More

    ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲು ಹೋದ ಮಗ ಮರಳಿ ಬಂದದ್ದು ಶವವಾಗಿ: ಮುಗಿಲು ಮುಟ್ಟಿದ ಪಾಲಕರ ಆಕ್ರಂದನ

    ಗದಗ: ಗುರುವಾರದಿಂದ ಶುರುವಾರ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಆರಂಭವಾಗಿದ್ದು, ಮೊದಲ ದಿನವೇ ಅವಗಢವೊಂದ ಸಂಭವಿಸಿ, ವಿದ್ಯಾರ್ಥಿಯೊಬ್ಬ ಸಾವಿಗೀಡಾಗಿರುವ ಘಟನೆ ಮುಂಡರಗಿ ತಾಲೂಕಿನ ಬಾಗೇವಾಡಿ ಗ್ರಾಮದ ಬಳಿ ನಡೆದಿದೆ.

    ನಿನ್ನೆ ಕಲಕೇರಿ‌ ಪರೀಕ್ಷಾ ಕೇಂದ್ರದಿಂದ ಪರೀಕ್ಷೆ ಮುಗಿಸಿ ವಿದ್ಯಾರ್ಥಿಗಳಾದ ಸಿದ್ದಪ್ಪ ತಳವಾರ, ಈರಣ್ಣ ಬಡಿಗೇರ ಹಾಗೂ ಮೈಲಾರಿ ಯಳವತ್ತಿ ಬೈಕನಲ್ಲಿ ತಮ್ಮೂರಿಗೆ ತೆರಳುತ್ತಿದ್ದರು. ಈ ವೇಳೆ ಬೆಳ್ಳಟ್ಟಿಯಿಂದ ಮುಂಡರಗಿ ಮಾರ್ಗವಾಗಿ ಬರುತ್ತಿದ್ದ ಟಿಪ್ಪರ್, ಲಾರಿಯನ್ನು ಓವರ್ ಟೆಕ್ ಮಾಡಲು ಹೋಗಿ‌ ವಿದ್ಯಾರ್ಥಿಗಳ ಬೈಕ್​ಗೆ ಗುದ್ದಿ, ರಸ್ತೆ ಬದಿಯಲ್ಲಿ ನಿಂತಿದ್ದ ವೈದ್ಯರ‌ ಕಾರಿಗೂ ಟಿಪ್ಪರ್ ಡಿಕ್ಕಿ ಹೊಡೆದಿತ್ತು.

    ಇದನ್ನೂ ಓದಿ: ಹಾಡುವಾಗ ಛಿದ್ರಗೊಂಡ ಮೆದುಳಿನ ರಕ್ತನಾಳ: ಸಾವು-ಬದುಕಿನ ನಡುವೆ ಮಹಿಳೆಯ ಹೋರಾಟ

    ಈ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಮೂವರು ವಿದ್ಯಾರ್ಥಿಗಳನ್ನು ಸ್ಥಳೀಯರು ಆಂಬುಲೆನ್ಸ್​ ಸಹಾಯದಿಂದ ಗದಗದ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಕಿತ್ಸೆ ಫಲಕಾರಿಯಾಗದೇ ಮೂವರು ವಿದ್ಯಾರ್ಥಿಗಳಲ್ಲಿ ಓರ್ವ ವಿದ್ಯಾರ್ಥಿ ಸಿದ್ಧಪ್ಪ ತಳವಾರ (16) ಸಾವಿಗೀಡಾಗಿದ್ದಾನೆ.

    ಉಳಿದ ಈರಣ್ಣ‌ಬಡಿಗೇರ ಹಾಗೂ ಮೈಲಾರಿ ಯಳವತ್ತಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಇತ್ತ ಮಗನನ್ನು ಕಳೆದುಕೊಂಡು ಸಿದ್ಧಪ್ಪ ತಳವಾರ ಕುಟುಂಬಸ್ಥರ‌ ಆಕ್ರಂದನ ಮುಗಿಲು ಮುಟ್ಟಿದೆ. ಅಪಘಾತಕ್ಕೆ ಕಾರಣನಾದ ಲಾರಿ ಚಾಲಕನನ್ನು ಪೊಲಿಸರು ವಶಕ್ಕೆ ಪಡೆದಿದ್ದಾರೆ. ಮುಂಡರಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ದಿಗ್ವಿಜಯ ನ್ಯೂಸ್​)

    ಇದನ್ನೂ ಓದಿ: ಮದುವೆಯಾಗುವುದಾಗಿ ನಂಬಿಸಿ ಸ್ಟಾರ್​ ನಟಿಗೆ ವಂಚನೆ: ಬಂಧಿತ ಆರೋಪಿಗಳಿಂದ ಸ್ಪೋಟಕ ಮಾಹಿತಿ

    ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯೋದಿಲ್ಲವೆಂದು ಮನೆಯಲ್ಲೇ ಉಳಿದಿದ್ದ ವಿದ್ಯಾರ್ಥಿನಿಯರಿಗೆ ಅಧಿಕಾರಿಗಳ ಶಾಕ್!​

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts