More

    ನಿಗದಿಯಂತೆ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯೋದು ಪಕ್ಕಾ: ಸುರೇಶಕುಮಾರ್

    ಬೆಂಗಳೂರು: ಈಗಾಗಲೇ ನಿಗದಿಪಡಿಸಿದ ವೇಳಾಪಟ್ಟಿ ಪ್ರಕಾರವೇ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯಲಿದ್ದು, ಈ ಕುರಿತ ತಕರಾರು ಅರ್ಜಿಯನ್ನು ಹೈಕೋರ್ಟ್ ಇತ್ಯರ್ಥಪಡಿಸಿರುವ ಕಾರಣ ಎಲ್ಲ ಅಡ್ಡಿ ನಿವಾರಣೆಯಾಗಿವೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್‌ಕುಮಾರ್ ಸ್ಪಷ್ಟಪಡಿಸಿದ್ದಾರೆ.

    ಇದನ್ನೂ ಓದಿ: ಬಿರುಗಾಳಿ ಮಳೆಗೆ ಮರ, ವಿದ್ಯುತ್ ಕಂಬಗಳು ಧರೆಗೆ

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿದ್ಯಾರ್ಥಿಗಳು, ಮಾಜಿ ಸಚಿವರು ಸೇರಿ ವಿವಿಧ ಕ್ಷೇತ್ರಗಳ ತಜ್ಞರು, ಶಿಕ್ಷಣ ಪ್ರೇಮಿಗಳ ಜತೆಗೆ ಚರ್ಚಿಸಿ, ಸರ್ವಸಮ್ಮತ ಅಭಿಪ್ರಾಯ ಪಡೆದು ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಲು ಸರ್ಕಾರ ತೀರ್ಮಾನಿಸಿದೆ ಎಂದು ಹೇಳಿದರು.

    ಮುಂಚಿತವಾಗಿ ವೇಳಾಪಟ್ಟಿ ಪ್ರಕಟಿಸಿ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಲಾಗಿದೆ. ಅಲ್ಲದೇ ಪರೀಕ್ಷಾ ಕೇಂದ್ರಗಳಲ್ಲಿ ಸುರಕ್ಷತೆ, ವಿದ್ಯಾರ್ಥಿಗಳ ಆರೋಗ್ಯ ರಕ್ಷಣೆಗೆ ಬೇಕಾದ ಉಪಕ್ರಮಗಳನ್ನು ಕೈಗೊಂಡಿದ್ದರೂ ಕೆಲವರು ಉದ್ದೇಶಪೂರ್ವಕವಾಗಿ ವಿವಾದ ಸೃಷ್ಟಿಸುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

    ಇದನ್ನೂ ಓದಿ: ಪೊಲೀಸರ ಶ್ರಮದ ದುಡ್ಡು ದೋಚಿದ ಸಿಬ್ಬಂದಿ!

    ಪರೀಕ್ಷೆ ನಡೆಸದೆ ರಾಜ್ಯದ 8,48,196 ವಿದ್ಯಾರ್ಥಿಗಳನ್ನು ಪಾಸು ಮಾಡುವುದು ಸಾಧ್ಯವಿಲ್ಲ. ಈ ಹಿನ್ನೆಲೆಯಲ್ಲಿ ಪರೀಕ್ಷೆ ನಡೆಸುವುದು ಅನಿವಾರ್ಯವಾಯಿತು ಎಂದು ಸಮಜಾಯಿಷಿ ನೀಡಿದರು.

    ಕ್ರಿಶ್ಚಿಯನ್​ಗೆ ಮತಾಂತರಗೊಂಡ ಮುಸ್ಲಿಂ ಯುವತಿಗೆ ತಂದೆಯಿಂದ ಘೋರ ಶಿಕ್ಷೆ…!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts