ಜಿಲ್ಲಾದ್ಯಂತ ಎಸ್ಸೆಸ್ಸೆಲ್ಸಿ ಪರೀಕ್ಷೆ ಸುಸೂತ್ರ

ಯಾದಗಿರಿ: ಜಿಲ್ಲಾದ್ಯಂತ ಗುರುವಾರ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಸುಸೂತ್ರವಾಗಿ ನಡೆದಿದ್ದು, ಬಾಹ್ಯ ಅಭ್ಯಥರ್ಿಗಳ ಕೇಂದ್ರದಲ್ಲಿ ಅಭ್ಯರ್ಥಿ ಪರವಾಗಿ ಬೇರೆಯವರು ಪರೀಕ್ಷೆಗೆ ಕುಳಿತಿರುವುದನ್ನು ಪತ್ತೆ ಹಚ್ಚಿದ ಶಿಕ್ಷಣ ಇಲಾಖೆ ಅಧಿಕಾರಿಗಳು ತಕ್ಷಣ ಅವರ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಿದ್ದಾರೆ.

ಗುರುವಾರ ಪ್ರಥಮ ಭಾಷೆಗೆ ಪರೀಕ್ಷೆ ನಡೆದಿದ್ದು, ಜಿಲ್ಲೆಯಲ್ಲಿ ಒಟ್ಟು ನೋಂದಣಿ ಮಾಡಿಸಿದ್ದ 14176 ವಿದ್ಯಾರ್ಥಿಗಳ ಪೈಕಿ 13416 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 760 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 54 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಎಲ್ಲ ಕೇಂದ್ರಗಳಲ್ಲಿ ಸಿಸಿ ಟಿವಿಗಳನ್ನು ಅಳವಡಿಸಲಾಗಿದ್ದು, ವಿದ್ಯಾಥರ್ಿಗಳಿಗೆ ತೊಂದರೆಯಾಗದಂತೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕೈಗೊಳ್ಳಲಾಗಿದೆ ಎಂದು ಡಿಡಿಪಿಐ ಶ್ರೀಶೈಲ ಬಿರಾದರ್ `ವಿಜಯವಾಣಿ’ಗೆ ತಿಳಿಸಿದರು.

Leave a Reply

Your email address will not be published. Required fields are marked *