More

    ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ ವೆಚ್ಚ; ಸರ್ಕಾರ ಭರಿಸಲಿ

    ಬೆಂಗಳೂರು: ಎಸ್‌ಎಸ್‌ಎಲ್ಸಿ ಪೂರ್ವ ಸಿದ್ಧತಾ ಪರೀಕ್ಷೆಯ ವೆಚ್ಚದ ಹಣವನ್ನು ವಿದ್ಯಾರ್ಥಿಗಳಿಂದಲೇ ವಸೂಲಿ ಮಾಡಬೇಕು ಎಂದು ಆದೇಶ ಹೊರಡಿಸಿರುವ ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಸರ್ಕಾರವನ್ನು ಗತಿಗೆಟ್ಟ ಸರ್ಕಾರ ಎಂದು ಕಟುವಾಗಿ ಟೀಕಿಸಿರುವ ಅವರು, ಕೂಡಲೇ ಈ ಆದೇಶವನ್ನು ವಾಪಸ್ ಪಡೆಯಬೇಕು, ಪರೀಕ್ಷಾ ವೆಚ್ಚವನ್ನು ಸರ್ಕಾರವೇ ಭರಿಸಬೇಕು ಎಂದು ಆಗ್ರಹಿಸಿದ್ದಾರೆ.

    ಜನತೆಗೆ 5 ಗ್ಯಾರಂಟಿ ಕೊಟ್ಟೆವು ಎಂದು ಬಡಾಯಿ ಕೊಚ್ಚಿಕೊಳ್ಳುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ಅದೆಷ್ಟು ಅಧಃಪತನಕ್ಕೆ ಹೋಗಿದೆ ಎನ್ನುವುದಕ್ಕೆ ಸಾಕ್ಷ್ಯ ಇಲ್ಲಿದೆ. ಒಂದು ಕೈಯ್ಯಲ್ಲಿ ಕೊಟ್ಟು ಹತ್ತು ಕೈಗಳಲ್ಲಿ ರಾವಣನಂತೆ ಕಸಿದುಕೊಳ್ಳುತ್ತಿರುವ ಸರ್ಕಾರ, ಈಗ ಎಸ್‌ಎಸ್‌ಎಲ್‌ಸಿ ಮಕ್ಕಳ ಕಿಸೆಗೂ ಕೈ ಹಾಕಿದೆ ಎಂದು ಕಿಡಿಕಾರಿದ್ದಾರೆ.

    ಫೆ. 26ರಿಂದ ಮಾರ್ಚ್ 3ರವರೆಗೂ ನಡೆಯಲಿರುವ 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಗೆ ಆಗುವ ವೆಚ್ಚವನ್ನು ನಾಚಿಕೆಗೆಟ್ಟ ಸರ್ಕಾರ ಮಕ್ಕಳಿಂದಲೇ ವಸೂಲಿ ಮಾಡಲು ಹೊರಟಿದೆ ಎಂದು ದೂರಿದ್ದಾರೆ.

    ಗ್ಯಾರಂಟಿ ಕೊಟ್ಟು ಬಡವರ ಉದ್ಧಾರ ಮಾಡುತ್ತಿದ್ದೇವೆ ಎಂದು ಬೀಗುವ ಸರ್ಕಾರಕ್ಕೆ, ಅದೇ ಬಡಮಕ್ಕಳಿಗೆ 50 ರೂ. ಖರ್ಚು ಮಾಡಲು ಗತಿ ಇಲ್ಲವೇ? ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts