More

    ಎಸ್ಸೆಸ್ಸೆಲ್ಸಿ ಟಾಪರ್ಸ್‌ಗೆ ಶಿಕ್ಷಣ ಇಲಾಖೆಯಿಂದ ಸನ್ಮಾನ: ವಿದ್ಯಾರ್ಥಿಗಳೊಂದಿಗೆ ಸಂವಾದ

    ಹೂವಿನಹಡಗಲಿ: ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದು ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ರ‌್ಯಾಂಕ್‌ಗಳಿಸಿದ ವಿದ್ಯಾರ್ಥಿಗಳ ಮನೆಗೆ ಬಿಇಓ ಎಸ್.ಎನ್.ಹಳ್ಳಿಗುಡಿ ಗುರುವಾರ ಭೇಟಿ ನೀಡಿ ವಿದ್ಯಾರ್ಥಿಗಳನ್ನು ಸನ್ಮಾನಿಸಿ, ಅವರೊಂದಿಗೆ ಶೈಕ್ಷಣಿಕ ವಿಷಯಗಳ ಕುರಿತು ಚರ್ಚೆ ನಡೆಸಿದರು.


    ಪಟ್ಟಣದ ಎಂ.ಎಂ.ಪಾಟೀಲ್ ಆಂಗ್ಲ ಮಾಧ್ಯಮ ಪ್ರೌಢಶಾಲಾ ವಿದ್ಯಾರ್ಥಿನಿ ಮೇಘನ ತೋಟಿಗೇರಿ 625 ಅಂಕಗಳಿಗೆ 621 (ಶೇ.99) ಅಂಕಗಳನ್ನು ಗಳಿಸುವ ಮೂಲಕ ಜಿಲ್ಲೆಗೆ ಪ್ರಥಮ ರ‌್ಯಾಂಕ್ ಪಡೆದಿದ್ದಳು. ವಿದ್ಯಾರ್ಥಿನಿಯ ಮೀರಾಕೊರ‌್ನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಸನ್ಮಾನಿಸಿದರು. ಅದೇ ಶಾಲೆಯ ಮತ್ತೊಬ್ಬ ವಿದ್ಯಾರ್ಥಿನಿ ಚಿನ್ಮಯಿ 620(ಶೇ.99) ಅಂಕಗಳಿಸುವ ಮೂಲಕ ಜಿಲ್ಲೆಗೆ ಎರಡನೇ ರ‌್ಯಾಂಕ್ ಪಡೆದಿದ್ದು. ಪಟ್ಟಣದ ಬಸವೇಶ್ವರ ಬಡಾವಣೆಯಲ್ಲಿರುವ ವಿದ್ಯಾರ್ಥಿನಿ ಮನೆಗೆ ಭೇಟಿ ನೀಡಿ ಸನ್ಮಾನಿಸಿದರು.


    ಕನ್ನಡ ಮಾಧ್ಯಮದಲ್ಲಿ ಉತ್ತಮ ಸಾಧನೆ ಮಾಡಿರುವ ತುಂಗಭದ್ರಾ ಪ್ರೌಢಶಾಲೆಯ ವಿದ್ಯಾರ್ಥಿ ಶಿವನಾಗ 606(ಶೇ.97)ಅಂಕಗಳಿಸುವ ಮೂಲಕ ಉತ್ತಮ ಸಾಧನೆ ಮಾಡಿದ್ದಾರೆ. ವಿದ್ಯಾರ್ಥಿಯ ಮುದೇನೂರು ಗ್ರಾಮಕ್ಕೆ ತೆರಳಿ ಸನ್ಮಾನಿಸಿದರು. ಅದೇ ಶಾಲೆಯ ತಿಪ್ಪಾಪುರ ಗ್ರಾಮದ ಮಂಗಳ 569(ಶೇ.91) ಅಂಕಗಳಿಸಿದ್ದು, ವಿದ್ಯಾರ್ಥಿನಿ ಮನೆಗೆ ಭೇಟಿ ನೀಡಿ ಶುಭಾಶಯ ಕೋರಿದರು.

    ಇದನ್ನೂ ಓದಿ: ಹೆಣ್ಣುಮಕ್ಕಳೇ ಟಾಪ್, ಐವರಿಗೆ 625 ಅಂಕ: ಜಿಲ್ಲೆಗೆ ಎ ಗ್ರೇಡ್ ಶ್ರೇಣಿ, ಶೇ. 94.53 ದಾಖಲೆ ಫಲಿತಾಂಶ


    ಬಿಇಓ ಎಸ್.ಎನ್,ಹಳ್ಳಿಗುಡಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಎಸ್ಸೆಸ್ಸೆಲ್ಸಿ ನೋಡಲ್ ಅಧಿಕಾರಿಗಳಾದ ಮಲ್ಲಿಕಾರ್ಜುನ,ಬಿಆರ್‌ಸಿ ಸಚಿನ್ ಆರಾಧ್ಯ, ಮುಖ್ಯಗುರು ಸುರೇಶ ಅಂಗಡಿ, ತಾಲೂಕು ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಕೋಶಾಧ್ಯಕ್ಷ ಕೆ.ಬಸಪ್ಪ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts