More

    ಎಸ್ಸೆಸ್ಸೆಲ್ಸಿ ಅಂಕಪಟ್ಟಿ ತಿದ್ದುಪಡಿ ಸೇವೆ ಇನ್ಮುಂದೆ ಸುಲಭ: ಕುಳಿತ್ತಲೇ ಪಡೆಯಬಹುದು ಹೊಸ ಮಾರ್ಕ್ಸ್ ಕಾರ್ಡ್

    ಬೆಂಗಳೂರು ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳ ಅಂಕಪಟ್ಟಿಯನ್ನು ತಿದ್ದುಪಡಿ ಮಾಡಿಕೊಳ್ಳಲು ಆನ್‌ಲೈನ್ ವ್ಯವಸ್ಥೆ ಮಾಡಲಾಗಿದೆ.

    ಅಂಕಪಟ್ಟಿಯಲ್ಲಿ ಅಭ್ಯರ್ಥಿ ಹೆಸರು, ತಂದೆ-ತಾಯಿ ಹೆಸರು, ಜನ್ಮ ದಿನಾಂಕ ಮತ್ತು ಇತರೆ ತಿದ್ದುಪಡಿಗಳಿದ್ದಲ್ಲಿ ಭೌತಿಕವಾಗಿ ಅರ್ಜಿಗಳನ್ನು ಸ್ವೀಕರಿಸಿ ಇತ್ಯರ್ಥಪಡಿಸಲಾಗುತ್ತಿತ್ತು. ಇಲ್ಲಿಯವರೆಗೂ ಸಾಕಷ್ಟು ಸೇವೆಗಳನ್ನು ಡಿಜಿಟಲೀಕರಣ ಮಾಡಿರುವ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು, ಅಂಕಪಟ್ಟಿ ತಿದ್ದುಪಡಿಯನ್ನು ಕೂಡ ಆನ್‌ಲೈನ್ ಮಾಡಿದೆ.

    ಇಲ್ಲಿಯವರೆಗೂ ಅಗತ್ಯ ದಾಖಲೆ ಮತ್ತು ನಿಗದಿತ ಶುಲ್ಕದೊಂದಿಗೆ ಪ್ರಸ್ತಾವನೆಯನ್ನು ಸಂಬಂಧಿಸಿದ ವಿಭಾಗೀಯ ಕಚೇರಿಗಳಿಗೆ/ಮಂಡಳಿಗೆ ಅಂಚೆ ಮೂಲಕ ಸಲ್ಲಿಸಬೇಕಾಗಿತ್ತು. ಪ್ರಸ್ತಾವನೆ ಪರಿಶೀಲಿಸಿ ಅರ್ಹ ವಿದ್ಯಾರ್ಥಿಗಳಿಗೆ ಅಂಕಪಟ್ಟಿಯನ್ನು ಸಂಬಂಧಿಸಿದ ಶಾಲೆಗೆ ಭೌತಿಕವಾಗಿ ರವಾನಿಸಲಾಗುತ್ತಿತ್ತು. ಇದರಿಂದ ವಿದ್ಯಾರ್ಥಿಗಳು ಪ್ರಮಾಣಪತ್ರ ಪಡೆಯಲು ಹೆಚ್ಚಿನ ಕಾಲಾವಕಾಶ ಬೇಕಾಗುತ್ತಿತ್ತು.

    ಹೊಸ ವಿಧಾನದಲ್ಲಿ ತಿದ್ದುಪಡಿ ಮಾಡಿಕೊಳ್ಳಲು ವಿದ್ಯಾರ್ಥಿಯು ವ್ಯಾಸಂಗ ಮಾಡಿದ ಶಾಲೆಗಳ ಮುಖ್ಯ ಶಿಕ್ಷಕರಿಗೆ ಪೂರಕ ದಾಖಲೆಗಳನ್ನು ಸಲ್ಲಿಸಬೇಕು. ಸಂಬಂಧಿಸಿದ ಶಾಲಾ ಮುಖ್ಯ ಶಿಕ್ಷಕರು ಮಂಡಳಿ ಜಾಲತಾಣದ ಮೂಲಕ ಶಾಲಾ ಲಾಗಿನ್‌ನಲ್ಲಿ ಪ್ರಸ್ತಾವನೆ ಸಲ್ಲಿಸಬಹುದು.

    ನಿಗದಿತ ಶುಲ್ಕವನ್ನು ಕ್ರೆಡಿಟ್/ಡೆಬಿಟ್ ಕಾರ್ಡ್, ಇಂಟರ್‌ನೆಟ್ ಬ್ಯಾಂಕಿಂಗ್ ಮೂಲಕ ಸಲ್ಲಿಸಬಹುದು. ಆನ್‌ಲೈನ್ ಸೇವೆ ಲಭ್ಯವಾಗದವರು ಚಲನ್ ಡೌನ್‌ಲೋಡ್ ಮಾಡಿಕೊಂಡು ಯೂನಿಯನ್ ಬ್ಯಾಂಕ್‌ನ ಯಾವುದೇ ಶಾಖೆಗಳಲ್ಲಿ ಪಾವತಿಸಬಹುದು.

    ಈಗ ಆನ್‌ಲೈನ್ ಮಾಡಿರುವುದರಿಂದ ಮುಂದಿನ ಒಂದು ತಿಂಗಳ ಮಟ್ಟಿಗೆ ಮಾತ್ರ ಭೌತಿಕ ಅರ್ಜಿಗಳನ್ನು ಸ್ವೀಕರಿಸಲಾಗುತ್ತದೆ. ಬಳಿಕ ಆನ್‌ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕು ಎಂದು ಮಂಡಳಿ ಅಧ್ಯಕ್ಷರು ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts