More

    ಕರ್ನಾಟಕ: ಎಸ್ಎಸ್ಎಲ್​ಸಿ ಪರೀಕ್ಷೆ ಮೊದಲ ದಿನವೇ ಮೂವರು ವಿದ್ಯಾರ್ಥಿಗಳು ಸಾವು

    ಬೆಂಗಳೂರು: ರಾಜ್ಯದಲ್ಲಿ ಮಾರ್ಚ್​ 25 ಸೋಮವಾರದಿಂದ ಎಸ್​ಎಸ್​ಎಲ್​ಸಿ ಪರೀಕ್ಷೆಗಳು ಪ್ರಾರಂಭವಾಗಿದ್ದು, ಮೊದಲ ಪರೀಕ್ಷೆ ದಿನವೇ ಮೂವರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ.

    ಇದನ್ನೂ ಓದಿ: ಶಸ್ತ್ರಚಿಕಿತ್ಸೆಯಿಂದ ಚೇತರಿಕೆ: ವಿಡಿಯೋ ಹಂಚಿಕೊಂಡ ಜಗ್ಗಿ ವಾಸುದೇವ್

    ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆಯಲು ತೆರಳಿದ್ದ ವಿದ್ಯಾರ್ಥಿ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದರೆ, ತುಮಕೂರಿನಲ್ಲಿ ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿ ಆರೋಗ್ಯದಲ್ಲಿ ಏರುಪೇರಾಗಿ ಮೃತಪಟ್ಟಿದ್ದಾನೆ. ಇನ್ನು ಮತ್ತೋರ್ವ ವಿದ್ಯಾರ್ಥಿ ಪರೀಕ್ಷೆ ದಿನವೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

    ಪರೀಕ್ಷೆ ದಿನವೇ ವಿದ್ಯಾರ್ಥಿ ಆತ್ಮಹತ್ಯೆ

    ಶಿವಮೊಗ್ಗ: ಪರೀಕ್ಷಾ ದಿನವೇ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಯಡೇಹಳ್ಳಿ ಗ್ರಾಮದಲ್ಲಿ ನಡೆದಿದೆ. ಪರಶುರಾಮ್ ಬಾಬು (16) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಆನಂದಪುರದ KPSC ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ, ಚೆನ್ನಾಗಿಯೇ ಓದುತ್ತಿದ್ದ. ಪರೀಕ್ಷೆಗೆ ಎಲ್ಲಾ ಸಿದ್ಧತೆಯನ್ನೂ ಮಾಡಿಕೊಂಡಿದ್ದ. ಆದ್ರೆ ಕೊನೇ ಕ್ಷಣದಲ್ಲಿ ಭಯದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪ್ರಾಥಮಿಕ ಮೂಲಗಳಿಂದ ತಿಳಿದುಬಂದಿದೆ. ಈ ಸಂಬಂಧ ಆನಂದಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಅಪಘಾತದಲ್ಲಿ ಸಾವು

    ಶಿವಮೊಗ್ಗ ತಾಲೂಕಿನ ಮೂಡಲವಿಠಲಾಪುರ ಗ್ರಾಮದಲ್ಲಿ ಎಸ್​ಎಸ್​ಎಲ್​​ಸಿ ಪರೀಕ್ಷೆ ಬರೆಯಬೇಕಾಗಿದ್ದ ವಿದ್ಯಾರ್ಥಿ ಅಪಘಾತದಲ್ಲಿ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಜಂಬರಘಟ್ಟ ಗ್ರಾಮದ ನಿವಾಸಿ ಉಮ್ಮೆ ಕೂಲ್ಸುಂ (14) ಮೃತ ವಿದ್ಯಾರ್ಥಿ. ರಸ್ತೆ ದಾಟುವ ವೇಳೆ ವಿದ್ಯಾರ್ಥಿಗೆ ಇನೋವಾ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಬಾಲಕಿ ಸಾವನ್ನಪ್ಪಿದ್ದಾಳೆ. ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

    ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿ ತೀವ್ರ ಅಸ್ವಸ್ಥಗೊಂಡು ಸಾವು: ತುರುವೇಕೆರೆಯಲ್ಲಿ ದುರ್ಘಟನೆ

    ತುರುವೇಕೆರೆ ಪಟ್ಟಣದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿಯೊಬ್ಬ ತೀವ್ರ ಅಸ್ವಸ್ಥಗೊಂಡು ಸಾವನ್ನಪ್ಪಿರುವ ಘಟನೆ ಸೋಮವಾರ ನಡೆದಿದೆ. ಮೃತ ವಿದ್ಯಾರ್ಥಿ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಚಿಕ್ಕರಾಂಪುರ ನಿವಾಸಿ ಸಿದ್ದೇಶ್ ಅವರ ಮಗ ಮೋಹನ್ ಕುಮಾರ್ ಸಿ.ಎಸ್ (16) ಎಂದು ಗುರುತಿಸಲಾಗಿದೆ. ಮೃತ ವಿದ್ಯಾರ್ಥಿ ತಾಲ್ಲೂಕಿನ ಲೋಕಮ್ಮನಹಳ್ಳಿ ಗೇಟ್ನ ಶ್ರೀ ಕಂಚಿರಾಯ ಸನಿವಾಸ ಪ್ರೌಢ ಶಾಲೆಯ ಹತ್ತನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದನೆಂದು ತಿಳಿದು ಬಂದಿದೆ.

    ಪಟ್ಟಣದ ದಬ್ಬೇಘಟ್ಟ ರಸ್ತೆಯಲ್ಲಿನ ಸರಸ್ವತಿ ಬಾಲಿಕಾ ಪ್ರೌಢ ಶಾಲಾ ಪರೀಕ್ಷಾ ಕೇಂದ್ರದಲ್ಲಿ ಮೋಹನ್ ಕುಮಾರ್ ಸಿ.ಎಸ್ ಸೋಮವಾರ ಬೆಳಗ್ಗೆ ಪ್ರಥಮ ಭಾಷೆ ಕನ್ನಡ ವಿಷಯವನ್ನು ಬರೆಯುತ್ತಿದ್ದ ವೇಳೆ ಅಸ್ವಸ್ಥಗೊಂಡಿದ್ದಾನೆ.

    ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿದ್ದಾರೆ. ಕೆಲ ಸಮಯದ ನಂತರ ಮತ್ತೆ ತೀವ್ರ ಅಸ್ಪಸ್ಥಗೊಂಡಿದ್ದರಿಂದ ವೈದ್ಯರು ಜಿಲ್ಲಾ ಸಾರ್ವಜನಿಕ ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ಶಿಕ್ಷಕರಿಗೆ ತಿಳಿಸಿದ್ದಾರೆ. ತಕ್ಷಣ ಆಂಬ್ಯೂಲೆನ್ಸ್ ಮೂಲಕ ಜಿಲ್ಲಾ ಆಸ್ಪತ್ರೆಗೆ ಸಾಗಿಸುವ ಗುಬ್ಬಿ ಸಮೀಪ ಸಾವನ್ನಪ್ಪಿದ್ದರಿಂದ ಗುಬ್ಬಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಕೊಂಡೊಯ್ದಿದ್ದಾರೆ.

    ಅದೇ ಮಧ್ಯಾಹ್ನ ಹುಲ್ಲೇಕೆರೆಯ ಬಸವೇಶ್ವರ ಸಂಯುಕ್ತ ಪದವಿಪೂರ್ವ ಪ್ರೌಢ ಶಾಲಾ ವಿಭಾಗದ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರದಲ್ಲಿ ಮತ್ತೊರ್ವ ವಿದ್ಯಾರ್ಥಿ ರೋಹಿತ್ ಅಸ್ವಸ್ಥಗೊಂಡಿದ್ದರಿಂದ ದಂಡಿನಶಿವರ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಮತ್ತೆ ಪರೀಕ್ಷಾ ಕೇಂದ್ರಕ್ಕೆ ಬಿಡಲಾಗಿದೆಂದು ಇಲಾಖಾ ಮೂಲಗಳಿಂದ ತಿಳಿದು ಬಂದಿದೆ.

    ‘ಈ ಬಾರಿ ಪರೀಕ್ಷಾ ಕೊಠಡಿಯೊಳಗೆ ಸಿಸಿಟಿವಿ ಕ್ಯಾಮೆರಾ ಅಳವಡಿಕೆಯಿಂದ ಮಕ್ಕಳು ಭಯಭೀತರಾಗಿ ಅಸ್ವಸ್ಥಗೊಳ್ಳುತ್ತಿರುವುದು ಸಾವಿಗೆ ಕಾರಣವಾಗುತ್ತಿದೆಂದು ಪೋಷಕರು, ಶಿಕ್ಷಕರೊಬ್ಬರು ದೂರಿದರು.

    ನಟಿ ಸಾಯಿ ಪಲ್ಲವಿ ನಟನೆ ಬಗ್ಗೆ ಶಾಕಿಂಗ್ ಹೇಳಿಕೆ ನೀಡಿದ ಟಾಲಿವುಡ್​ ನಟ​!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts