ಬೆಂಗಳೂರು: 2023-24ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶವು ನಾಳೆ (ಮೇ 09) ಬಿಡುಗಡೆಯಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ತಿಳಿಸಿದೆ.
ಈ ಕುರಿತು ಪ್ರಕಟಣೆ ಹೊರಡಿಸಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯು, ಮಾರ್ಚ್ 2024ರ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆ-1ರ ಫಲಿತಾಂಶ ಮೇ 09ರಂದು ಬೆಳಗ್ಗೆ 10:30ಕ್ಕೆ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದೆ.
ಈ ಬಾರಿ ಎಸ್ ಎಸ್ ಎಲ್ಸಿ ಪರೀಕ್ಷೆಗೆ 8.69 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರು. ಇದರಲ್ಲಿ 4,41,910 ವಿದ್ಯಾರ್ಥಿ ಮತ್ತು 4,28,058 ವಿದ್ಯಾರ್ಥಿನಿಯರು ಇದ್ದಾರೆ. ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶಕ್ಕಾಗಿ ಕಾಯುತ್ತಿರುವ ವಿದ್ಯಾರ್ಥಿಗಳು ಹಾಗೂ ಪೋಷಕರು ನಾಳೆ (ಮೇ 09) karresults.nic.in ನಲ್ಲಿ ಫಲಿತಾಂಶವನ್ನು ನೋಡಬಹುದಾಗಿದೆ.