More

  ತಾಲೂಕುಗಳಲ್ಲಿ ಜೋಳ ಖರೀದಿ ಕೇಂದ್ರ ಆರಂಭಿಸಿ

  ರಾಯಚೂರು: ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಜೋಳ ಖರೀದಿ ಕೇಂದ್ರಗಳನ್ನು ಆರಂಭಿಸಿ ಬೆಂಬಲ ಬೆಲೆಯಲ್ಲಿ ಜೋಳ ಖರೀದಿಗೆ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿ ಸ್ಥಳೀಯ ಟಿಪ್ಪು ಸುಲ್ತಾನ್ ಉದ್ಯಾನವನದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದಿಂದ ಸೋಮವಾರ ಪ್ರತಿಭಟನೆ ನಡೆಸಲಾಯಿತು.
  ನಂತರ ಜಿಲ್ಲಾಕಾರಿ ಕಚೇರಿ ಕೇಂದ್ರ ಸ್ಥಾನಿಕ ಅಕಾರಿ ಪ್ರಶಾಂತಕುಮಾರಗೆ ಮನವಿ ಸಲ್ಲಿಸಿ, ಹಿಂಗಾರು ಜೋಳ ಖರೀದಿಗೆ ಯಾವುದೇ ನಿರ್ಧಾರ ಮಾಡದಿರುವುದರಿಂದ ರೈತರು ಆತಂಕಕ್ಕೆ ಸಿಲುಕಿದ್ದು, ಶೀಘ್ರದಲ್ಲಿ ಖರೀದಿ ಕೇಂದ್ರ ಆರಂಭಿಸಬೇಕು ಎಂದು ಆಗ್ರಹಿಸಿದರು.
  ಮಾನ್ವಿ ಮತ್ತು ಸಿಂಧನೂರು ತಾಲೂಕುಗಳಲ್ಲಿ ಮಾತ್ರ ಖರೀದಿ ಕೇಂದ್ರ ಪ್ರಾರಂಭಿಸಲಾಗಿದೆ. ಬರದ ನಡುವೆ ರಾಷ್ಟ್ರೀಕೃತ ಬ್ಯಾಂಕ್ ಮತ್ತು ಸಹಕಾರಿ ಬ್ಯಾಂಕ್‌ಗಳು ಒತ್ತಾಯಪೂರ್ವಕವಾಗಿ ಸಾಲ ವಸೂಲಿಗೆ ಮುಂದಾಗಿವೆ. ವೃದ್ಧಾಪ್ಯ, ವಿಧವಾ ವೇತನ, ಉದ್ಯೋಗ ಖಾತ್ರಿ ಕೂಲಿ ಹಣವನ್ನು ಸಾಲದ ಖಾತೆಗೆ ಜಮಾ ಮಾಡಲಾಗುತ್ತಿದೆ.
  ಬರಗಾಲವೆಂದು ಘೋಷಣೆ ಮಾಡಿದ್ದರೂ ಪರಿಹಾರದ ಹಣ ಬಿಡುಗಡೆ ಮಾಡಿಲ್ಲ. ರಾಜ್ಯ ಸರ್ಕಾರ ನೀಡಿರುವ ಎರಡು ಸಾವಿರ ರೂ. ಎಲ್ಲ ರೈತರಿಗೆ ತಲುಪಿಲ್ಲ. ಕೂಡಲೇ ಪರಿಹಾರ ಬಿಡುಗಡೆ ಮಾಡಬೇಕು. ಭೂ ದಾಖಲೆ ಇಲಾಖೆಯಿಂದ ರೈತರಿಗೆ ಆಗುತ್ತಿರುವ ತೊಂದರೆ ನಿವಾರಿಸಬೇಕು.
  ಸಲ್ ಭೀಮಾ ಯೋಜನೆಯಡಿ ಮಾನ್ವಿ, ಸಿರವಾರ, ದೇವದುರ್ಗ ತಾಲೂಕಿನಲ್ಲಿ ನಡೆದಿರುವ ಭ್ರಷ್ಟಾಚಾರ ಕುರಿತು ತನಿಖೆ ನಡೆಸಿ ಅರ್ಹರಿಗೆ ವಿಮಾ ಪರಿಹಾರ ಬಿಡುಗಡೆ ಮಾಡಬೇಕು. ದೇವದುರ್ಗ ತಾಲೂಕಿನ ಬಿ.ಗಣೇಕಲ್ ಗ್ರಾಮದ ರೈತರಿಗೆ ಬಗರ್ ಹುಕುಂ ಸಾಗುವಳಿದಾರರಿಗೆ ಪಟ್ಟಾ ನೀಡಬೇಕು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಮನವಿಯಲ್ಲಿ ಒತ್ತಾಯಿಸಲಾಗಿದೆ.
  ಪ್ರತಿಭಟನೆಯಲ್ಲಿ ಸಂಘದ ರಾಜ್ಯ ಗೌರವಾಧ್ಯಕ್ಷ ಚಾಮರಸ ಮಾಲಿಪಾಟೀಲ್, ಪದಾಕಾರಿಗಳಾದ ಸೂಗೂರಯ್ಯ ಮಠ, ಬೂದೆಯ್ಯ ಸ್ವಾಮಿ, ಮಲ್ಲಣ್ಣ ದಿನ್ನಿ, ಯಂಕಪ್ಪ ಕಾರಬಾರಿ, ದೇವರಾಜ ನಾಯಕ, ಹಾಜಿ ಮಸ್ತಾನ್, ಎಚ್.ಶಂಕ್ರಪ್ಪ, ಮಲ್ಲಣ್ಣ ಗೌಡೂರು, ಶರಣಗೌಡ, ಭ್ರಮ್ಮಯ್ಯ ಆಚಾರಿ, ಬಸವರಾಜ, ದೇವೇಂದ್ರಪ್ಪ ನಾಯಕ, ಬಸವರಾಜ ತಡಕಲ್, ವೀರೇಶ, ಶೇಖರಪ್ಪ, ಉಮಾಪತಿಗೌಡ ಪಾಲ್ಗೊಂಡಿದ್ದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts