ಸಂಭ್ರಮಾಚರಣೆ ವೇಳೆ ಕಾಲ್ತುಳಿತ ಪ್ರಕರಣ; ಆರ್​ಸಿಬಿಗೆ ಹೈಕೋರ್ಟ್​ನಿಂದ​ ನೋಟಿಸ್ ಜಾರಿ| Rcb

rcb
Published on

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ಸಂಭವಿಸಿ 11 ಜನರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್​​ಸಿಬಿ, ಡಿಎನ್ಎ ಕಂಪನಿ ಹಾಗೂ ಕೆಎಸ್​ಸಿಎಗೆ ಹೈಕೋರ್ಟ್ ನೋಟಿಸ್ ಹೊರಡಿಸಿದೆ.

ಆರ್​ಸಿಬಿ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಸ್ಟೆಡಿಯಂನಲ್ಲಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಸ್ವಯಂ ಪ್ರೇರಿತ ಪಿಐಎಲ್ ದಾಖಲಿಸಿಕೊಂಡಿತ್ತು. ಈ ಅರ್ಜಿ ವಿಚಾರಣೆ ಕೈಗೆತ್ತಿಕೊಂಡಿರುವ ಹೈಕೋರ್ಟ್ ವಿಭಾಗೀಯ ಪೀಠ, ಆರ್​ಸಿಬಿ, ಡಿಎನ್​ಎ ಕಂಪನಿ ಹಾಗೂ ಕೆ ಎಸ್ ಸಿಎಗೆ ನೋಟಿಸ್ ಜಾರಿ ಮಾಡಿದೆ. ಅರ್ಜಿ ವಿಚಾರಣೆಯನ್ನು ಇದೇ ಜೂನ್ 23ಕ್ಕೆ ನಿಗದಿ ಪಡಿಸಿ ಆದೇಶ ಹೊರಡಿಸಿದೆ.

(ಏಜೆನ್ಸೀಸ್)

ಸರ್ಕಾರದ ವಾದ ಕೇಳಿದ ಬಳಿಕ ಹೈಕೋರ್ಟ್, ಮುಚ್ಚಿದ ಲಕೋಟೆ ಬಗ್ಗೆ ತೀರ್ಮಾನ ಮಾಡಲಾಗುವುದು ಎಂದು ವಿಚಾರಣೆಯನ್ನು ಜೂನ್ 23ಕ್ಕೆ ಮುಂದೂಡಿದೆ.

ಈ ಸಂಬಂಧ ರಾಜ್ಯ ಸರ್ಕಾರ ಘಟನೆಗೆ ಸಂಬಂಧಿಸಿದಂತೆ ಈವರೆಗೂ ಕೈಗೊಂಡ ಕ್ರಮದ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಹೈಕೋರ್ಟ್​ಗೆ ಸಲ್ಲಿಕೆ ಮಾಡಿದೆ. ತನಿಖೆ ಇನ್ನೂ ಬಾಕಿಯಿರುವುದರಿಂದ ಪೂರ್ವಾಗ್ರಹವಿರಬಾರದು, ಮೂರನೇ ವ್ಯಕ್ತಿಗಳ ವಿರುದ್ಧ ಅಭಿಪ್ರಾಯವೆಂದು ಭಾವಿಸಬಾರದು. ಹೀಗಾಗಿ ಮುಚ್ಚಿದ ಲಕೋಟೆಯಲ್ಲಿ ವರದಿ ಸಲ್ಲಿಸಲಾಗಿದೆ ಎಂದು ಸರ್ಕಾರದ ಪರ ಅಡ್ವೋಕೇಟ್​ ಜನರಲ್​ ಶಶಿಕಿರಣ್‌ ಶೆಟ್ಟಿ ಹೇಳಿದ್ದಾರೆ.

ಆರ್​ಸಿಬಿ ವಿಜಯೋತ್ಸವ ಕಾರ್ಯಕ್ರಮ ವೀಕ್ಷಿಸಲು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಲಕ್ಷಾಂತರ ಅಭಿಮಾನಿಗಳು ಜಮಾಯಿಸಿದ್ದರು. ಈ ವೇಳೆ ಕಾಲ್ತುಳಿತ ಸಂಭವಿಸಿ 11 ಮಂದಿ ಮೃತಟ್ಟಿದ್ದರು. ಘಟನೆ ಸಂಬಂಧ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿರುವ ಕೋರ್ಟ್​, ಇಂದು ಅರ್ಜಿ ವಿಚಾರಣೆ ನಡೆಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net