ಬೆಂಗಳೂರಿನ ಇಬ್ಬರು ಸೇರಿದಂತೆ 8 BJP ಶಾಸಕರು ಕಾಂಗ್ರೆಸ್ ಸೇರುತ್ತಾರೆ: ST Somashekar

St Somashekar
Published on

ಬೆಂಗಳೂರು: ರಾಜ್ಯದಲ್ಲಿ ಉಪಚುನಾವಣೆಯ ಕಾವು ದಿನ ಕಳೆದಂತೆ ಜೋರಾಗುತ್ತಿದ್ದು, ಬಿಜೆಪಿ-ಜೆಡಿಎಸ್ (BJP-JDS)​, ಕಾಂಗ್ರೆಸ್ (Congress) ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಶಿಗ್ಗಾಂವಿ, ಸಂಡೂರು, ಚನ್ನಪಟ್ಟಣವನ್ನು ಗೆಲ್ಲಲು ಮೂರು ಪಕ್ಷಗಳು ರಣತಂತ್ರ ಹೆಣೆಯುತ್ತಿದ್ದು, ಇದೆಲ್ಲದರ ನಡುವೆ ಯಶವಂತಪುರ ಕ್ಷೇತ್ರದ ಬಿಜೆಪಿ ಶಾಸಕ (BJP MLA) ಎಸ್​.ಟಿ. ಸೋಮಶೇಖರ್​ (ST Somashekar) ನೀಡಿರುವ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನವನ್ನೇ ಸೃಷ್ಟಿಸಿದೆ.

ಬಿಜೆಪಿಯಲ್ಲಿದ್ದ ಸಿ.ಪಿ. ಯೋಗೇಶ್ವರ್ (CP Yogeshwar) ವಿಧಾನಪರಿಷತ್​ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್​ ಸೇರ್ಪಡೆಯಾಗಿ ಚನ್ನಪಟ್ಟಣ ಉಪಚುನಾವಣೆಯಲ್ಲಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಇದರ ನಡುವೆ ಬಿಜೆಪಿಯ 8 ಶಾಸಕರು (BJP Mla's) ಮುಂದಿನ ದಿನಗಳಲ್ಲಿ ಕಾಂಗ್ರೆಸ್​ ಸೇರಲಿದ್ದಾರೆ ಎಂದು ಹೇಳುವ ಮೂಲಕ ಎಸ್​.ಟಿ. ಸೋಮಶೇಖರ್ (ST Somashekar) ರಾಜ್ಯ ರಾಜಕಾರಣದಲ್ಲಿ ಹೊಸ ಬಾಂಬ್​ ಒಂದನ್ನು ಸ್ಫೋಟಿಸಿದ್ದಾರೆ.

ಬೆಂಗಳೂರಿನಲ್ಲಿ ಈ ಕುರಿತು ಮಾತನಾಡಿರುವ ಸೋಮಶೇಖರ್ (ST Somashekar), ಸಿ.ಪಿ. ಯೋಗೇಶ್ವರ್ ಚನ್ನಪಟ್ಟಣ ಟಿಕೆಟ್ ವಿಚಾರವಾಗಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಾರೆ. ಸಿ.ಪಿ. ಯೋಗೇಶ್ವರ್ ಅವರಿಂದ ಚನ್ನಾಗಿ ದುಡಿಸಿಕೊಂಡು ಇದೀಗ ಅವರನ್ನು ಕೈಬಿಟ್ಟಿದ್ದಾರೆ. ವಿಪಕ್ಷ ನಾಯಕ ಆರ್. ಅಶೋಕ್ (R Ashok) ಅವರ ಮಾತು ಕೇಳಬಾರದು. ನನ್ನ ಮೇಲೆ ಯಾವದೇ ಶಿಸ್ತು ಕ್ರಮ ಜರುಗಿಸಿದರೂ ನನಗೆ ಭಯವಿಲ್ಲ. ನೋಡ್ತಾ ಇರಿ ಮುಂದೆ ಬೆಂಗಳೂರಿನ ಇಬ್ಬರು ಶಾಸಕರು ಸೇರಿದಂತೆ ಒಟ್ಟು ಎಂಟು ಬಿಜೆಪಿ ಶಾಸಕರು ಕಾಂಗ್ರೆಸ್ ಸೇರುತ್ತಾರೆ.

ನನಗೆ ನನ್ನ ಕ್ಷೇತ್ರದ ಅಭಿವೃದ್ಧಿಯಾಗಬೇಕು. ಹೀಗಾಗಿ ನಾನು ಬಿಜೆಪಿ ಶಾಸಕನಾಗಿದ್ದರೂ ಅಭಿವೃದ್ಧಿ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗುತ್ತಿರುತ್ತೇನೆ. ಯೋಗೇಶ್ವರ್ ವಿಚಾರದಲ್ಲಿ ಪಕ್ಷ ಈ ರೀತಿ ಮಾಡಬಾರದಿತ್ತು ಎಂದು ಯಶವಂತಪುರದ ಬಿಜೆಪಿ ಶಾಸಕ ಎಸ್​.ಟಿ. ಸೋಮಶೇಖರ್​ (ST Somashekar) ಅಭಿಪ್ರಾಯಪಟ್ಟಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net