More

    ಸಿಬ್ಬಂದಿ ಸಂಭಾವನೆ ಹೆಚ್ಚಿಸಲು ನಿರ್ಣಯ

    ಬೆಳಗಾವಿ: ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗೆ ಶೇ. 10ರಷ್ಟು ಸಂಭಾವನೆ ಹೆಚ್ಚಿಸಲು ಜವಳಿ ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಆಡಳಿತ ಮಂಡಳಿ ಸಭೆ ನಿರ್ಣಯ ಕೈಗೊಂಡಿದೆ.

    ಬೆಂಗಳೂರಿನ ವಿಕಾಸಸೌಧದಲ್ಲಿ ಗುರುವಾರ ಜರುಗಿದ ಜವಳಿ ಮೂಲಸೌಲಭ್ಯ ಅಭಿವೃದ್ಧಿ ನಿಗಮದ 97ನೇ ಆಡಳಿತ ಮಂಡಳಿ ಸಭೆಯಲ್ಲಿ ನಿಗಮದ ಕರಡು ವೃಂದ ಮತ್ತು ನೇಮಕಾತಿ ನಿಯಮ ಹಾಗೂ ಸಿಬ್ಬಂದಿ ನಿಯಂತ್ರಣ ನಿಯಮ ಅನುಮೋದಿಸಿ ಇದನ್ನು ಸರ್ಕಾರಕ್ಕೆ ಸಲ್ಲಿಸಲು ಮತ್ತು ನಿಗಮದ ವಶದಲ್ಲಿರುವ ನಿವೇಶನಗಳಲ್ಲಿ ಮತ್ತು ಭೂಮಿಗಳಲ್ಲಿ ಸೂಕ್ತ ಮೂಲ ಸೌಲಭ್ಯ ಕಲ್ಪಿಸಲು ಸವಿವರ ಯೋಜನಾ ವರದಿ ತಯಾರಿಸುವುದು. ಅನುಮೋದನೆಗಾಗಿ ಸರ್ಕಾರಕ್ಕೆ ಸಲ್ಲಿಸುವುದು ಸೇರಿದಂತೆ ವಿವಿಧ ವಿಷಯಗಳ ಕುರಿತು ಚರ್ಚಿಸಿ ನಿರ್ಣಯ ಕೈಗೊಳ್ಳಲಾಯಿತು.

    ಜವಳಿ ಮೂಲಸೌಲಭ್ಯ ಅಭಿವೃದ್ಧಿ ನಿಗಮದ ನೂತನ ಅಧ್ಯಕ್ಷ ರಾಮು ಅಧ್ಯಕ್ಷತೆ ವಹಿಸಿದ್ದರು. ನಿಗಮದ ಉಪಾಧ್ಯಕ್ಷ ನೀಲಕಂಠ ಮಾಸ್ತಮರ್ಡಿ, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಕುಮಾರ ನಾಯ್ಕರ, ಜವಳಿ ಅಭಿವೃದ್ಧಿ ಆಯುಕ್ತರು ಹಾಗೂ ಕೈಮಗ್ಗ ಮತ್ತು ಜವಳಿ ಇಲಾಖೆ ನಿರ್ದೇಶಕ ಉಪೇಂದ್ರ ಪ್ರತಾಪ ಸಿಂಗ್, ನಿಗಮದ ನಾಮನಿರ್ದೇಶನ ನಿರ್ದೇಶಕ ದಿಲೀಪ, ರಾಜೇಶ, ಮುತ್ತು ರಾಥೋಡ, ಶಿವಾನಂದ ಪಾಟೀಲ, ನಿಗಮದ ವ್ಯವಸ್ಥಾಪಕ ನಿರ್ದೇಶಕ ಜಿ.ಪಿ. ಶ್ರೀನಿವಾಸಮೂರ್ತಿ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts