ಎಸ್ಸೆಸ್ಸೆಲ್ಸಿಯಲ್ಲೇ ಮುಂದಿನ ಶೈಕ್ಷಣಿಕ ಗುರಿ: ಸುಹಾಸ್ ಹೆಗ್ಡೆ ಸಲಹೆ

Mul_SSLC

ಮೂಲ್ಕಿ: ಎಸ್ಸೆಸ್ಸೆಲ್ಸಿ ಶಿಕ್ಷಣದ ಸಮಯದಲ್ಲಿ ಮುಂದಿನ ಶೈಕ್ಷಣಿಕ ಗುರಿಯನ್ನು ಆಯ್ಕೆ ಮಾಡುವ ಮೂಲಕ ಉತ್ತಮ ಉದ್ಯೋಗ ಹಾಗೂ ಉದ್ಯಮಿಯಾಗಿ ಹೊರಹೊಮ್ಮಲು ಸಾಧ್ಯವಿದೆ ಎಂದು ಮೂಲ್ಕಿ ವಿಜಯಾ ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಎನ್. ಸುಹಾಸ್ ಹೆಗ್ಡೆ ಹೇಳಿದರು.

ಮೂಲ್ಕಿ ವಿಜಯಾ ಕಾಲೇಜಿನ ಆಂತರಿಕ ಗುಣಮಟ್ಟ ಖಾತ್ರಿಕೋಶ ವತಿಯಿಂದ ಶನಿವಾರ ನಡೆದ ಮೂಲ್ಕಿ ತಾಲೂಕು ವ್ಯಾಪ್ತಿಯ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಒಂದು ದಿನದ ತರಬೇತಿ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕಾಲೇಜಿನ ಹಳೇವಿದ್ಯಾರ್ಥಿ ಮಂಗಳೂರಿನ ವೈದ್ಯ ಡಾ.ದೇವಿಪ್ರಸಾದ್ ಹೆಜಮಾಡಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕಾಲೇಜಿನ ಹಳೇ ವಿದ್ಯಾರ್ಥಿಗಳಾದ ದಿನೇಶ್ ಪ್ರಭು, ವಿಶ್ವಾಸ್ ಡಿ ಕುನ್ಹ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಮೂಲ್ಕಿ ಮಯೂರಿ ಫೌಂಡೇಷನ್‌ನ ಸಂಸ್ಥಾಪಕ ಜಯ ಕೆ. ಶೆಟ್ಟಿ, ಕಾಲೇಜಿನ ಪ್ರಾಂಶುಪಾಲೆ ಡಾ. ಶ್ರೀಮಣಿ, ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಪಮೀದಾ ಬೇಗಂ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ.ಶೈಲಜಾ ಏತಡ್ಕ ಹಾಗೂ ಕಾರ್ಯಕ್ರಮ ಸಂಯೋಜಕ ಪ್ರೊ. ವೆಂಕಟೇಶ್ ಭಟ್ ಉಪಸ್ಥಿತರಿದ್ದರು.

ಅಂತಿಮ ಬಿ.ಕಾಂ. ವಿದ್ಯಾರ್ಥಿನಿ ಪೃಥ್ವಿ ನಾಯಕ್ ಕಾರ್ಯಕ್ರಮ ನಿರೂಪಿಸಿದರು. ಶ್ರೀರಕ್ಷಾ ಭಟ್ ಸ್ವಾಗತಿಸಿದರು. ದಿಯಾ ವಂದಿಸಿದರು. ಬಿ.ಕಾಂ.ವಿದ್ಯಾರ್ಥಿಗಳಾದ ಲಿಯೋನಾ ಕ್ರಿಸ್ಟೀನಾ, ಹರ್ಷ, ಸಿಂಚನ ಶೆಣೈ ಹಾಗೂ ಶೈಬಾ ಅತಿಥಿಗಳನ್ನು ಪರಿಚಯಿಸಿದರು.

ಇಂದಿನ ದಿನಗಳಲ್ಲಿ ಶೈಕ್ಷಣಿಕ ಒತ್ತಡ ಎಲ್ಲ ವಿದ್ಯಾರ್ಥಿಗಳನ್ನು ಕಾಡುತ್ತಿದ್ದು, ಧ್ಯಾನ ಮತ್ತು ಪ್ರಾರ್ಥನೆ ಮೂಲಕ ಮಾನಸಿಕ ನೆಮ್ಮದಿ ಕಂಡುಕೊಳ್ಳುವ ಜತೆಗೆ ಬೌದ್ಧಿಕ ಶಕ್ತಿಯನ್ನು ವಿಸ್ತರಿಸಬಹುದು.

ಡಾ.ದೇವಿಪ್ರಸಾದ್ ಹೆಜಮಾಡಿ, ಮಂಗಳೂರಿನ ವೈದ್ಯ
Share This Article

Crab Sukka : ಭಾನುವಾರದ ಬಾಡೂಟಕ್ಕೆ ಮಾಡಿ ರುಚಿಯಾದ ಏಡಿ ಸುಕ್ಕ..

ಬೆಂಗಳೂರು: ವಾರದ ಕೊನೆಯಲ್ಲಿ ಮಧ್ಯಾಹ್ನದ ಸಮಯಕ್ಕೆ ರುಚಿಯಾದ ಅಡುಗೆ ಏನಾದರು ಮಾಡುವ ಪ್ಲಾನ್ (Plan)​ ಹಾಕಿಕೊಂಡಿದ್ದೀರಾ?ಆದಿತ್ಯವಾರದಂದು…

ಹಾವು ಕಚ್ಚಿದಾಗ ಮಾಡುವ ಈ ಒಂದು ತಪ್ಪಿನಿಂದ ಪ್ರಾಣ ಹೋಗುತ್ತೆ ಎಚ್ಚರ! ಈ ರೀತಿ ಮಾಡೋದನ್ನು ತಪ್ಪಿಸಿ | Snakes

ಕೊಲ್ಲಂ: ಹಾವುಗಳು ( Snakes ) ಕಚ್ಚಿದ ಸಂದರ್ಭದಲ್ಲಿ ಯಾವ ಹಾವು ಕಚ್ಚಿತ್ತು ಎಂಬುದನ್ನು ತಿಳಿದುಕೊಳ್ಳಲು…

Height Weight Chart: ಯಾವ ವಯಸ್ಸಿನಲ್ಲಿ ಎಷ್ಟು ತೂಕವನ್ನು ಹೊಂದಿರಬೇಕು ಗೊತ್ತಾ ? ಈ ಒಂದು ರಹಸ್ಯ ತಿಳಿದ್ರೆ ಕಾಯಿಲೆಗಳು ಹತ್ತಿರವು ಸುಳಿಯಲ್ಲ…

 ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಜನರು ತೂಕ ಹೆಚ್ಚಳ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಆದರೆ ಕೆಲವರು ಒಂದೇ…