More

    ಪಾಲಕರು ಬುದ್ಧಿ ಹೇಳಿದಕ್ಕೆ ಮನನೊಂದು ನೇಣಿಗೆ ಶರಣಾದ ಎಸ್​ಎಸ್​ಎಲ್​ಸಿ ವಿದ್ಯಾರ್ಥಿ

    ಬೆಳಗಾವಿ: ಲಾಕ್​ಡೌನ್​ ಅವಧಿಯಲ್ಲಿ ಸಮಯ ವ್ಯರ್ಥ ಮಾಡದೇ ಪರೀಕ್ಷೆಗೆ ಓದುವಂತೆ ಪಾಲಕರು ಬುದ್ಧಿ
    ಹೇಳಿದ್ದಕ್ಕೆ ಎಸ್ಎಸ್ಎಲ್​​ಸಿ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

    ಸದಾಶಿವ ನಗರದ ಸೂರಜ್ ಕಳ್ಳಿಗುದ್ದಿ (16) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ.

    ಕರೊನಾ ಸೋಂಕು ಹಿನ್ನೆಲೆಯಲ್ಲಿ ಲಾಕ್​ಡೌನ್​ ಘೋಷಿಸಿದ ನಂತರ ಶಿಕ್ಷಣ ಇಲಾಖೆ ಎಸ್​ಎಸ್​ಎಲ್​​ಸಿ ಪರೀಕ್ಷೆ ಮುಂದೂಡಿತ್ತು. ಮನೆಯಲ್ಲೇ ಇದ್ದ ವಿದ್ಯಾರ್ಥಿ ವಿಡಿಯೋ ಗೇಮ್​​ನಲ್ಲಿ ತಲ್ಲೀನನಾಗಿದ್ದ. ಅಲ್ಲದೆ ಬಡಾವಣೆಯ ಗೆಳೆಯರೊಂದಿಗೆ ಕಾಲ ಕಳೆಯುತ್ತಿದ್ದ. ಇದನ್ನು ಗಮನಿಸಿದ ಪಾಲಕರು ಸಮಯ ವ್ಯರ್ಥ ಮಾಡದೆ ಈ ಅವಧಿಯಲ್ಲೆ ಹೆಚ್ಚಿನ ಅಧ್ಯಯನ ಮಾಡಿ ಪರೀಕ್ಷೆಗೆ ಸಿದ್ಧವಾಗುವಂತೆ ಸೂಚಿಸಿದ್ದರು.

    ಇದರಿಂದ ಮನನೊಂದ ಸೂರಜ್​ ಶನಿವಾರ ರಾತ್ರಿ ಮನೆಯ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

    ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.

    ದಿನನಿತ್ಯ ವಸ್ತುಗಳ ಬಗ್ಗೆ ಆತಂಕ ಬೇಡ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts