More

    ಎಸ್​ಎಸ್​ಎಲ್​ಸಿ ಫಲಿತಾಂಶ ಏನೇ ಬಂದರೂ ಮಕ್ಕಳನ್ನು ನೋಯಿಸದಿರಿ; ಸುರೇಶ್ ಕುಮಾರ್

    ಬೆಂಗಳೂರು: 2019-20ನೇ ಸಾಲಿನ ಎಸ್​ಎಸ್ಎಲ್​ಸಿ ಪರೀಕ್ಷೆ ಫಲಿತಾಂಶ ಇಂದು(ಸೋಮವಾರ) ಮಧ್ಯಾಹ್ನ 3.30ರ ವೇಳೆಗೆ ಹೊರಬೀಳಲಿದ್ದು, ಫಲಿತಾಂಶ ಏನೇ ಬಂದರೂ ವಿದ್ಯಾರ್ಥಿಗಳು ಮತ್ತು ಪಾಲಕರು ಪಾಸಿಟಿವ್​ ಆಗಿ ಇರಬೇಕು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್​ ಕುಮಾರ್​ ಮನವಿ ಮಾಡಿದ್ದಾರೆ.

    ಕರೊನಾ ಸಂಕಷ್ಟ ವಾತಾವರಣದಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆದಿರುವುದೇ ದೊಡ್ಡ ಸಾಧನೆ ಎಂಬುದು ಪಾಲಕರಿಗೆ ತಿಳಿದಿರಲಿ. ತಮ್ಮ ಮಕ್ಕಳ ಫಲಿತಾಂಶ ಎಷ್ಟೇ ಆಗಿರಲಿ ಅವರಿಗೆ ಹೇಳುವಾಗ ನಿಧಾನವಾಗಿ ಪ್ರೀತಿಯಿಂದ ತಿಳಿಸಿ. ಗಳಿಸಿದ ಅಂಕಗಳಿಗೆ ತೃಪ್ತಿ ಪಡುವಂತೆ ಮನವೊಲಿಸಿ ಅವರಲ್ಲಿ ಆತ್ಮವಿಶ್ವಾಸ ತುಂಬಿ. ಅವರನ್ನು ಬೇರೆಯವರೊಂದಿಗೆ ಹೋಲಿಕೆ ಮಾಡಿ ನೋವಾಗುವಂತೆ ಮಾಡಬೇಡಿ ಎಂದು ಸಚಿವರು ಸಲಹೆ ನೀಡಿದ್ದಾರೆ.

    ಇದನ್ನೂ ಓದಿರಿ ಅಂಧತ್ವಕ್ಕೆ ಸವಾಲು ಹಾಕಿ ಬಾಳು ಬೆಳಗಿಸಿಕೊಂಡ ಮೇಘನಾ; ಯುಪಿಎಸ್​ಸಿಯಲ್ಲಿ 465ನೇ ಸ್ಥಾನ

    ಮಕ್ಕಳು ಯಾವ ಕೋರ್ಸ್​ ಆಯ್ಕೆ ಮಾಡುತ್ತಾರೋ ಅದಕ್ಕೆ ಸೇರಿಸಿ ಮುಂದೆ ಚೆನ್ನಾಗಿ ಓದಲು ಹೇಳಿ. ಒಂದು ವೇಳೆ ಅವರ ನಿರೀಕ್ಷೆಗಿಂತ ಯಾವುದಾದರೂ ವಿಷಯದಲ್ಲಿ ಕಡಿಮೆ ಅಂಕ ಬಂದಲ್ಲಿ ಮರು ಮೌಲ್ಯಮಾಪನ ಮತ್ತು ಮರು ಎಣಿಕೆಗೆ ಅವಕಾಶವಿರುತ್ತದೆ. ಯಾವುದೇ ಕಾರಣಕ್ಕೂ ಆತ್ಮವಿಶ್ವಾಸ ಕಳೆದುಕೊಳ್ಳಬೇಡಿ. ಮಗು ಮನೆಯ ಬೆಳಕು. ಆ ಬೆಳಕು ಸದಾ ಪ್ರಜ್ವಲಿಸಲಿ ಎಂಬುದೇ ನಮ್ಮೆಲ್ಲರ ಆಶಯ ಎಂದು ಸಚಿವ ಸುರೇಶ್​ಕುಮಾರ್​ ಫೇಸ್​ಬುಕ್​ನಲ್ಲಿ ತಿಳಿಸಿದ್ದಾರೆ.

    ಆತ್ಮೀಯ ಪೋಷಕರೇ . ಇಂದು, ದಿನಾಂಕ 10-08-2020 ಮಧ್ಯಾಹ್ನ 3.30ರ ಹೊತ್ತಿಗೆ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಫಲಿತಾಂಶ…

    Posted by Suresh Kumar S on Sunday, August 9, 2020

    ಕರೊನಾ ಆತಂಕದ ನಡುವೆಯೂ ಈ ಬಾರಿ ಸುಮಾರು 8.5 ಲಕ್ಷ ವಿದ್ಯಾರ್ಥಿಗಳು ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆದಿದ್ದರು.

    ಸ್ಪರ್ಧಾತ್ಮಕ ಪರೀಕ್ಷೆ ಬರೆಯಲು ಗ್ರಾಮೀಣರಿಗೆ ಉಚಿತ ಮಾರ್ಗದರ್ಶನ: ಯುಪಿಎಸ್‍ಸಿ ಸಾಧಕ ಪ್ರಫುಲ್ ದೇಸಾಯಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts