More

    ಎಸ್ಸೆಸ್ಸೆಲ್ಸಿ ಭವಿಷ್ಯ ನಿರ್ಧರಿಸುವ ಪ್ರಮುಖ ಘಟ್ಟ – ಡಿಡಿಪಿಐ ದೊಡ್ಡಬಸಪ್ಪ ನೀರಲಕೇರಿ ಅಭಿಮತ

    ಕುಷ್ಟಗಿ: ವಿದ್ಯಾರ್ಥಿ ಜೀವನದಲ್ಲಿ ಎಸ್ಸೆಸ್ಸೆಲ್ಸಿ, ಭವಿಷ್ಯ ನಿರ್ಧರಿಸುವ ಪ್ರಮುಖ ಘಟ್ಟವಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ(ಡಿಡಿಪಿಐ) ದೊಡ್ಡಬಸಪ್ಪ ನೀರಲಕೇರಿ ಹೇಳಿದರು.

    ಪೊಲೀಸ್, ಶಿಕ್ಷಣ ಇಲಾಖೆ ಹಾಗೂ ಬಳ್ಳಾರಿಯ ಸನ್ಮಾರ್ಗ ಗೆಳೆಯರ ಬಳಗ ಪಟ್ಟಣದ ರೇಣುಕಾಚಾರ್ಯ ಮಂಗಲ ಭವನದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷಾ ಸಿದ್ಧತೆ ಕುರಿತು ಮಂಗಳವಾರ ಆಯೋಜಿಸಿದ್ದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು. ಅತಿ ಹೆಚ್ಚು ಅಂಕ ಪಡೆದು ಉತ್ತೀರ್ಣರಾದರೆ ಪ್ರತಿಷ್ಠಿತ ಕಾಲೇಜುಗಳಲ್ಲಿ ಕಲಿಯುವ ಅವಕಾಶ ಸಿಗುತ್ತದೆ ಎಂದರು.

    ಬಿಇಒ ಎಂ.ಚನ್ನಬಸಪ್ಪ ಮಾತನಾಡಿ, ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಕಳೆದ ವರ್ಷ ಜಿಲ್ಲೆಗೆ ಪ್ರಥಮ ಸ್ಥಾನ ಗಳಿಸಿರುವ ತಾಲೂಕು, ಕಲಬುರಗಿ ವಿಭಾಗ ಮಟ್ಟದಲ್ಲಿ ಎರಡನೇ ಸ್ಥಾನ ಹಾಗೂ ರಾಜ್ಯ ಮಟ್ಟದಲ್ಲಿ 77ಸ್ಥಾನ ಪಡೆದಿದೆ. ಈ ಬಾರಿ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆಯುವ ಪ್ರಯತ್ನದಲ್ಲಿ ವಿದ್ಯಾರ್ಥಿಗಳನ್ನು ತಯಾರುಗೊಳಿಸಲಾಗುತ್ತಿದೆ. ಈ ಕಾರ್ಯಕ್ಕೆ ಪೊಲೀಸ್ ಇಲಾಖೆ ಕೈಜೋಡಿಸುತ್ತಿದೆ ಎಂದರು.

    ಪಿಎಸ್‌ಐ ಚಿತ್ತರಂಜನ್, ಬಾಲಕಿಯರ ಸರ್ಕಾರಿ ಪಪೂ ಕಾಲೇಜಿನ ಉಪ ಪ್ರಾಚಾರ್ಯ ಶರಣಯ್ಯ ಹಿರೇಮಠ ಮಾತನಾಡಿದರು. ಬಿಆರ್‌ಸಿ ಸಮನ್ವಯಾಧಿಕಾರಿ ಶ್ರೀಶೈಲ ಸೋಮನಕಟ್ಟಿ, ದೈಹಿಕ ಶಿಕ್ಷಣ ಪರಿವೀಕ್ಷಕ ವಿ.ಬಿ.ದಾದ್ಮಿ, ಸನ್ಮಾರ್ಗ ಗೆಳೆಯರ ಬಳಗದ ಸಂಪನ್ಮೂಲ ವ್ಯಕ್ತಿಗಳಾದ ಪ್ರವೀಣ ಗುಡಿ, ಸತ್ಯನಾರಾಯಣ ಬಳ್ಳಾರಿ, ಯರ‌್ರಿಸ್ವಾಮಿ, ನೋಡಲ್ ಅಧಿಕಾರಿ ದಾವಲಸಾಬ ವಾಲಿಕಾರ, ಪ್ರೌಢ ಶಾಲಾ ಶಿಕ್ಷಕ ಸಂಘದ ತಾಲೂಕು ಅಧ್ಯಕ್ಷ ಸುರೇಶ ಕಾಡಗಿಮಠ ಇದ್ದರು. ಪಟ್ಟಣದ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

    ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆಯಲು ವಿವಿಧ ಕಾರ್ಯಾಗಾರ ಆಯೋಜಿಸಲಾಗುವುದು. ಸದುಪಯೋಗ ಪಡೆವ ಮೂಲಕ ವಿದ್ಯಾರ್ಥಿಗಳು ಸಾಧಕರಾಗಿ ಹೊರ ಹೊಮ್ಮಬೇಕು.
    | ಚಿತ್ತರಂಜನ್ ಪಿಎಸ್‌ಐ ಕುಷ್ಟಗಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts