಧಿಕಾರಿಗಳು ಎಸ್ಸೆಸ್ಸೆಲ್ಸಿ ಬೋರ್ಡ್ ಸೂಚನೆಯನ್ನು ಪಾಲನೆ ಮಾಡಿ ಪರೀಕ್ಷೆ ನಡೆಸಿ. ಯಾವುದೇ ಆಕ್ರಮಗಳು ನಡೆಯದಂತೆ ಕ್ರಮವಹಿಸಿ. ಒಂದು ವೇಳೆ ಅಕ್ರಮ ನಡೆದಿದ್ದು ಗಮನಕ್ಕೆ ಬಂದರೆ ಸಂಬಂಧಿಸಿದ ಅಧಿಕಾರಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
    ಕಳೆದ ಬಾರಿ ಜಿಲ್ಲೆಯ ಲಿತಾಂಶ ರಾಜ್ಯದಲ್ಲಿ 3ನೇ ಸ್ಥಾನದಲ್ಲಿದ್ದು, ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ಈ ಬಾರಿ ಪ್ರಥಮ ಸ್ಥಾನ ತಲುಪಬೇಕಿದೆ. ಜಿಲ್ಲೆಯಲ್ಲಿ 22,887 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಣಿ ಮಾಡಿಕೊಂಡಿದ್ದಾರೆ. ಮಂಡ್ಯ ದಕ್ಷಿಣ ವಿಭಾಗದಲ್ಲಿ 6, ಮಂಡ್ಯ ಉತ್ತರ 13, ಮದ್ದೂರು 17, ಮಳವಳ್ಳಿ 13, ಕೆ.ಆರ್.ಪೇಟೆ 9, ನಾಗಮಂಗಲ 8, ಶ್ರೀರಂಗಪಟ್ಟಣ 9 ಮತ್ತು ಪಾಂಡವಪುರ ತಾಲೂಕಿನಲ್ಲಿ 8 ಸೇರಿದಂತೆ 83 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದರು.
    ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಒಬ್ಬರಂತೆ 83 ಮುಖ್ಯಾಧೀಕ್ಷಕರನ್ನು ನೇಮಕ ಮಾಡಲಾಗಿದ್ದು, ಬ್ಲಾಕ್ ಹಂತದಲ್ಲಿ ಒರ್ವ ನೋಡಲ್ ಅಧಿಕಾರಿ ನೇಮಿಸಿದ್ದು, ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಸಲು ಎಲ್ಲ ಕೇಂದ್ರಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ. ಎಲ್ಲ ಬ್ಲಾಕ್ ಗಳಲ್ಲಿ ಪ್ರಶ್ನೆಪತ್ರಿಕೆಗಳ ಬಂಡಲ್‌ಗಳನ್ನು ಪರೀಕ್ಷಾ ಕೇಂದ್ರಗಳಿಗೆ ರವಾನಿಸಲು ಮಾರ್ಗಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಜಿಲ್ಲಾ ಹಂತದಲ್ಲಿ 3 ಸಂಚಾರ ಜಾಗೃತದಳ ಹಾಗೂ ಪ್ರತಿ ಪರೀಕ್ಷಾ ಕೇಂದ್ರಕ್ಕೆ ಒಬ್ಬ ಸ್ಥಾನಿಕ ಜಾಗೃತದಳ ಅಧಿಕಾರಿಯನ್ನು ನಿಯೋಜಿಸಲಾಗಿದೆ. ಎಲ್ಲ ಪರೀಕ್ಷಾ ಕಾರ್ಯಗಳು ಸುಗಮವಾಗಿ ನಡೆಯಲು ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ವಿಶೇಷ ಅಗತ್ಯತೆವುಳ್ಳ ಮಕ್ಕಳಿಗೆ ನೆಲ ಮಹಡಿಯಲ್ಲಿ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.
    ಜಿಲ್ಲಾ ಪಂಚಾಯಿತಿ ಸಿಇಒ ಶಾಂತಾ ಎಲ್.ಹುಲ್ಮನಿ ಮಾತನಾಡಿ, ಪರೀಕ್ಷಾ ಕೇಂದ್ರಗಳಲ್ಲಿ ಗೊಂದಲಗಳಿಗೆ ಅವಕಾಶ ಮಾಡಿಕೊಡದೆ ಸುವ್ಯವಸ್ಥಿತವಾಗಿ ನಡೆಸಿ. ಕೊಠಡಿ ಮೇಲ್ವಿಚಾರಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಮೊಬೈಲ್ ೆನ್, ಎಲೆಕ್ಟ್ರಾನಿಕ್ ಸಾಧನಗಳನ್ನು ತರುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ ಎಂದರು.
    ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು ಮಾತನಾಡಿ, ಪರೀಕ್ಷೆಗೆ ಸಂಬಂಧಪಟ್ಟಂತೆ ಎಲ್ಲ ವರ್ಗದ ಅಧಿಕಾರಗಳು ತಮಗೆ ವಹಿಸಿರುವ ಜವಾಬ್ದಾರಿಯನ್ನು ನಿಭಾಯಿಸಿ ಸುಸೂತ್ರವಾಗಿ ಪರೀಕ್ಷೆ ನಡೆಸಿ ಎಂದರು.
    ಸಭೆಯಲ್ಲಿ ಡಿಡಿಪಿಐ ಎಸ್.ಟಿ.ಜವರೇಗೌಡ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts