More

    ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ: ಈ ಬಾರಿಯೂ ಬಾಲಕಿಯರೇ ಮೇಲುಗೈ

    ಬೆಂಗಳೂರು: 2019-20ನೇ ಸಾಲಿನ ಎಸ್ಸೆಸ್ಸೆಲ್ಸಿ​ ಪೂರಕ ಪರೀಕ್ಷೆ ಫಲಿತಾಂಶ ಶುಕ್ರವಾರ ಪ್ರಕಟವಾಗಿದ್ದು, ಈ ಬಾರಿಯೂ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ ಹಾಗೂ ಗ್ರಾಮೀಣ ಮಕ್ಕಳೇ ಹೆಚ್ಚಿನ ಸಂಖ್ಯೆಯಲ್ಲಿ ಉತ್ತೀರ್ಣರಾಗಿದ್ದಾರೆ.

    ಕಳೆದ ವರ್ಷದ ಪೂರಕ ಪರೀಕ್ಷೆಯಲ್ಲಿ ಶೇ.42.47 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದರು. ಈ ಬಾರಿ ಶೇ.8.81ರಷ್ಟು ಹೆಚ್ಚಿನ ಫಲಿತಾಂಶ ದಾಖಲಾಗುವ ಮೂಲಕ ಒಟ್ಟು ಶೇ.51.28 ಅಭ್ಯರ್ಥಿಗಳು ಪಾಸ್​ ಆಗಿದ್ದಾರೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ. ಫಲಿತಾಂಶವನ್ನು http://kseeb.kar.nic.in ಮತ್ತು http://karresults.nic.in ವೆಬ್​ಸೈಟ್​ನಲ್ಲಿ ನೋಡಬಹುದು. ವಿದ್ಯಾರ್ಥಿಗಳ ಮೊಬೈಲ್ ಸಂಖ್ಯೆಗೆ ಫಲಿತಾಂಶಗಳನ್ನು ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯಿಂದ ನೇರವಾಗಿ ತಲುಪಿಸುವ ವ್ಯವಸ್ಥೆ ಮಾಡಲಾಗಿದೆ. ಶುಕ್ರವಾರವೇ ಆಯಾ ಶಾಲೆಗಳಲ್ಲಿ ಫಲಿತಾಂಶ ಪ್ರಕಟವಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ: ಈ ಬಾರಿಯೂ ಬಾಲಕಿಯರೇ ಮೇಲುಗೈಸೆಪ್ಟೆಂಬರ್​ನಲ್ಲಿ ನಡೆದಿದ್ದ ಎಸ್ಸೆಸ್ಸೆಲ್ಸಿ​ ಪೂರಕ ಪರೀಕ್ಷೆಗೆ ಒಟ್ಟು 2,13,955 ವಿದ್ಯಾರ್ಥಿಗಳು ಹಾಜರಾಗಿದ್ದರು. ಅ.7 ರಿಂದ 13ರವರೆಗೆ ನಾಲ್ಕು ಕಂದಾಯ ವಿಭಾಗಗಳ 14 ಶೈಕ್ಷಣಿಕ ಜಿಲ್ಲೆಗಳ 84 ಕೇಂದ್ರಗಳಲ್ಲಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಪ್ರಕ್ರಿಯೆ ನಡೆದಿತ್ತು. 2,13,955 ವಿದ್ಯಾರ್ಥಿಗಳ ಪೈಕಿ 1,09,719 ಮಂದಿ ಉತ್ತೀರ್ಣರಾಗಿದ್ದಾರೆ.

    ಸರ್ಕಾರಿ ಶಾಲೆಗಳಿಗೆ ಶೇ. 50.19, ಅನುದಾನಿತ ಶಾಲೆಗಳಿಗೆ ಶೇ. 53.13 ಮತ್ತು ಅನುದಾನರಹಿತ ಶಾಲೆಗಳಿಗೆ 50.87 ಫಲಿತಾಂಶ ಲಭ್ಯವಾಗಿದೆ. ಮಾಧ್ಯಮವಾರು ಫಲಿತಾಂಶದಲ್ಲಿ ಕನ್ನಡ- ಶೇ. 50.79, ಇಂಗ್ಲಿಷ್-ಶೇ. 49.25, ಉರ್ದು-ಶೇ. 64.88, ಮರಾಠಿ-ಶೇ. 61.84, ತೆಲುಗು-ಶೇ. 58.1, ತಮಿಳು-ಶೇ. 25.45, ಹಿಂದಿ-ಶೇ. 44.71 ಫಲಿತಾಂಶ ಲಭ್ಯವಾಗಿದೆ ಎಂದು ಸುರೇಶ್​ ಕುಮಾರ್​ ತಿಳಿಸಿದ್ದಾರೆ.

    ವಿದ್ಯಾರ್ಥಿಗಳ ಉತ್ತರ ಪತ್ರಿಕೆಗಳ ಛಾಯಾ ಪ್ರತಿ ಹಾಗೂ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಆನ್ ಲೈನ್‌ ನಲ್ಲಿ ಅವಕಾಶ ಕಲ್ಪಿಸಲಾಗಿದೆ. http://kseeb.kar.nic.in ಜಾಲತಾಣದಲ್ಲಿ ಈ ಕುರಿತ ಸುತ್ತೋಲೆ ಮತ್ತು ಅರ್ಜಿ ಸಲ್ಲಿಸುವ ವಿಧಾನಗಳ ವಿವರ ನೀಡಲಾಗಿದೆ. ಸ್ಕ್ಯಾನ್ ಪ್ರತಿಗಾಗಿ ಅರ್ಜಿಸಲ್ಲಿಸಲು ಅ.17ರಿಂದ 21 ರವರೆಗೆ, ಮರು ಎಣಿಕೆಗಾಗಿ ಅ.20ರಿಂದ 28ರ ವರೆಗೆ ಮತ್ತು ಮರುಮೌಲ್ಯಮಾಪನಕ್ಕಾಗಿ ಅ.20ರಿಂದ 29ರ ವರೆಗೆ ಅವಕಾಶವಿದೆ.

    VIDEO| ಜೂ.ಚಿರು ಸ್ವಾಗತಕ್ಕೆ ಸರ್ಜಾ ಫ್ಯಾಮಿಲಿಯಿಂದ ಸ್ಪೆಷಲ್​ ವಿಡಿಯೋ

    ಸಿಗಂದೂರು ಚೌಡೇಶ್ವರಿ ದೇಗುಲದಲ್ಲಿ ಮಾರಾಮಾರಿ; ಭಕ್ತರ ಮೇಲೂ ಹಲ್ಲೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts