ಎಸ್​ಎಸ್​ಎಲ್​ಸಿ ಪರೀಕ್ಷೆಗೆ ಸುಪ್ರೀಂಕೋರ್ಟ್​ ಅಸ್ತು

PUC exam in mizoram
Published on

ನವದೆಹಲಿ: ಇದೇ 25ರಿಂದ ಕರ್ನಾಟಕದಲ್ಲಿ ನಡೆಯಲಿರುವ ಎಸ್​ಎಸ್​ಎಲ್​ಸಿ ಪರೀಕ್ಷೆಯನ್ನು ರದ್ದು ಮಾಡುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್​ ಮಂಗಳವಾರ ವಜಾ ಮಾಡಿದೆ.

ಈ ಮೂಲಕ, ಎಸ್​ಎಸ್​ಎಲ್​ಸಿ ಪರೀಕ್ಷೆಯ ಹಾದಿ ಸುಗಮವಾಗಿದ್ದು, ಪರೀಕ್ಷೆಯು ನಿಗದಿತ ವೇಳೆಯಲ್ಲಿಯೇ ನಡೆಯಲಿದೆ.

ಕರೊನಾ ವೈರಸ್​ ಆತಂಕ ಇರುವ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ರದ್ದು ಮಾಡುವಂತೆ ಬೆಳಗಾವಿಯ ರಾಜಶ್ರೀ ಎಂಬುವವರು ಕೋರಿದ್ದರು. ಮಕ್ಕಳು ಭಯದ ವಾತಾವರಣದಲ್ಲಿ ಪರೀಕ್ಷೆ ಬರೆಯುವ ಪರಿಸ್ಥಿತಿ ಬರುತ್ತದೆ. ಇದು ಸರಿಯಲ್ಲ. ಇದಾಗಲೇ ಕೆಲವು ರಾಜ್ಯಗಳಲ್ಲಿ ಪರೀಕ್ಷೆ ರದ್ದು ಮಾಡಿರುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿಯೂ ರದ್ದಾಗಬೇಕಿದೆ ಎಂದು ಅವರು ತಿಳಿಸಿದ್ದರು.

ಆದರೆ ಈ ಅರ್ಜಿಯನ್ನು ಮಾನ್ಯ ಮಾಡಲು ನ್ಯಾಯಮೂರ್ತಿ ಎಲ್.ನಾಗೇಶ್ವರ ರಾವ್ ನೇತೃತ್ವದ ಪೀಠ ನಿರಾಕರಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net