SSLC ವಿದ್ಯಾರ್ಥಿನಿ ಹತ್ಯೆ ಆರೋಪಿ ಅರೆಸ್ಟ್​; ರುಂಡಕ್ಕಾಗಿ ಮುಂದುವರೆದ ಶೋಧ

madikeri Murder case
Published on

ಕೊಡಗು: ಕೊಡಗು ಜಿಲ್ಲೆ ಸೋಮವಾರಪೇಟೆ ತಾಲ್ಲೂಕಿನ ಸೂರ್ಲಬ್ಬಿಯ ಕುಂಬಾರಗಡಿಗೆಯಲ್ಲಿ ನಡೆದಿದ್ದ ಎಸ್​ಎಸ್​ಎಲ್​ಸಿ ವಿದ್ಯಾರ್ಥಿನಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿ ಪ್ರಕಾಶನನ್ನು ಬಂಧಿಸಿದ್ದಾರೆ.

ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶ (ಮೇ 09) ಪ್ರಕಟವಾದ ದಿನದಂದು ಆರೋಪಿ ವಿದ್ಯಾರ್ಥನಿಯ ಕೊಲೆ ಮಾಡಿ ರುಂಡದ ಸಮೇತ ಪರಾರಿಯಾಗಿದ್ದ. ಘಟನೆ ಸಂಬಂಧ ಪೊಲೀಸರು ಆರೋಪಿ ಪತ್ತೆಗಾಗಿ ವಿಶೇಷ ತಂಡಗಳನ್ನು ರಚಿಸಿ ಕಾರ್ಯಾಚರಣೆ ನಡೆಸಿದ್ದರು. ಆರೋಪಿ ಬಂಧಿಯಾದರೂ ಪತ್ತೆಯಾಗದ ವಿದ್ಯಾರ್ಥಿನಿ ತಲೆ. ವಿದ್ಯಾರ್ಥಿನಿ ತಲೆಗಾಗಿ ಪೊಲೀಸರು ಶೋಧಕಾರ್ಯ ಮುಂದುವರೆಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಕೆ. ರಾಮರಾಜನ್, ಆರೋಪಿ ಪತ್ತೆಗಾಗಿ ವಿಶೇಷ ತಂಡಗಳನ್ನು ರಚಿಸಲಾಗಿತ್ತು. ಸೋಮವಾರಪೇಟೆ ತಾಲೂಕಿನ ಗ್ರಾಮವೊಂದರಲ್ಲಿ ಅಡಗಿದ್ದ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿಯನ್ನು ಠಾಣೆಗೆ ಕರೆದುಕೊಂಡು ಹೋಗಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net