More

    SSLC ವಿದ್ಯಾರ್ಥಿಗಳಿಗೆ ಈ ಬಾರಿಯೂ ಸಿಗಲಿದೆ 10% ಗ್ರೇಸ್ ಮಾರ್ಕ್ಸ್: ಯಾವೆಲ್ಲ ವಿಷಯಕ್ಕೆ ಸಿಗಲಿದೆ?

    ಬೆಂಗಳೂರು: ಶಿಕ್ಷಣ ಇಲಾಖೆ ಎಸ್ಎಸ್ಎಲ್​​ಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಿದೆ. ಕಳೆದ ಎರಡು ವರುಷದಿಂದ ಕೊರೊನಾ ಕಾರಣಕ್ಕೆ ಶೇ.10ರಷ್ಟು ಗ್ರೇಸ್ ಮಾರ್ಕ್ಸ್ ನೀಡಲಾಗಿತ್ತು. ಆದರೆ ಈ ಬಾರಿಯೂ ಕೂಡಾ ವಿದ್ಯಾರ್ಥಿಗಳಿಕೆ 10% ಗ್ರೇಸ್ ಮಾರ್ಕ್ಸ್ ನೀಡಲಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.

    ಈ ಕುರಿತು ಮಾಹಿತಿ ನೀಡಿರುವ ಎಸ್ಎಸ್ ಎಲ್ ಸಿ ಬೊರ್ಡ್ ನಿರ್ದೇಶಕ ರಾಮಚಂದ್ರ, “ಕಳೆದ ಎರಡು ವರ್ಷಗಳಲ್ಲಿ 8, 9ನೇ ತರಗತಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯದೆ ತೇರ್ಗಡೆ ಹೊಂದಿದ ಕಾರಣ ಈ ವರ್ಷವೂ ಶೇ.10ರಷ್ಟು ಗ್ರೇಸ್ ಮಾರ್ಕ್ಸ್ ನೀಡಲು ಬೋರ್ಡ್ ನಿರ್ಧಾರ ತೆಗೆದುಕೊಂಡಿದೆ. ಮೂರು ವಿಷಯಗಳಿಗೆ ಮಾತ್ರ ಗ್ರೇಸ್ ಮಾರ್ಕ್‌ ಅಂಕ ನೀಡಲಾಗುತ್ತಿದೆ. ಭಾಷಾ ಹಾಗೂ ಕೋರ್ ವಿಷಯಗಳಿಗೆ ಮಾತ್ರ ಗ್ರೇಸ್ ಅಂಕ ಕೊಡಲಾಗುತ್ತದೆ. ತೇರ್ಗಡೆ ಕಡಿಮೆ ಅಂಕ ಪಡೆಯುವ ವಿದ್ಯಾರ್ಥಿಗಳಿಗೆ ಮಾತ್ರ ಇದು ಅನ್ವಯವಾಗಲಿದೆ” ಎಂದಿದ್ದಾರೆ.

    ಇದನ್ನೂ ಓದಿ:  ಏ.1ರಿಂದ 2,000 ರೂ. ಕ್ಕಿಂತ ಹೆಚ್ಚಿನ ಯುಪಿಐ ವಹಿವಾಟುಗಳಿಗೆ 1.1% ವಿನಿಮಯ ಶುಲ್ಕ!
    2022-23ನೇ ಸಾಲಿನ ಎಸ್ಎಸ್ಎಲ್​​ಸಿ ಪರೀಕ್ಷೆ ನಾಳೆ (ಮಾರ್ಚ್ 31 ರಿಂದ) ಪ್ರಾರಂಭವಾಗಲಿದ್ದು, ಏ. 15ರವರೆಗೆ ಪರೀಕ್ಷೆ ನಡೆಯಲಿದೆ. ಈ ಬಾರಿ ಒಟ್ಟು 8.42 ಲಕ್ಷ ವಿದ್ಯಾರ್ಥಿಗಳು ಬರೆಯಲಿದ್ದಾರೆ. ಪರೀಕ್ಷೆಗೆ ಬೇಕಾದ ಎಲ್ಲಾ ಅಗತ್ಯ ಕ್ರಮಗಳನ್ನು ಕೈ ಗೊಳ್ಳಲಾಗಿದೆ ಎಂದು ಎಸ್ಎಸ್ಎಲ್​​ಸಿ ಬೋರ್ಡ್ ನಿರ್ದೇಶಕರಾದ ರಾಮಚಂದ್ರ ತಿಳಿಸಿದ್ದಾರೆ.

    8,42,811 ನೋಂದಾಯಿತ ವಿದ್ಯಾರ್ಥಿಗಳಿಗಾಗಿ ರಾಜ್ಯಾಧ್ಯಂತ ಒಟ್ಟು 3,305 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. ಸರ್ಕಾರಿ ಶಾಲೆಗಳ 3,60,862, ಅನುದಾನಿತ ಶಾಲೆಗಳ 2,20,831 ಹಾಗೂ ಅನುದಾನ ರಹಿತ ಶಾಲೆಗಳ 2,61,811 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಹೇಳಿದೆ.

    ನಾನು ಉರ್ಫಿಯಂತೆ ಧೈರ್ಯಶಾಲಿಯಲ್ಲ: ಕರೀನಾ ಕಪೂರ್‌

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts