More

    ಮೆಕ್ಕೆಜೋಳ ಖರೀದಿ ಕೇಂದ್ರ ಶೀಘ್ರ ಆರಂಭಿಸಿ

    ಹಿರೇಕೆರೂರ: ಬೆಂಬಲ ಬೆಲೆಯಲ್ಲಿ ಮೆಕ್ಕೆಜೋಳ ಖರೀದಿ ಕೇಂದ್ರವನ್ನು ಪ್ರಾರಂಭಿಸುವುದು ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯ ಕೆ.ಎಸ್. ಪುಟ್ಟಣ್ಣಯ್ಯ ಬಣದ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕು ಘಟಕದ ವತಿಯಿಂದ ಪಟ್ಟಣದಲ್ಲಿ ಸೋಮವಾರ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

    ರೈತ ಸಂಘದ ಜಿಲ್ಲಾ ಅಧ್ಯಕ್ಷ ಆರ್.ವಿ. ಕೆಂಚಳ್ಳೇರ ಮಾತನಾಡಿ, ಈ ವರ್ಷ ಅತಿವೃಷ್ಟಿಯಿಂದ ಮೆಕ್ಕೆಜೋಳ ಇಳುವರಿಯ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗಿದೆ. ಅಳಿದುಳಿದ ಬೆಳೆಗೆ ಬೆಲೆ ಇಲ್ಲದಂತಾಗಿ ರೈತರು ಸಾಲದ ಸುಳಿಗೆ ಸಿಲುಕಿದ್ದಾರೆ. ಕೇಂದ್ರ ಸರ್ಕಾರ ಮೆಕ್ಕೆಜೋಳಕ್ಕೆ 1830 ರೂ. ಬೆಂಬಲ ಬೆಲೆ ನಿಗದಿ ಮಾಡಿದ್ದು, ತಕ್ಷಣ ಸರ್ಕಾರ ಖರೀದಿ ಕೇಂದ್ರ ಪ್ರಾರಂಭಿಸಬೇಕು ಎಂದರು.

    2015-16ರ ಹಿಂಗಾರು ಬೆಳೆ ವಿಮೆ ಮಂಜೂರಾಗಿದ್ದು, ಅದನ್ನು ರೈತರ ಖಾತೆಗಳಿಗೆ ಅಧಿಕಾರಿಗಳು ಜಮಾ ಮಾಡಿಲ್ಲ, ಕೃಷಿ ಅಧಿಕಾರಿಗಳನ್ನು ಕೇಳಿದರೆ ಮಿಸ್ ಮ್ಯಾಚ್ ಆಗಿದೆ ಎನ್ನುತ್ತಾರೆ. ವಿಮಾ ಕಂಪನಿ ಹಾಗೂ ಬ್ಯಾಂಕಿನ ಅಧಿಕಾರಿಗಳು ರೈತರಿಗೆ ತೊಂದರೆ ಕೊಡುತ್ತಿದ್ದು, ಕೂಡಲೆ ರೈತರ ಖಾತೆಗೆ ಬೆಳೆ ವಿಮೆ ಜಮಾ ಮಾಡಬೇಕು ಎಂದು ಆಗ್ರಹಿಸಿದರು.

    ಶಿರಸ್ತೇದಾರ್ ಎಚ್.ಬಿ. ಹತ್ತಿಮತ್ತೂರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

    ರೈತ ಸಂಘದ ತಾಲೂಕು ಘಟಕದ ಅಧ್ಯಕ್ಷ ಪ್ರಭುಗೌಡ ಪ್ಯಾಟಿ, ಶಂಕ್ರಪ್ಪ ಶಿರಗಂಬಿ, ಶಂಭಣ್ಣ ಮುತ್ತಗಿ, ಗಂಗನಗೌಡ ಮುದಿಗೌಡ್ರ, ವೀರನಗೌಡ ಬಾಳಬೀಡ, ಲೋಕಪ್ಪ ಹುಲ್ಲತ್ತಿ, ಮೌನೇಶ ನರಸಾಪುರ, ಮಲ್ಲನಗೌಡ ಮಾಳಗಿ, ಈರಪ್ಪ ಮಳ್ಳೂರು, ಪುಟ್ಟಯ್ಯ ಮಳಲಿಮಠ, ಹನುಮಂತಪ್ಪ ಜೋಗೇರ ಹಾಗೂ ರೈತರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts