ವಾರ ಮೊದಲೇ ಎಸ್​ಎಸ್​ಎಲ್​ಸಿ ಪರೀಕ್ಷಾರ್ಥಿಗಳ ಆರೋಗ್ಯ ತಪಾಸಣೆ

suresh kumar
Published on

ಬೆಂಗಳೂರು: ಕೋವಿಡ್​-19 ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಸುರಕ್ಷಿತವಾಗಿ ಮತ್ತು ಸುಗಮವಾಗಿ ಎಸ್​ಎಸ್​ಎಲ್​ಸಿ ಪರೀಕ್ಷೆಯನ್ನು ಆಯೋಜಿಸಲು ರಾಜ್ಯ ಶಿಕ್ಷಣಾ ಇಲಾಖೆ ಕ್ರಮ ಕೈಗೊಳ್ಳುತ್ತಿದೆ.

ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ ಜೂ.25ರಿಂದ ಆರಂಭವಾಗಲಿರುವ ಎಸ್​ಎಸ್​ಎಲ್​ಸಿ ಪರೀಕ್ಷೆಗೂ ಒಂದು ವಾರ ಮೊದಲು ಪರೀಕ್ಷಾರ್ಥಿಗಳ ಎಲ್ಲರ ಆರೋಗ್ಯ ತಪಾಸಣೆ ಮಾಡಲು ನಿರ್ಧರಿಸಿದೆ.

ಆರೋಗ್ಯ ಇಲಾಖೆಯ ಸಹಕಾರದಲ್ಲಿ ಈ ಕ್ರಮ ಕೈಗೊಳ್ಳಲಾಗುತ್ತಿದೆ. ಸ್ಥಳೀಯ ಆರೋಗ್ಯ ಅಧಿಕಾರಿಗಳು ಮಕ್ಕಳು ಇರುವಲ್ಲಿಯೇ ಹೋಗಿ ಆರೋಗ್ಯ ತಪಾಸಣೆ ಮಾಡಲಿದ್ದಾರೆ. ಈ ರೀತಿ ಮಾಡುವುದರಿಂದ, ತಮ್ಮ ಸುರಕ್ಷತೆಗಾಗಿ ಸರ್ಕಾರ ಕೈಗೊಳ್ಳುತ್ತಿರುವ ಕ್ರಮಗಳ ಬಗ್ಗೆ ಮಕ್ಕಳಲ್ಲಿ ಆತಂಕ ದೂರಾಗಿ ಆತ್ಮವಿಶ್ವಾಸ ಮೂಡುತ್ತದೆ ಎಂದು ಶಿಕ್ಷಣ ಸಚಿವ ಎಸ್​. ಸುರೇಶ್​ಕುಮಾರ್​ ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net