More

    ಎಸ್‌ಎಸ್‌ಎಲ್‌ಸಿ ಪರೀಕ್ಷೆ ಶುಭಾರಂಭ

    ಪಾಂಡವಪುರ : ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮೊದಲ ದಿನವಾದ ಸೋಮವಾರ ಪ್ರಥಮ ಭಾಷೆ ಪರೀಕ್ಷೆಯನ್ನು ತಾಲೂಕಿನ ಒಟ್ಟು 2,134 ವಿದ್ಯಾರ್ಥಿಗಳು ಸುಸೂತ್ರವಾಗಿ ಬರೆದರು. ತಾಲೂಕಿನಲ್ಲಿ 6 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಆರಂಭಗೊಂಡಿತು. ಒಟ್ಟು 2,154 ವಿದ್ಯಾರ್ಥಿಗಳ ಪೈಕಿ 20 ವಿದ್ಯಾರ್ಥಿಗಳು ಗೈರಾಗಿದ್ದರು. ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು, ವಿಜಯ ಪದವಿ ಪೂರ್ವ ಕಾಲೇಜು, ಪಿಇಎಸ್ ಬಾಲಕಿಯರ ಪ.ಪೂ. ಕಾಲೇಜು ಹಾಗೂ ತಾಲೂಕಿನ ರೈಲ್ವೆ ನಿಲ್ದಾಣದ ಪಿಎಸ್‌ಎಸ್‌ಕೆ ಪ್ರೌಢಶಾಲೆ, ಚಿನಕುರಳಿ ಸರ್ಕಾರಿ ಪ.ಪೂ. ಕಾಲೇಜು ಹಾಗೂ ಮೇಲುಕೋಟೆಯ ಗುರುಶನೈಶ್ಚರ ಆಂಗ್ಲ ಪ್ರೌಢಶಾಲೆ ಸೇರಿದಂತೆ 6 ಪರೀಕ್ಷಾ ಕೇಂದ್ರಗಳಲ್ಲಿ ಅನುದಾನಿತ, ಅನುದಾನ ರಹಿತ, ಮುರಾರ್ಜಿ, ಆದರ್ಶ ವಸತಿ ಶಾಲೆಗಳ ವಿದ್ಯಾರ್ಥಿಗಳು ಪರೀಕ್ಷೆ ಬರೆದರು.
    ಆಂಬುಲೆನ್ಸ್ ವ್ಯವಸ್ಥೆ: ಮೊದಲ ಬಾರಿಗೆ ಪರೀಕ್ಷೆ ಎದುರಿಸುವ ವಿದ್ಯಾರ್ಥಿಗಳಿಗೆ ಆರೋಗ್ಯ ಸಮಸ್ಯೆ ಎದುರಾಗದಂತೆ ಪ್ರತಿ ಪರೀಕ್ಷಾ ಕೇಂದ್ರಗಳಲ್ಲೂ ಆರೋಗ್ಯ ಸಹಾಯಕಿಯರನ್ನು ನೇಮಿಸಲಾಗಿತ್ತು. ಮುಂಜಾಗ್ರತಾ ಕ್ರಮವಾಗಿ ಆಂಬುಲೆನ್ಸ್ ವ್ಯವಸ್ಥೆ ಮಾಡಲಾಗಿತ್ತು. ಪರೀಕ್ಷಾ ಕೇಂದ್ರದ ಪ್ರತಿ ಕೊಠಡಿಗಳಲ್ಲಿ ಸಿಸಿ ಕ್ಯಾಮರಾ ಮತ್ತು ವೆಬ್‌ಕಾಸ್ಟ್ ತಂತ್ರಜ್ಞಾನ ಬಳಸಲಾಗಿತ್ತು. ಮುಖ್ಯ ಅಧೀಕ್ಷಕರು, ಕೊಠಡಿ ಮೇಲ್ವಿಚಾರಕರು, ಮಾರ್ಗಾಧಿಕಾರಿಗಳು, ಸ್ಥಾನಿಕ ಜಾಗೃತ ದಳ, ಮೊಬೈಲ್ ಸ್ವಾಧೀನಾಧಿಕಾರಿ, ಪ್ರಶ್ನೆ ಪತ್ರಿಕೆ ಪಾಲಕ, ಜಿಲ್ಲಾ ಮತ್ತು ತಾಲೂಕು ಜಾಗೃತ ದಳದ ತಂಡಗಳನ್ನು ನೇಮಿಸಲಾಗಿತ್ತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts