More

    ಎಸ್ಸೆಸ್ಸೆಲ್ಸಿ ಪರೀಕ್ಷೆ ಪರಿಷ್ಕೃತ ವೇಳಾಪಟ್ಟಿ ಬಿಟ್ಟಿಲ್ಲ- ಸುಳ್ಳು ಸುದ್ದಿಯನ್ನು ನಂಬಬೇಡಿ ಎಂದ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ

    ಬೆಂಗಳೂರು: ಕರೊನಾ ಸೋಂಕು ಹರಡುತ್ತಿರುವ ಕಾರಣ ರಾಜ್ಯದಲ್ಲಿ ಮಾರ್ಚ್ 27 ರಿಂದ ಏಪ್ರಿಲ್ 9ರ ತನಕ ನಡೆಯಬೇಕಾಗಿದ್ದ ಎಸ್​​ಎಸ್​ಎಲ್​ಸಿ ಪರೀಕ್ಷೆಯನ್ನು ಮುಂದೂಡಿ ಸರ್ಕಾರ ಆದೇಶ ಹೊರಡಿಸಿತ್ತು. ಆದರೆ, ಈ ನಡುವೆ, ಸಾಮಾಜಿಕ ಜಾಲತಾಣಗಳಲ್ಲಿ ಪರಿಷ್ಕೃತ ವೇಳಾಪಟ್ಟಿ ಬಿಡುಗಡೆಯಾಗಿದೆ ಎಂಬ ಸುದ್ದಿ ಹರಿದಾಡುತ್ತಿದೆ. ಅದರ ಜತೆಗೆ ಒಂದು ವೇಳಾಪಟ್ಟಿಯೂ ಇದೆ.

    ಈ ಸುದ್ದಿಯಿಂದ ಎಸ್​ಎಸ್​ಎಲ್​ಸಿ ಪರೀಕ್ಷಾರ್ಥಿಗಳು ಮತ್ತು ಅವರ ಪಾಲಕರು ಗೊಂದಲಕ್ಕೀಡಾಗಿರುವುದನ್ನು ಅರಿತ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಈ ಬಗ್ಗೆ ಸ್ಪಷ್ಟೀಕರಣ ನೀಡಿದೆ. ಇದರಂತೆ, ಪರಿಷ್ಕೃತ ವೇಳಾಪಟ್ಟಿ ನಕಲಿಯಾಗಿದ್ದು, ಕಿಡಿಗೇಡಿಗಳ ಕೃತ್ಯವಾಗಿದೆ. ಪರೀಕ್ಷಾರ್ಥಿಗಳು ಮತ್ತು ಪಾಲಕರು ಈ ವದಂತಿಗಳ ಬಗ್ಗೆ ಗಮನಹರಿಸಬಾರದು. ಪರೀಕ್ಷಾರ್ಥಿಗಳು ಪರೀಕ್ಷೆಗೆ ಅಗತ್ಯ ಸಿದ್ಧತೆಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು. ಪರಿಷ್ಕೃತ ವೇಳಾಪಟ್ಟಿಯನ್ನು ಮಂಡಳಿ ಎಲ್ಲರಿಗೂ ಗೊತ್ತಾಗುವಂತೆಯೇ ಪ್ರಕಟಿಸುವುದಾಗಿ ಸ್ಪಷ್ಟಪಡಿಸಿದೆ.

    ರಾಜ್ಯದಲ್ಲಿ ಕರೊನಾ ಸೋಂಕು ಪೀಡಿತರ ಸಂಖ್ಯೆ 33ಕ್ಕೆ ಏರಿಕೆಯಾಗಿದೆ. ಅಲ್ಲದೆ ನಿಗಾದಲ್ಲಿರುವವ ಸಂಖ್ಯೆಯಲ್ಲೂ ಹೆಚ್ಚಳವಾಗಿದೆ. ಈ ನಡುವೆ, ಒಂಭತ್ತು ಜಿಲ್ಲೆಗಳಲ್ಲಿ ಕರ್ಫ್ಯೂ ಮಾದರಿ ಲಾಕ್​ಡೌನ್ ಘೋಷಿಸಿರುವ ಸರ್ಕಾರ ರಾಜ್ಯದಲ್ಲಿ ಬಂದ್​ ಆಚರಿಸುವಂತೆ ಆದೇಶಿಸಿದೆ.

    ಕರ್ನಾಟಕ ಬಂದ್​ – ನಾಳೆಯಿಂದ 31ರ ತನಕ ಕರ್ನಾಟಕ ಸಂಪೂರ್ಣ ಲಾಕ್​ಡೌನ್: 9 ಜಿಲ್ಲೆಗಳಲ್ಲಿ ಕರ್ಫ್ಯೂ ಮಾದರಿ ನಿಯಂತ್ರಣ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts