More

    ಈ ವರ್ಷದಿಂದಲೇ 1000 ಉಭಯ ಮಾಧ್ಯಮ ಶಾಲೆಗಳ ಪ್ರಾರಂಭ: ಸುರೇಶ್ ಕುಮಾರ್

    ಬೆಂಗಳೂರು: ಜಾಗತಿಕ ನಿರೀಕ್ಷೆಗೆ ತಕ್ಕಂತೆ ಸರ್ಕಾರಿ ಶಾಲೆ ಮಕ್ಕಳನ್ನು ತಯಾರು ಮಾಡಬೇಕು ಮತ್ತು ಸರ್ಕಾರಿ ಶಾಲೆಗಳನ್ನು ಸಬಲೀಕರಣಗೊಳಿಸಿ ಉಳಿಸಿ ಬೆಳೆಸುವ ಉದ್ದೇಶದಿಂದ ಈ ವರ್ಷದಿಂದಲೇ ರಾಜ್ಯದಲ್ಲಿ 1000 ‘ಉಭಯ ಮಾಧ್ಯಮ ಶಾಲೆ’ಗಳನ್ನು ಆರಂಭಿಸಲಾಗುವುದೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್‍ಕುಮಾರ್ ತಿಳಿಸಿದ್ದಾರೆ.

    ಇದನ್ನೂ ಓದಿರಿ ಕಲಬುರಗಿ ಜಿಲ್ಲೆಗೂ ಮಿಡತೆ ಲಗ್ಗೆ ಭೀತಿ

    ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಆಶ್ರಯದಲ್ಲಿ ಬುಧವಾರ ಕಡ್ಡಾಯ ಕನ್ನಡ ಕಲಿಕಾ ವಿಧೇಯಕ-2015ರ ಅನುಷ್ಠಾನದ ಪರಾಮರ್ಶೆ ಕುರಿತು ರಾಜ್ಯದ ಎಲ್ಲ ಡಿಡಿಪಿಐಗಳೊಂದಿಗೆ ನಡೆದ ವಿಡಿಯೋ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ಕನ್ನಡ ಮತ್ತು ಆಂಗ್ಲ ಮಾಧ್ಯಮಗಳೆರಡರಲ್ಲೂ ಬೋಧಿಸುವ 1000 ಉಭಯ ಮಾಧ್ಯಮ ಶಾಲೆಗಳನ್ನು ಆರಂಭಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು.

    ಇದನ್ನೂ ಓದಿರಿ FACT CHECK: ಮುನ್ನೂರು ಮುಸ್ಲಿಮರ ಮನೆಗಳ ಸುಟ್ಟಿದ್ಯಾರು? ಇಲ್ಲಿದೆ ನೋಡಿ ಅಸಲಿಯತ್ತು!

    ಈ ಶಾಲೆಗಳಲ್ಲಿ ಬಳಸಲಾಗುವ ಪಠ್ಯಪುಸ್ತಕಗಳಲ್ಲಿ ಕನ್ನಡ ಮತ್ತು ಆಂಗ್ಲ ಮಾಧ್ಯಮಗಳೆರಡರಲ್ಲೂ ಪಠ್ಯಗಳು ಇರುತ್ತವೆ. ಹಾಗೆಯೇ ಎರಡೂ ಮಾಧ್ಯಮಗಳಲ್ಲೂ ಬೋಧಿಸಲಾಗುತ್ತದೆ. ಆ ಮೂಲಕ ನಮ್ಮ ಮಕ್ಕಳು ಉಭಯ ಮಾಧ್ಯಮಗಳಲ್ಲಿ ಕಲಿತು ಜಾಗತಿಕ ನಿರೀಕ್ಷೆಗೆ ತಕ್ಕಂತೆ ಬೆಳವಣಿಗೆ ಹೊಂದಲು ಎಲ್ಲ ರೀತಿಯ ಕ್ರಮಗಳನ್ನೂ ಕೈಗೊಳ್ಳಲಾಗುತ್ತದೆ ಹಾಗೂ ಸರ್ಕಾರಿ ಶಾಲೆಗಳನ್ನು ಸಬಲೀಕರಣಗೊಳಿಸುವ ಉಪಕ್ರಮಕ್ಕೆ ಸಾರ್ವಜನಿಕರ ಬೆಂಬಲ ಮತ್ತು ಸಹಕಾರದ ಅಗತ್ಯವಿದೆ ಎಂದು ಸಚಿವರು ತಿಳಿಸಿದರು.

    ಇದನ್ನೂ ಓದಿರಿ VIDEO/ ಕೊಹ್ಲಿ ವರ್ಕೌಟ್​ಗೆ ಅಭಿಮಾನಿಗಳು ಫುಲ್​ ಫಿದಾ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts