More

    ಜು.20ರೊಳಗೆ ದ್ವಿತೀಯ ಪಿಯು ಫಲಿತಾಂಶ ಬಿಡುಗಡೆಗೆ ನಿರ್ಧಾರ: ಎಸ್ಸೆಸ್ಸೆಲ್ಸಿ-ಪಿಯು ಅಂಕ ಪರಿಶೀಲನೆಗೆ ಅವಕಾಶ

    ಬೆಂಗಳೂರು: ದ್ವಿತೀಯ ಪಿಯು ಫಲಿತಾಂಶವನ್ನು ಜು.20ರೊಳಗೆ ಬಿಡುಗಡೆ ಮಾಡಲು ಪದವಿ ಪೂರ್ವ ಶಿಕ್ಷಣ ಇಲಾಖೆಯು ನಿರ್ಧರಿಸಿದ್ದು, ಎಸ್ಸೆಸ್ಸೆಲ್ಸಿ ಮತ್ತು ಪ್ರಥಮ ಪಿಯುಸಿ ಅಂಕಗಳನ್ನು ಪರಿಶೀಲಿಸಿಕೊಳ್ಳಲು ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಿದೆ.

    ಈ ಬಾರಿ ದ್ವಿತೀಯ ಪಿಯು ಫಲಿತಾಂಶಕ್ಕೆ ಎಸ್ಸೆಸ್ಸೆಲ್ಸಿ ಮತ್ತು ಪ್ರಥಮ ಪಿಯು ಎರಡು ಅಂಕಗಳನ್ನು ಸಮೀಕರಿಸಿ ಆನಂತರ ಫಲಿತಾಂಶ ನಿಗದಿ ಮಾಡುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ತಮ್ಮ ಈ ಎರಡೂ ಫಲಿತಾಂಶಗಳು ಸರಿ ಇವೆಯೇ ಎಂಬುದನ್ನು ಪರಿಶೀಲಿಸಿಕೊಳ್ಳಲು ಪದವಿ ಪೂರ್ವ ಶಿಕ್ಷಣ ಇಲಾಖೆ ಅವಕಾಶ ಕಲ್ಪಿಸಿದೆ.

    ಫಲಿತಾಂಶ ನೀಡುವುದಕ್ಕೂ ಮುನ್ನ ಸಂಬಂಧಿಸಿದ ವಿದ್ಯಾರ್ಥಿಗಳ ಪರಿಶೀಲನೆಗಾಗಿ ಅವರ 10ನೇ ತರಗತಿ ಮತ್ತು ಪ್ರಥಮ ಪಿಯುಸಿ ಫಲಿತಾಂಶವನ್ನು ವಿದ್ಯಾರ್ಥಿಗಳು ಸ್ಟೂಡೆಂಟ್ಸ್ ಅಚೀವ್ಮೆಂಟ್ ಟ್ರಾಕಿಂಗ್ ಸಿಸ್ಟಮ್ (ಎಸ್‌ಎಟಿಎಸ್) ವೆಬ್ ಪೋರ್ಟಲ್‌ನಲ್ಲಿ (https://sts.karnataka.gov.in/SATSPU/#) ಪ್ರಕಟಿಸಿದೆ.

    ವಿದ್ಯಾರ್ಥಿಗಳು ಈ ವೆಬ್ ಪೋರ್ಟಲ್‌ಗೆ ಭೇಟಿ ನೀಡಿ ಅಲ್ಲಿ ಇಲಾಖೆ ನೀಡಿರುವ ತಮ್ಮ ಎಸ್‌ಎಟಿಎಸ್ ಸಂಖ್ಯೆ ಅಥವಾ ಕಾಲೇಜಿನಲ್ಲಿ ನೀಡಿದ್ದ ವಿದ್ಯಾರ್ಥಿ ಸಂಖ್ಯೆ ಅಥವಾ ಪರೀಕ್ಷಾ ನೋಂದಣಿ ಸಂಖ್ಯೆ ಈ ಮೂರಲ್ಲಿ ಯಾವುದಾದರೂ ಒಂದು ಸಂಖ್ಯೆ ನಮೂದಿಸಿ ಎಸ್ಸೆಸ್ಸೆಲ್ಸಿ ಮತ್ತು ಪ್ರಥಮ ಪಿಯುಸಿ ಫಲಿತಾಂಶವನ್ನು ಪ್ರತ್ಯೇಕವಾಗಿ ಪರಿಶೀಲಿಸಿಕೊಳ್ಳಬಹುದು.

    ಫಲಿತಾಂಶದಲ್ಲಿ ಏನಾದರೂ ವ್ಯತ್ಯಾಸಗಳಿದ್ದರೆ ತಮ್ಮ ಶಾಲೆ ಅಥವಾ ಕಾಲೇಜಿನ ಪ್ರಾಂಶುಪಾಲರನ್ನು ಜು.12ರ ಒಳಗೆ ಸಂಪರ್ಕಿಸಿ ಮಾಹಿತಿ ನೀಡಬೇಕು. ಪ್ರಾಂಶುಪಾಲರು ಅದನ್ನು ಸರಿಪಡಿಸಿ ಇಲಾಖೆಗೆ ಮಾಹಿತಿ ನೀಡಬೇಕು ಎಂದು ಇಲಾಖೆ ನಿರ್ದೇಶಕರಾದ ಸ್ನೇಹಲ್ ತಿಳಿಸಿದ್ದಾರೆ.

    ನಡು ರಸ್ತೆಯಲ್ಲೇ ಮಹಿಳೆಯ ಸೀರೆ ಎಳೆದ ದುರುಳರು: ನಾಮಪತ್ರ ಸಲ್ಲಿಸುವಾಗ ನಡೆದ ದುಷ್ಕೃತ್ಯ

    ಕರ್ನಾಟಕದ ‘ಸಿಂಗಂ’ ಕೆ. ಅಣ್ಣಾಮಲೈ ಈಗ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ

    ಜನ ಕೇಳುವ ಪ್ರಶ್ನೆಗೆ ಉತ್ತರಿಸಲು ಇರಿಸುಮುರಿಸು: ನೋವಿನಿಂದಲೇ ಮಹಿಳಾ ಎಸ್​ಐ ಆತ್ಮಹತ್ಯೆ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts