ಕೇರಳದ ವಯನಾಡ್‌ನಲ್ಲಿ ಭೂಕುಸಿತ; ತಮಿಳುನಾಡಿನಿಂದ 5 ಕೋಟಿ ನೆರವು ಘೋಷಿಸಿದ ಸಿಎಂ ಸ್ಟಾಲಿನ್!

cms
Published on

ವಯನಾಡ್​: ಕೇರಳದ ವಯನಾಡು ಜಿಲ್ಲೆಯ ಮೆಪ್ಪಾಡಿ ಬಳಿ ಇಂದು ಬೆಳಗ್ಗೆ ಗುಡ್ಡ ಕುಸಿದಿದ್ದು ಸತ್ತವರ ಸಂಖ್ಯೆ 84ಕ್ಕೂ ಅಧಿಕ ಎಂದು ತಿಳಿದು ಬಂದಿದ್ದು, ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ. ಅಲ್ಲದೆ, 100ಕ್ಕೂ ಅಧಿಕ ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಇನ್ನೊಂದೆಡೆ ಕೇರಳದಲ್ಲಿ ಸಂಭವಿಸಿದ ಈ ದುರಂತಕ್ಕೆ ನೆರೆಯ ಕರ್ನಾಟಕ ನೆರವಿನ ಹಸ್ತ ಚಾಚಿದೆ.

ಭಾರೀ ಭೂಕುಸಿತದ ಕುರಿತು ಅಘಾತ ವ್ಯಕ್ತಪಡಿಸಿರುವ ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್, ಕೇರಳದ ಜೊತೆ ನಾವು ಇದ್ದೇವೆ. ನಮ್ಮಿಂದ ಸಾಧ್ಯವಾಗುವ ಎಲ್ಲಾ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ.

ಈ ವಿಚಾರವಾಗಿ ಕೇರಳ ಮುಖ್ಯಮಂತ್ರಿ ಪಣರಾಯಿ ವಿಜಯ್​ ಅವರ ಬಳಿ ದೂರವಾಣಿಯಲ್ಲಿ ಮಾತನಾಡಿರುವ ಸ್ಟಾಲಿನ್, ಘಟನಾ ಸ್ಥಳಕ್ಕೆ ರಾಜ್ಯದಿಂದ ತುರ್ತು ರಕ್ಷಣಾ ಪಡೆಯನ್ನು ಕಳುಹಿಸಿ ಕೊಡಲಾಗುವುದು. ಜೊತೆಗೆ ಅಗಯ್ಯ ಸಹಕಾರ ನೀಡುವುದಾಗಿ ಭರವಸೆ ನೀಡಿದ್ದಾರೆ.

ಮೆಪ್ಪಾಡಿ ದುರಂತದ ತಕ್ಷಣದ ಪರಿಹಾರ ಕಾರ್ಯಾಚರಣೆಗೆ 5 ಕೋಟಿ ರೂ. ಬಿಡುಗಡೆ ಮಾಡಲು ಸಂಬಂಧಿಸಿದ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸ್ಟಾಲಿನ್ ಅವರು ಸೂಚಿಸಿರುವುದಾಗಿ ವರದಿಯಾಗಿದೆ.

ತಮಿಳುನಾಡು ಸರ್ಕಾರ ಕಳುಹಿಸಿರುವ ತಂಡದಲ್ಲಿ ಅಗ್ನಿಶಾಮಕ ದಳದ ಮತ್ತು ತುರ್ತು ರಕ್ಷಣಾ ಪಡೆಯ ತಲಾ 20 ಸಿಬ್ಬಂದಿ, ಇದ್ದಾರೆ. ಜೊತೆಗೆ ವೈದ್ಯರು ಮತ್ತು ನರ್ಸ್​ಗಳು ಇದ್ದಾರೆ ಎಂದು ತಿಳಿಸಿದೆ. ರಕ್ಷಣಾ ತಂಡವನ್ನು ಇಬ್ಬರು ಹಿರಿಯ ಐಎಎಸ್ ಅಧಿಕಾರಿಗಳಾದ ಜಿಎಸ್ ಸಮೀರನ್ ಮತ್ತು ಜಾನಿ ಟಾಮ್ ವರ್ಗೀಸ್ ನೇತೃತ್ವ ವಹಿಸಲಿದ್ದಾರೆ.

ನದಿ ಮತ್ತು ಮಣ್ಣಿನಡಿಯಿಂದ ಮೃತದೇಹಗಳನ್ನು ಹೊರ ತೆಗೆಯುವುದು ರಕ್ಷಣಾ ಪಡೆಗಳಿಗೆ ಸವಾಲಿನ ಕೆಲಸವಾಗಿದ್ದು ಸತ್ತವರ ಸಂಖ್ಯೆಯನ್ನು ನಿಖರವಾಗಿ ಹೇಳಲು ಸಾಧ್ಯವಾಗುತ್ತಿಲ್ಲ.

ಭಾರೀ ಭೂಕುಸಿತದ ಹಿನ್ನೆಲೆಯಲ್ಲಿ ಎಲ್ಲಾ ಸರ್ಕಾರಿ ಸಂಸ್ಥೆಗಳು ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್ ಹೇಳಿದ್ದಾರೆ. ಅಗ್ನಿಶಾಮಕ ಇಲಾಖೆ ಅಧಿಕಾರಿಗಳು ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ತಂಡಗಳನ್ನು ಪೀಡಿತ ಪ್ರದೇಶಕ್ಕೆ ನಿಯೋಜಿಸಲಾಗಿದೆ. ಎನ್‌ಡಿಆರ್‌ಎಫ್‌ನ ಹೆಚ್ಚುವರಿ ತಂಡ ವಯನಾಡ್‌ಗೆ ತೆರಳುತ್ತಿದೆ. ಕೇರಳ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಕೆಎಸ್‌ಡಿಎಂಎ) ವಯನಾಡ್‌ಗೆ ತೆರಳಲು ಕಣ್ಣೂರು ರಕ್ಷಣಾ ಭದ್ರತಾ ದಳದ ಎರಡು ತಂಡಗಳಿಗೆ ಸೂಚನೆ ನೀಡಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net