More

    58 ಕಡೆ ಎಸ್​ಎಸ್​ಎಲ್​ಸಿ ಪರೀಕ್ಷೆ, ವಿದ್ಯಾರ್ಥಿಗಳಿಗೆ ಸ್ಯಾನಿಟೈಸರ್, ಮಾಸ್ಕ್ ಸೌಲಭ್ಯ

    ಚಿಕ್ಕಮಗಳೂರು: ಕರೊನಾ ಭೀತಿಯಿಂದ ಮುಂದೂಡಲ್ಪಟ್ಟಿದ್ದ ಎಸ್​ಎಸ್​ಎಲ್​ಸಿ ಪರೀಕ್ಷೆ ಜೂ.25ರಿಂದ ಜು.4ರವರೆಗೆ ನಡೆಯಲಿದ್ದು, ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ಶಿಕ್ಷಣ ಇಲಾಖೆ ಸಕಲ ಸಿದ್ಧತೆ ನಡೆಸಿದೆ.

    ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ಹಾಗೂ ಸಾರಿಗೆ ವ್ಯವಸ್ಥೆ ಕಲ್ಪಿಸಲು ವ್ಯವಸ್ಥೆ ಮಾಡಲಾಗಿದೆ. ಕರೊನಾದಿಂದ ಸುರಕ್ಷತೆ ಕಾಯ್ದುಕೊಳ್ಳುವ ಸಲುವಾಗಿ ಎಲ್ಲ 58 ಪರೀಕ್ಷಾ ಕೇಂದ್ರಗಳಲ್ಲಿ ಆರೋಗ್ಯ ತಪಾಸಣೆ ನಡೆಸಲು ಘಟಕಗಳನ್ನು ತೆರೆದು ಆರೋಗ್ಯ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಆಯಾ ಕೇಂದ್ರದ ಪರೀಕ್ಷಾರ್ಥಿಗಳು ಮತ್ತು ಪರೀಕ್ಷಾ ಸಿಬ್ಬಂದಿ ಮತ್ತು ಆರೋಗ್ಯ ಸಹಾಯಕರನ್ನು ಥರ್ಮಲ್ ಸ್ಕ್ರೀನಿಂಗ್ ಮೂಲಕ ತಪಾಸಣೆ ನಡೆಸಲಾಗುವುದು.

    ಸ್ಯಾನಿಟೈಸರ್, ಮಾಸ್ಕ್ ವ್ಯವಸ್ಥೆ: ಪರೀಕ್ಷಾ ಕೇಂದ್ರಕ್ಕೆ ಅಗತ್ಯವಿರುವ ಸ್ಯಾನಿಟೈಸರ್ ಮತ್ತು ಎಲ್ಲ ವಿದ್ಯಾರ್ಥಿಗಳಿಗೆ ಮಾಸ್ಕ್ ವಿತರಿಸಲು ಸಿದ್ಧತೆ ಮಾಡಲಾಗಿದೆ. ಪ್ರತಿ ಕೊಠಡಿಯಲ್ಲಿ 18ರಿಂದ 20 ಪರೀಕ್ಷಾರ್ಥಿಗಳು ಡೆಸ್ಕ್​ಗೆ ಇಬ್ಬರಂತೆ ಕುಳಿತುಕೊಳ್ಳಬೇಕಿದೆ. ಕೊಠಡಿಗಳ ಸುರಕ್ಷತೆ, ಆಸನ ವ್ಯವಸ್ಥೆ ಮತ್ತು ವಿದ್ಯಾರ್ಥಿಗಳು ಪರಸ್ಪರ ಅಂತರ ಕಾಯ್ದುಕೊಳ್ಳಲು ಪಾಲಿಸಬೇಕಾದ ನಿಯಮ ಕುರಿತು ಬಿಇಒಗಳಿಗೆ ನಿರ್ದೇಶನ ನೀಡಲಾಗಿದೆ. ಈಗಾಗಲೇ ತಾಲೂಕು ಮಟ್ಟದಲ್ಲಿ ಬಿಇಒಗಳ ಸಭೆ ನಡೆಸಿ ಎಲ್ಲ ಪ್ರೌಢಶಾಲಾ ಮುಖ್ಯಶಿಕ್ಷಕರಿಗೆ ಮಾರ್ಗದರ್ಶನ ನೀಡುವ ಪ್ರಕ್ರಿಯೆ ನಡೆಯುತ್ತಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts