More

    ಎಸ್​ಎಸ್​​ಎಲ್​​ಸಿ ಫಲಿತಾಂಶ ಪ್ರಕಟಣಾ ದಿನಾಂಕ ನಿಗದಿ

    ಬೆಂಗಳೂರು: 2023ನೇ ಸಾಲಿನ ಎಸ್​ಎಸ್​​ಎಲ್​ಸಿ ಪರೀಕ್ಷಾ ಫಲಿತಾಂಶವು ಮೇ 11 ಅಥವಾ 12ರಂದು ಪ್ರಕಟವಾಗುವ ಸಾಧ್ಯತೆಗಳಿವೆ ಎಂದು ಶಾಲಾ ಪರೀಕ್ಷಾ ಮತ್ತು ಮೌಲ್ಯನಿರ್ಣಯ ಮಂಡಳಿ ಮೂಲಗಳು ತಿಳಿಸಿವೆ.

    ಈ ಮೂಲಕ ರಾಜ್ಯದ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾಗುವ ಮುನ್ನವೇ ಎಸ್​ಎಸ್​​ಎಲ್​ಸಿ ಫಲಿತಾಂಶ ಪ್ರಕಟವಾಗುವ ಸಾಧ್ಯತೆಗಳಿವೆ. ಮೌಲ್ಯಮಾಪನ ಕಾರ್ಯ ಸಂಪೂರ್ಣ ಮುಗಿದಿದ್ದು, ಮತ್ತೊಮ್ಮೆ ಉತ್ತರ ಪತ್ರಿಕೆಗಳ ಪರಿಶೀಲನೆ ನಡೆಯುತ್ತಿದೆ.

    ಇದನ್ನೂ ಓದಿ: ಮಕ್ಕಳ ಪರೀಕ್ಷೆ ಬಗ್ಗೆ ಮೋದಿಗೆ ಕಾಳಜಿ, ಅವರ ಸೂಚನೆಯಂತೆ ರೋಡ್ ಶೋನಲ್ಲಿ‌ ಬದಲಾವಣೆ: ಶೋಭಾ ಕರಂದ್ಲಾಜೆ

    ಈ ಬಾರಿ 8.42 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು. ಮಾ.31ರಿಂದ ಏ.15ರವರೆಗೆ 3,305 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆದಿದ್ದವು. ಏ.24ರಿಂದ ಮೌಲ್ಯಮಾಪನ ನಡೆದಿದ್ದು, 63 ಸಾವಿರ ಶಿಕ್ಷಕರು ಮೌಲ್ಯಮಾಪನ ಕಾರ್ಯಕ್ಕೆ ನಿಯೋಜಿಸಲಾಗಿತ್ತು. ಇದೀಗ ಸಂಪೂರ್ಣ ಮೌಲ್ಯಮಾಪನ ಪೂರ್ಣಗೊಂಡಿದೆ. ಮಂಡಳಿಯಲ್ಲಿ ಕೆಲವು ತಾಂತ್ರಿಕ ಕಾರ್ಯಗಳು ನಡೆಯುತ್ತಿವೆ. ಬಳಿಕ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ತಿಳಿದು ಬಂದಿದೆ.

    ರೇಣುಕಾಚಾರ್ಯ ಅವರು ಯಡಿಯೂರಪ್ಪನವರ ಬಾಲ ಹಿಡಿದುಕೊಂಡು ಬೆಳೆದವರು: ಡಿಕೆಶಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts