More

    ಶ್ರೀ ವಿನಾಯಕ ಕಾನ್ವೆಂಟ್‌ನಲ್ಲಿ ಸ್ಟಾರ್ ಲೈಟ್ ಫೆಸ್ಟಿವಲ್

    ಗುಂಡ್ಲುಪೇಟೆ: ಇತ್ತೀಚೆಗೆ ಬಾಲಾಪರಾಧಿಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಪಾಲಕರು ತಮ್ಮ ಮಕ್ಕಳ ಚಟುವಟಿಕೆಗಳತ್ತ ಗಮನ ಹರಿಸಬೇಕು ಎಂದು ಸರ್ಕಲ್ ಇನ್ಸ್‌ಪೆಕ್ಟರ್ ಪರಶಿವಮೂರ್ತಿ ಸಲಹೆ ನೀಡಿದರು.

    ಪಟ್ಟಣದ ಶ್ರೀ ವಿನಾಯಕ ಕಾನ್ವೆಂಟ್‌ನಲ್ಲಿ ಶನಿವಾರ ಆಯೋಜಿಸಿದ್ದ ಸ್ಟಾರ್ ಲೈಟ್ ಫೆಸ್ಟಿವಲ್ ಕಾರ್ಯಕ್ರಮದಲ್ಲಿ ಮಾತನಾಡಿದರು. ಮಕ್ಕಳ ಮನಸ್ಸು ಕಚ್ಚಾವಸ್ತು ಇದ್ದಂತೆ. ಹಾಗಾಗಿ ಬಾಲ್ಯದಿಂದಲೇ ವಿದ್ಯಾಭ್ಯಾಸದೊಂದಿಗೆ ಶಿಶ್ತು ಹಾಗೂ ಸಂಸ್ಕಾರ ಕಲಿಸಬೇಕಾದ ಅಗತ್ಯವಿದೆ ಎಂದರು.

    ಇತ್ತೀಚಿನ ದಿನಗಳಲ್ಲಿ ಬಾಲಾಪರಾಧ ಹಾಗೂ ಕಾಣೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಅಪರಾಧ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವ ಆತಂಕವಿದೆ. ಆದ್ದರಿಂದ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವ ಜತೆಗೆ ಅಪ್ರಾಪ್ತರ ನಡವಳಿಕೆ ಬಗ್ಗೆ ಗಮನವಿಡಬೇಕಾಗಿದೆ. ಮನೆಗೆ ತಡವಾಗಿ ಬಂದರೆ ಕೇಳುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಹೇಳಿದರು.

    ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ.ಪಿ.ನಾಗಣ್ಣ ಮಾತನಾಡಿ, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಶಿಕ್ಷಣಕ್ಕೆ ಒತ್ತು ನೀಡಬೇಕಿದೆ ಎಂದು ಹೇಳಿದರು.

    ಕನ್ನಡ ಚಳವಳಿಗಾರ ಮೂಗೂರು ನಂಜುಂಡಸ್ವಾಮಿ, ಚಿತ್ರನಟ ಹನುಮಂತೇಗೌಡ, ಬಿಇಒ ರಾಜಶೇಖರ್ ಮಾತನಾಡಿದರು. ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು. ಸಂಸ್ಥೆ ಅಧ್ಯಕ್ಷ ಕೆ.ಎಚ್.ನಂಜಪ್ಪ, ಕಾರ್ಯದರ್ಶಿ ಕೆ.ಎನ್.ಮಹದೇವಸ್ವಾಮಿ, ಚಂದ್ರಶೇಖರ್, ಲಕ್ಷ್ಮೀ ಚಂದ್ರಶೇಖರ್, ಪ್ರಾಂಶುಪಾಲ ಸುಭಾಷ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts