More

    ಎಸ್​ಎಸ್​ಎಲ್​ಸಿ ಪೂರಕ ಪರೀಕ್ಷೆ: ಹಾಜರಾತಿ ಕೊರತೆ ವಿದ್ಯಾರ್ಥಿಗಳ ನೋಂದಣಿಗೆ ಕಡೇ ದಿನ ಪ್ರಕಟ

    ಬೆಂಗಳೂರು: ಹಾಜರಾತಿ ಕೊರತೆಯಿಂದ 2022-23ನೇ ಸಾಲಿನ ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆ(ಮಾರ್ಚ್, 2023)ಗೆ ಹಾಜರಾಗಲು ಅವಕಾಶ ಸಿಗದ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಗೆ ಹಾಜರಾಗಲು ಅವಕಾಶ ಕಲ್ಪಿಸಿದ್ದು, ಮೇ 26ರೊಳಗೆ ನೋಂದಣಿ ಮಾಡಿಕೊಳ್ಳುವಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ ಸೂಚನೆ ನೀಡಿದೆ.

    ಶೇ. 75 ಹಾಜರಾತಿ ಇರದ 26,900 ವಿದ್ಯಾರ್ಥಿಗಳನ್ನು ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆಗೆ ಹಾಜರಾಗಲು ಮೌಲ್ಯ ನಿರ್ಣಯ ಮಂಡಳಿ ಅವಕಾಶ ನೀಡಿರಲಿಲ್ಲ. ಆದರೆ ಈ ವಿದ್ಯಾರ್ಥಿಗಳು ಮುಖ್ಯ ಪರೀಕ್ಷೆಗೆ ಹಾಜರಾಗಲು ನೋಂದಾಯಿಸಿ ಪರೀಕ್ಷಾ ಶುಲ್ಕ ಕಟ್ಟಿದ್ದರು. ಈ ವಿದ್ಯಾರ್ಥಿಗಳಿಗೆ ಜೂನ್‌ನಲ್ಲಿ ನಡೆಯುವ ಪೂರಕ ಪರೀಕ್ಷೆಗೆ ಖಾಸಗಿ ಅಭ್ಯರ್ಥಿಗಳಾಗಿ ಹಾಜರಾಗುವ ಅವಕಾಶ ಕಲ್ಪಿಸಿದೆ.

    ಇದನ್ನೂ ಓದಿ: ಈ ಸಲ ನಡೆಯಲ್ವಾ ಟಿಪ್ಪು ಜಯಂತಿ?: ಕುತೂಹಲ ಕೆರಳಿಸಿದೆ ಜಯಂತಿಗಳ ಪಟ್ಟಿ

    ಮೇ 26ರವರೆಗೆ ನೋಂದಣಿಗೆ ಅವಕಾಶವಿದ್ದು ನೋಂದಣಿ ಶುಲ್ಕವನ್ನು ನೆಫ್ಟ್​ ಚಲನ್‌ನಲ್ಲಿ ಭರ್ತಿಮಾಡಿ ರಾಷ್ಟ್ರೀಕೃತ ಬ್ಯಾಂಕ್‌ನಲ್ಲಿ ಜಮೆ ಮಾಡಲು ಮೇ 27ರಿಂದ ಮೇ 29ರವರೆಗೆ ಅವಕಾಶ ಕಲ್ಪಿಸಲಾಗಿದೆ. ಮಂಡಲಿಯ ಜಾಲತಾಣದ ಶಾಲಾ ಲಾಗಿನ್‌ನಲ್ಲಿ ಅರ್ಹ ವಿದ್ಯಾರ್ಥಿಗಳನ್ನು ನಿಯಮಾನುಸಾರ ನೋಂದಾಯಿಸುವುದು ಶಾಲಾ ಮುಖ್ಯ ಶಿಕ್ಷಕರ ಜವಾಬ್ದಾರಿಯಾಗಿದೆ ಎಂದು ಮಂಡಲಿ ತಿಳಿಸಿದೆ.

    22 ವರ್ಷ ತನ್ನೊಳಗಿದ್ದ ಹೃದಯವನ್ನು 16 ವರ್ಷಗಳ ಬಳಿಕ ಮ್ಯೂಸಿಯಮ್​ನಲ್ಲಿ ಕಣ್ಣೆದುರೇ ಕಂಡಳು!

    ಹಾಲಿನ ಮತ್ತೊಂದು ಬ್ರ್ಯಾಂಡ್​ಗೂ ಅಮುಲ್ ಆತಂಕ; ಎಲ್ಲಿ, ಯಾವುದು?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts