ರಾಜ್ಯಕ್ಕೆ ಸವದತ್ತಿ ವಿದ್ಯಾರ್ಥಿನಿ  ಪ್ರಥಮ

IMG-20230508-WA0020.jpg
Published on


ವಿಜಯವಾಣಿ ಸುದ್ದಿಜಾಲ ಬೆಳಗಾವಿ
ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಸವದತ್ತಿ‌ ಪಟ್ಟಣದ ಅನುಪಮಾ ಶ್ರೀಶೈಲ ಹಿರೇಹೊಳಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.
ಸವದತ್ತಿಯ ಕುಮಾರೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಓದುತ್ತಿದ್ದ ವಿದ್ಯಾರ್ಥಿನಿ ಅನುಪಮಾ 625ಕ್ಕೆ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ರ‌್ಯಾಂಕ್ ಪಡೆದಿದ್ದಾರೆ.
ಸವದತ್ತಿ ಯಲ್ಲಮ್ಮ ದೇವಸ್ಥಾನ ದಲ್ಲಿನೌಕರನಾಗಿ ಕೆಲಸ ಮಾಡುತ್ತಿದ್ದ ತಂದೆ ಶ್ರೀಶೈಲ ಹಿರೇಹೊಳಿ ಒಂದು ವರ್ಷದ ಹಿಂದೆ ಅನಾರೋಗ್ಯದಿಂದ ಮೃತಪಟ್ಟಿದ್ದರು. ತಾಯಿ ರಾಜಶ್ರೀ ಹಿರೇಹೊಳಿ ಧಾರವಾಡ ಮೂಲದ ಖಾಸಗಿ ಸಂಸ್ಥೆಯ ಲ್ಲಿ  ಸಮೀಕ್ಷೆ ವಿಭಾಗದಲ್ಲಿ ಕೆಲಸ‌ಮಾಡುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net