More

    ಇಂದು ಬೆಳಗ್ಗೆ 11 ಗಂಟೆಗೆ ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟ; ರಿಸಲ್ಟ್ ನೋಡೋದು ಹೇಗೆ?

    ಬೆಂಗಳೂರು: ಇಂದು ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾಗಲಿದ್ದು ವಿದ್ಯಾರ್ಥಿಗಳ ನಿರೀಕ್ಷೆ ಫಲಕಾಣುವ ದಿನವಾಗಿದೆ. ಮೇ 10ರಂದು ರಾಜ್ಯದಲ್ಲಿ ಕರ್ನಾಟಕ ವಿಧಾನಸಭಾ ಚುನಾವಣೆ ನಡೆಯಲಿದ್ದು ಎರಡು ದಿನ ಮೊದಲೇ SSLC ಫಲಿತಾಂಶ ಘೋಷಣೆಯಾಗಲಿದೆ.

    ಇಂದು ಬೆಳಗ್ಗೆ 10 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಲ್ಲಿ ಸುದ್ದಿಗೋಷ್ಟಿ ನಡೆಯಲಿದ್ದು ಬೆಳಗ್ಗೆ 11 ಗಂಟೆಗೆ ಫಲಿತಾಂಶ ವೆಬ್​ಸೈಟ್​ನಲ್ಲಿ ಪ್ರಕಟಗೊಳ್ಳಲಿದೆ. ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಿಸಲು ಸಕಲ ಸಿದ್ಧತೆ ನಡೆಸಿದ್ದು ಅಂತು ಚುನಾವಣೆಗೂ ಮುನ್ನವೇ ಫಲಿತಾಂಧ ಪ್ರಕಟಿಸಲಿದೆ.

    SSLC ಪರೀಕ್ಷೆಗಳನ್ನು 2023 ಮಾರ್ಚ್ 31 ರಿಂದ ಏಪ್ರಿಲ್ 15ರವರೆಗೆ ಕೈಗೊಳ್ಳಲಾಗಿದ್ದು ಒಟ್ಟು ರಾಜ್ಯದ 15,498 ಪ್ರೌಢಶಾಲೆಗಳ 8.42 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿಯಾಗಿದ್ದರು. ರಾಜ್ಯಾದ್ಯಂತ ಒಟ್ಟು 3,305 ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆದಿದ್ದವು. ಬಂದ ಉತ್ತರ ಪತ್ರಿಕೆಗಳನ್ನು ತಿದ್ದಲು 63 ಸಾವಿರ ಶಿಕ್ಷಕರು ಮೌಲ್ಯಮಾಪನ ಕಾರ್ಯದಲ್ಲಿ ಭಾಗವಹಿಸಿದ್ದರು.

    ಫಲಿತಾಂಶ ನೋಡೋದು ಹೇಗೆ? 

    ಮೊದಲಿಗೆ ನೀವು ಮಾಡಬೇಕಾದದ್ದು karresults.nic.in ವೆಬ್​ಸೈಟ್​ ತೆರೆಯಬೇಕು. ಅಲ್ಲಿ ಎಸ್​ಎಸ್​ಎಲ್​ಸಿ ಪರೀಕ್ಷೆಯ ಫಲಿತಾಂಶ ನೋಡಲು ಒಂದು ಕೊಂಡಿಯನ್ನು ಇರಿಸಿರುತ್ತಾರೆ. ಅದನ್ನು ಕ್ಲಿಕ್​ ಮಾಡಿದಾಗ ಇನ್ನೊಂದು ಪುಟ ತೆರೆದುಕೊಳ್ಳುತ್ತದೆ. ಅಲ್ಲಿ ವಿದ್ಯಾರ್ಥಿಯ ನೋಂದಣಿ ಸಂಖ್ಯೆ ಹಾಗೂ ಇತರ ಸಂಬಂಧಿತ ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿ ಸಬ್​ಮಿಟ್​ ಮಾಡಿದರೆ ಫಲಿತಾಂಶ ಕಾಣಿಸಿಕೊಳ್ಳುತ್ತದೆ.

     

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts