More

    ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ರಾಜ್ಯ ಹೈಕೋರ್ಟ್ ಗ್ರೀನ್ ಸಿಗ್ನಲ್

    ಬೆಂಗಳೂರು: ಕರೊನಾ ಸೋಂಕು ಹರಡುವಿಕೆ ತಡೆಗಟ್ಟಲು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಅನುಮತಿ ನೀಡಿದೆ.

    ರಾಜ್ಯದಲ್ಲಿ ಜೂ. 25ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಕೈಗೊಂಡಿರುವ ನಿರ್ಧಾರ ರದ್ದುಪಡಿಸುವಂತೆ ಕೋರಿ ವಕೀಲ ಎಂ. ಲೋಕೇಶ್ ಮತ್ತಿತರರು ಸಲ್ಲಿಸಿದ್ದ ಪಿಐಎಲ್ ಅನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ್ ನೇತೃತ್ವದ ವಿಭಾಗೀಯ ಪೀಠ ಬುಧವಾರ ವಿಚಾರಣೆ ನಡೆಸಿತು.

    ಇದನ್ನೂ ಓದಿ: ಕನ್ನಡ ನಿರ್ಲಕ್ಷ್ಯ ಮಾಡುವ ಶಾಲೆಗಳ ವಿರುದ್ಧ ಕಠಿಣ ಕ್ರಮ: ಸುರೇಶ್ ಕುಮಾರ್

    ಸರ್ಕಾರ ಪರ ವಕೀಲರು, ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ನಡೆಸುವ ಸಂಬಂಧ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ರೂಪಿಸಿರುವ ಮಾರ್ಗಸೂಚಿಗಳನ್ನು (ಎಸ್‌ಒಪಿ) ನ್ಯಾಯಪೀಠಕ್ಕೆ ಸಲ್ಲಿಸಿ, ಪರೀಕ್ಷೆ ನಡೆಸುವ ವೇಳೆ ವಿದ್ಯಾರ್ಥಿಗಳು, ಶಿಕ್ಷಕರು, ಅಧಿಕಾರಿ ಮತ್ತು ಸಿಬ್ಬಂದಿ ವರ್ಗಕ್ಕೆ ಸೋಂಕು ಹರಡುವುದನ್ನು ನಿಯಂತ್ರಿಸಲು ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ವ್ಯಕ್ತಿಗತ ಅಂತರ, ಮಾಸ್ಕ್-ಸ್ಯಾನಿಟೈಸರ್ ಬಳಕೆ, ಆರೋಗ್ಯ ತಪಾಸಣೆ, ವಿದ್ಯಾರ್ಥಿಗಳಿಗೆ ಸಾರಿಗೆ ವ್ಯವಸ್ಥೆ ಕಲ್ಪಿಸಿರುವ ಕುರಿತು ನ್ಯಾಯಪೀಠಕ್ಕೆ ವಿವರಿಸಿದರು.

    ರಾಜ್ಯದಿಂದ ಹೊರಗೆ ತೆರಳಿರುವ ಹಾಗೂ ನೆರೆ ರಾಜ್ಯಗಳು ಮತ್ತು ಕಂಟೈನ್‌ಮೆಂಟ್ ಪ್ರದೇಶದಲ್ಲಿರುವ ವಿದ್ಯಾರ್ಥಿಗಳಿಗೂ ಜೂ.25ರಂದು ಆರಂಭವಾಗುವ ಪರೀಕ್ಷೆಯಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಒಂದೊಮ್ಮೆ ಕಾರಣಾಂತರಗಳಿಂದ ಪರಿಕ್ಷೆಗೆ ಹಾಜರಾಗಲು ಸಾಧ್ಯವಾಗದಿದ್ದರೆ, ಪೂರಕ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗುವುದು. ಅದನ್ನು ಅವರ ಮೊದಲ ಪ್ರಯತ್ನವೆಂದು ಪರಿಗಣಿಸಲಾಗುವುದು ಎಂದು ತಿಳಿಸಿದರು.

    ಇದನ್ನೂ ಓದಿ: VIDEO| ನಿನ್ನೆ ಮಂಡ್ಯ, ಇಂದು ಮೈಸೂರಿನಲ್ಲಿ ಮುಸ್ಸಂಜೆ ವೇಳೆ ದಿಢೀರ್​ ಬೆಳಕು: ಬೆರಗಾದ ಗ್ರಾಮಸ್ಥರು!

    ಅದನ್ನು ದಾಖಲಿಸಿಕೊಂಡ ನ್ಯಾಯಪೀಠ, ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸುವ ಸಂದರ್ಭದಲ್ಲಿ ಎಸ್‌ಒಪಿಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಸರ್ಕಾರಕ್ಕೆ ಸೂಚಿಸಿ ಅರ್ಜಿ ಇತ್ಯರ್ಥಪಡಿಸಿತು.

    2019-20ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ಜೂ.25ರಿಂದ ನಡೆಸಲು ತೀರ್ಮಾನಿಸಿ ರಾಜ್ಯ ಸರ್ಕಾರ ಮೇ 18ರಂದು ವೇಳಾಪಟ್ಟಿ ಪ್ರಕಟಿಸಿದೆ. ಒಟ್ಟು 8.48 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಬೇಕಿದೆ. ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಇಂಥ ಸಂದರ್ಭದಲ್ಲಿ ಪರೀಕ್ಷೆ ನಡೆಸಿದರೆ ವಿದ್ಯಾರ್ಥಿಗಳು, ಶಿಕ್ಷಕರು, ಸಿಬ್ಬಂದಿ ಮತ್ತವರ ಕುಟುಂಬ ವರ್ಗಕ್ಕೂ ಸೋಂಕು ಹರಡುವ ಸಾಧ್ಯತೆ ಇದೆ. ಆದ್ದರಿಂದ ಪರೀಕ್ಷೆ ರದ್ದುಪಡಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕೆಂದು ಅರ್ಜಿದಾರರು ಕೋರಿದ್ದರು.

    ಈ ವರ್ಷದಿಂದಲೇ 1000 ಉಭಯ ಮಾಧ್ಯಮ ಶಾಲೆಗಳ ಪ್ರಾರಂಭ: ಸುರೇಶ್ ಕುಮಾರ್

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts