More

    ಎಸ್ಸೆಸ್ಸೆಲ್ಸಿ ಪರೀಕ್ಷೆ: ವರ್ಕ್‌ಔಟ್ ಆಯ್ತು ವೆಬ್‌ಕಾಸ್ಟಿಂಗ್, ಮೊದಲ ದಿನವೇ ಇಬ್ಬರು ಶಿಕ್ಷಕರು ಅಮಾನತು

    ಬೆಂಗಳೂರು ರಾಜ್ಯಾದ್ಯಂತ ಸೋಮವಾರ ಆರಂಭವಾದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಪರೀಕ್ಷಾ ಕೊಠಡಿಗಳಲ್ಲಿ ವಿದ್ಯಾರ್ಥಿಗಳು ನಕಲು ಮಾಡಲು ಸಹಕರಿಸಿದ ಆರೋಪದ ಅಧಾರದಲ್ಲಿ ಇಬ್ಬರು ಶಿಕ್ಷಕರನ್ನು ಅಮಾನತು ಮಾಡಲಾಗಿದೆ. ಅಕ್ರಮದಲ್ಲಿ ತೊಡಗಿದ್ದ ಒಬ್ಬ ವಿದ್ಯಾರ್ಥಿಯನ್ನು ಡಿಬಾರ್ ಮಾಡಲಾಗಿದೆ. ಉಳಿದೆಡೆ ಪರೀಕ್ಷೆ ಸುಗಮವಾಗಿ ನಡೆದಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ತಿಳಿಸಿದೆ.

    ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಇದೇ ಮೊದಲ ಬಾರಿಗೆ ವೆಬ್‌ಕಾಸ್ಟಿಂಗ್ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದೆ. ಅದರ ಆಧಾರದಲ್ಲಿ ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ಏವೂರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕ ಸಾಹೇಬಗೌಡ ಉಕ್ಕಾಲಿ ಹಾಗೂ ಝಂಡದಕೇರಾ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಹಣಮಂತ್ರಾಯ ಎಂಬುವವರನ್ನು ಅಮಾನತು ಮಾಡಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts